ಕರ್ನಾಟಕದಲ್ಲಿ ಒಂದೇ ದಿನ 7345 ಮಂದಿಗೆ ಕೊರೊನಾವೈರಸ್

ಬೆಂಗಳೂರು, ಮೇ 16: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗದಲ್ಲಿ ಸ್ಥಿರತೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 7345 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾವೈರಸ್ ಹೊಸ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಹೆಚ್ಚಾಗಿದೆ. ಒಂದು ದಿನದಲ್ಲಿ 17913 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 148 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

ಬುಧವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2784355ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ 33296 ಜನರು ಪ್ರಾಣ ಬಿಟ್ಟಿದ್ದು, ಈವರೆಗೂ 2599472 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ 151566 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

7345 New Coronavirus Cases Reported in Karnataka Today, State Tally Rise to 2784355

ಬೆಂಗಳೂರಿನಲ್ಲಿ 1,600ರ ಗಡಿ ದಾಟಿದ ಕೊರೊನಾ ಸಂಖ್ಯೆ

ಸಿಲಿಕಾನ್ ಸಿಟಿಯಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ 1,600ರ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 1611 ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1200754ಕ್ಕೆ ಏರಿಕೆಯಾಗಿದೆ. 16 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15354ಕ್ಕೆ ಏರಿಕೆಯಾಗಿದೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಒಟ್ಟು 7345 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ - 47, ಬಳ್ಳಾರಿ 183, ಬೆಳಗಾವಿ 254, ಬೆಂಗಳೂರು ಗ್ರಾಮಾಂತರ 275, ಬೆಂಗಳೂರು 1611, ಬೀದರ್14, ಚಾಮರಾಜನಗರ 97, ಚಿಕ್ಕಬಳ್ಳಾಪುರ 145, ಚಿಕ್ಕಮಗಳೂರು 254, ಚಿತ್ರದುರ್ಗ 95, ದಕ್ಷಿಣ ಕನ್ನಡ 790, ದಾವಣಗೆರೆ 207, ಧಾರವಾಡ 112, ಗದಗ 52, ಹಾಸನ 531, ಹಾವೇರಿ 27, ಕಲಬುರಗಿ 26, ಕೊಡಗು 116, ಕೋಲಾರ 102, ಕೊಪ್ಪಳ 77, ಮಂಡ್ಯ 317, ಮೈಸೂರು 841, ರಾಯಚೂರು 22, ರಾಮನಗರ 58, ಶಿವಮೊಗ್ಗ 262, ತುಮಕೂರು 347, ಉಡುಪಿ 159, ಉತ್ತರ ಕನ್ನಡ 239, ವಿಜಯಪುರ 73, ಯಾದಗಿರಿ 12 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+