ಕರ್ನಾಟಕದಲ್ಲಿ 7339 ಹೊಸ ಕೋವಿಡ್ ಪ್ರಕರಣ ದಾಖಲು

ಬೆಂಗಳೂರು, ಸೆಪ್ಟೆಂಬರ್ 21 : ಕರ್ನಾಟಕದಲ್ಲಿ ಸೋಮವಾರ 7,339 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ರಾಜ್ಯ 4ನೇ ಸ್ಥಾನದಲ್ಲಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. 7,339 ಹೊಸ ಪ್ರಕರಣಗಳೊಂದಿಗೆ ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 5,26,876ಕ್ಕೆ ಏರಿಕೆಯಾಗಿದೆ.

122 ಜನರು ಕರ್ನಾಟಕದಲ್ಲಿ ಇಂದು ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ. 9925 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ಕರ್ನಾಟಕದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 95,335.

ರಾಜ್ಯದಲ್ಲಿ ಇದುವರೆಗೂ ಕೋವಿಡ್ ಸೋಂಕಿನಿಂದಾಗಿ 8,145 ಜನರು ಮೃತಪಟ್ಟಿದ್ದಾರೆ. ಇದುವರೆಗೂ ಗುಣಮುಖರಾದವರ ಸಂಖ್ಯೆ 423377. ಐಸಿಯುನಲ್ಲಿ 809 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಬೆಂಗಳೂರಿನ ಕೋವಿಡ್ ವರದಿ

ಬೆಂಗಳೂರಿನ ಕೋವಿಡ್ ವರದಿ

ಬೆಂಗಳೂರು ನಗರದಲ್ಲಿ ಸೋಮವಾರ 2,886 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 197646ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 32 ಜನರು ಮೃತಪಟ್ಟಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 41072.

ಕರ್ನಾಟಕ 4ನೇ ಸ್ಥಾನದಲ್ಲಿ

ಕರ್ನಾಟಕ 4ನೇ ಸ್ಥಾನದಲ್ಲಿ

ಕರ್ನಾಟಕದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 5,26,876ಕ್ಕೆ ಏರಿಕೆಯಾಗಿದೆ ಈ ಮೂಲಕ ಭಾರತದಲ್ಲಿ ಅತಿ ಹೆಚ್ಚು ಸೋಂಕಿತರು ಇರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತಮಿಳುನಾಡು ಮೊದಲ ಮೂರು ಸ್ಥಾನದಲ್ಲಿವೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?

ಕರ್ನಾಟಕದಲ್ಲಿ ಸೋಮವಾರ ಚಿತ್ರದುರ್ಗದಲ್ಲಿ 326, ದಕ್ಷಿಣ ಕನ್ನಡದಲ್ಲಿ 233, ಹಾಸನದಲ್ಲಿ 268, ಶಿವಮೊಗ್ಗದಲ್ಲಿ 348, ತುಮಕೂರು 300, ಉಡುಪಿಯಲ್ಲಿ 231 ಹೊಸ ಪ್ರಕರಣಗಳು ದಾಖಲಾಗಿವೆ.

Recommended Video

    Corona ಲಸಿಕೆ ಭಾರತದಲ್ಲಿ ಉತ್ಪಾದನೆ ಆದ ಬಳಿಕ ಇರುವ ಸವಾಲುಗಳೇನು ? | Oneindia Kannada
    ಪರೀಕ್ಷೆ ಮಾಡಿದ ವರದಿ

    ಪರೀಕ್ಷೆ ಮಾಡಿದ ವರದಿ

    ಇಂದು ರಾಜ್ಯಾದ್ಯಂತ 11154 ರ‍್ಯಾಪಿಡ್‌ ಆಂಟಿಜನ್ ಟೆಸ್ಟ್, 31537 ಆರ್‌ ಟಿ ಪಿಸಿಆರ್ ಪರೀಕ್ಷೆಗಳು ಸೇರಿ 42,691 ಪರೀಕ್ಷೆಗಳನ್ನು ನಡೆಸಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+