ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದೆಲ್ಲೆಡೆ 74ನೇ ಸ್ವಾತಂತ್ರ್ಯ ಭಾರತದ ಸಂಭ್ರಮ...

By Lekhaka
|
Google Oneindia Kannada News

ಬೆಂಗಳೂರು, ಆಗಸ್ಟ್ 15: ಭಾರತದ ಸ್ವಾತಂತ್ರ್ಯ ಸಂಭ್ರಮಕ್ಕೀಗ 74ನೇ ವರುಷ. ಈ ಬಾರಿ ಕೊರೊನಾ ಸೋಂಕಿನ ಕಾರಣದಿಂದಾಗಿ ಸ್ವಾತಂತ್ರ್ಯ ಸಂಭ್ರಮ ಕಳೆಗುಂದಿದರೂ ಕೆಲವು ನಿಯಮಗಳ ಪಾಲನೆಯೊಂದಿಗೆ, ದೇಶದೆಲ್ಲೆಡೆ "ಸ್ವಾವಲಂಬಿ ಭಾರತ" ಎಂಬ ಧ್ಯೇಯವಾಕ್ಯದೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುತ್ತಿದೆ.

Recommended Video

ವಿಭಿನ್ನ ರೀತಿಯಲ್ಲಿ ಸ್ವಾತಂತ್ರೋತ್ಸವ | Oneindia Kannada

ಶಾಲೆಗಳಲ್ಲಿ ಮಕ್ಕಳ ಸ್ವಾತಂತ್ರ್ಯ ದಿನಾಚರಣೆಗೆ ಈ ಬಾರಿ ಬ್ರೇಕ್ ಬಿದ್ದಿದೆ. ಸಾರ್ವಜನಿಕರೂ ಗುಂಪು ಸೇರದೆ ಆಚರಣೆ ನಡೆಸುತ್ತಿರುವುದು ಇದೇ ಮೊದಲಾಗಿದೆ. ಎಲ್ಲೆಲ್ಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೀಮಿತ ಸಂಖ್ಯೆಯಲ್ಲಿ ಮಾತ್ರ ಜನರನ್ನು ಕಾರ್ಯಕ್ರಮಕ್ಕೆ ಸೇರಿಸಲಾಗಿದೆ. ಕೆಲವೇ ಮಂದಿಗಳ ಸಮ್ಮುಖದಲ್ಲಿ ಸ್ವತಂತ್ರ್ಯ ದಿನದ ಸಂಭ್ರಮವನ್ನು ಮೆಲುಕು ಹಾಕಲಾಗುತ್ತಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲೂ ಸ್ವಾತಂತ್ರ್ಯೋತ್ಸವದ ಆಚರಣೆ ನಡೆಯುತ್ತಿದೆ. ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ದಿನದ ಆಚರಣೆ ಹೇಗಿದೆ? ಇಲ್ಲಿದೆ ಪುಟ್ಟ ವರದಿ...

ಶೌರ್ಯಕ್ಕೆ ಹೆಸರಾದ ಕೋಟೆನಾಡಿನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವಶೌರ್ಯಕ್ಕೆ ಹೆಸರಾದ ಕೋಟೆನಾಡಿನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

 ರಾಮನಗರದಲ್ಲಿ ಸರಳ ಸ್ವಾತಂತ್ರ್ಯ ದಿನಾಚರಣೆ

ರಾಮನಗರದಲ್ಲಿ ಸರಳ ಸ್ವಾತಂತ್ರ್ಯ ದಿನಾಚರಣೆ

ಕೊರೊನಾ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಜಿಲ್ಲಾಡಳಿತವು ಸರಳವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಹಮ್ಮಿಕೊಂಡಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಅಶ್ವಥ್ ನಾರಾಯಣ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಬಾರಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ರದ್ದಾಗಿದ್ದು, ಸಾರ್ವಜನಿಕರು ಸಹ ಹೆಚ್ಚಾಗಿ ಭಾಗಿಯಾಗಿಲ್ಲ. ಪೊಲೀಸ್ ಇಲಾಖೆಯ ಅಧಿಕಾರಿಗಳು, ಜಿಲ್ಲಾಡಳಿತದ ಅಧಿಕಾರಿಗಳು, ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಎಸ್ಪಿ ಅನೂಪ್ ಎ ಶೆಟ್ಟಿ, ಸಿಇಓ ಇಕ್ರಂ ಖಾನ್ ಸೇರಿ ಹಲವರು ಆಚರಣೆಯಲ್ಲಿ ಭಾಗಿಯಾಗಿದ್ದರು.

 ಶೌರ್ಯಕ್ಕೆ ಹೆಸರಾದ ಕೋಟೆನಾಡಿನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

ಶೌರ್ಯಕ್ಕೆ ಹೆಸರಾದ ಕೋಟೆನಾಡಿನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

ಕೋಟೆನಾಡಿನಲ್ಲಿ 74ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ನಡೆಯುತ್ತಿದೆ. ಚಿತ್ರದುರ್ಗದ ಪೊಲೀಸ್ ಕವಾಯತು ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಲಾಗಿದೆ. ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿ ಕವಿತಾ ಎಸ್.ಮನ್ನಿಕೇರಿ ಅವರು ಧ್ವಜಾರೋಹಣ ನೆರವೇರಿಸಿದರು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸ್ವಾತಂತ್ರೋತ್ಸವ ಆಚರಣೆ ಮಾಡಲಾಗುತ್ತಿದ್ದು, ಕೆಲವೇ ಮಂದಿ ಭಾಗವಹಿಸಿದ್ದರು. ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಕೊರೊನಾ ವಾರಿಯರ್ ಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

PM Modi's Independence Day Speech Highlights: ಹೆಲ್ತ್‌ಕಾರ್ಡ್, ಶೀಘ್ರದಲ್ಲೇ ಕೊರೊನಾಗೆ ತ್ರಿವಳಿ ಲಸಿಕೆPM Modi's Independence Day Speech Highlights: ಹೆಲ್ತ್‌ಕಾರ್ಡ್, ಶೀಘ್ರದಲ್ಲೇ ಕೊರೊನಾಗೆ ತ್ರಿವಳಿ ಲಸಿಕೆ

 ತುಂತುರು ಮಳೆಯಲ್ಲೇ ಧ್ವಜಾರೋಹಣ ನೆರವೇರಿಸಿದ ಸಚಿವ ಜಾರಕಿಹೊಳಿ

ತುಂತುರು ಮಳೆಯಲ್ಲೇ ಧ್ವಜಾರೋಹಣ ನೆರವೇರಿಸಿದ ಸಚಿವ ಜಾರಕಿಹೊಳಿ

ಕುಂದಾನಗರಿ ಬೆಳಗಾವಿಯಲ್ಲಿ ಸುರಿಯುತ್ತಿರುವ ತುಂತುರು ಮಳೆ ಮಧ್ಯೆಯೇ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಧ್ವಜಾರೋಹಣ ನೆರವೇರಿಸಿದರು. ಬೆಳಗಾವಿ ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಜರುಗಿತು. ಧ್ವಜಾರೋಹಣ ಬಳಿಕ ಸಚಿವ ಜಾರಕಿಹೊಳಿ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ನಾಗರಿಕ ಪೊಲೀಸ್ ತುಕಡಿ, ಗೃಹರಕ್ಷಕ ದಳ, ಅಗ್ನಿಶಾಮಕ ದಳ ಸೇರಿ 11 ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಮಳೆ ಮಧ್ಯೆಯೇ ತೆರೆದ ವಾಹನದಲ್ಲಿ ಸಚಿವರು ತೆರಳಿ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಸ್ವಾತಂತ್ರ್ಯ ದಿನ ಸಂದೇಶ ನೀಡಿದರು. ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಹಾಜರಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ‌ಸಾರ್ವಜನಿಕರು ಸೇರಿರಲಿಲ್ಲ. ಜಿಲ್ಲಾಧಿಕಾರಿ ಕಚೇರಿ, ಮಹಾನಗರ ಪಾಲಿಕೆ, ಜಿಲ್ಲಾ ಕೋರ್ಟ್ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

 ಕಾಫಿ ನಾಡಲ್ಲಿ ಸ್ವಾತಂತ್ರ್ಯದ ಸಡಗರ

ಕಾಫಿ ನಾಡಲ್ಲಿ ಸ್ವಾತಂತ್ರ್ಯದ ಸಡಗರ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಅವರು ದ್ವಜಾರೋಹಣ ನೆರವೇರಿಸಿದರು. ನಗರದ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸರಳವಾಗಿ ಆಚರಣೆ ನಡೆಯಿತು. ಪೊಲೀಸ್, ಗೃಹರಕ್ಷಕ ದಳದಿಂದ ಪಥಸಂಚಲನೆ ನಡೆಸಲಾಯಿತು. ಈ ಬಾರಿ ಕೆಲವೇ ಕಾರ್ಯಕ್ರಮಗಳನ್ನು ಸೀಮಿತಗೊಳಿಸಲಾಗಿತ್ತು.

ಇದೇ ಸಂದರ್ಭ ನೆರೆ ನಿವಾರಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂಬ ಆರೋಪ ಹಿನ್ನೆಲೆ ಜಿಲ್ಲಾಡಳಿತ ಆಯೋಜಿಸಿರುವ ಸ್ವಾತಂತ್ರ್ಯ ದಿನಾಚರಣೆ ಬಹಿಷ್ಕರಿಸಿ ನಗರದ ಗಾಂಧಿ ಪ್ರತಿಮೆ ಎದುರು ವಿಧಾನ ಪರಿಷತ್ ಸದಸ್ಯ ಎಸ್. ಎಲ್ ಭೋಜೇಗೌಡ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ನಡೆಯಿತು. ಧರಣಿಗೆ ಹಲವು ಪ್ರಗತಿ ಪರ ಸಂಘಟನೆಗಳು ಸಾಥ್ ನೀಡಿದವು.
ದಾವಣಗೆರೆಯಲ್ಲಿ ಕೊರೊನಾ ವಾರಿಯರ್ ಗಳಿಗೆ ಸನ್ಮಾನ

ದಾವಣಗೆರೆಯಲ್ಲಿ ಕೊರೊನಾ ವಾರಿಯರ್ ಗಳಿಗೆ ಸನ್ಮಾನ

ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಅವರು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಬೆಳಿಗ್ಗೆ ರಾಷ್ಟ್ರ ಧ್ವಜಾರೋಹಣ ಮಾಡಿದರು. ಪಥಸಂಚಲನ, ಸ್ವಾತಂತ್ರ್ಯ ದಿನಾಚರಣೆ ಸಂದೇಶ ಹಾಗೂ ಸಾಮೂಹಿಕ ಕವಾಯತು ನಡೆಯಿತು. ಜಿಲ್ಲೆಯ ಕೊವಿಡ್ ವಾರಿಯರ್ ಗಳಿಗೆ ಸನ್ಮಾನ ಹಾಗೂ ವಿಕಲ ಚೇತನರಿಗೆ ವಾಹನ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಎಸ್. ಎ.ರವೀಂದ್ರನಾಥ ವಹಿಸಿದ್ದರು. ಸಂಸದ ಜಿ.ಎಂ.ಸಿದ್ದೇಶ್ವರ, ಜಿಲ್ಲೆಯ ಹಲವು ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

ಉತ್ತರ ಕನ್ನಡ; ಸಚಿವರಿಂದ ಅಭಿವೃದ್ಧಿಯ ಸಂಕಲ್ಪ

ಉತ್ತರ ಕನ್ನಡ; ಸಚಿವರಿಂದ ಅಭಿವೃದ್ಧಿಯ ಸಂಕಲ್ಪ

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ, ಇದೇ ಮೊದಲ ಬಾರಿಗೆ ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವರೂ ಆಗಿರುವ ಶಿವರಾಮ ಹೆಬ್ಬಾರ್ ಅವರು ಜಿಲ್ಲಾ ಕೇಂದ್ರ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಕವಾಯತು ತಂಡಗಳಿಂದ ಧ್ವಜವಂದನೆ ಸ್ವೀಕರಿಸಿ ಮಾತನಾಡಿದರು. "ದೇಶಕ್ಕೆ ಅನ್ನ ನೀಡುವ ಅನ್ನದಾತರಿಗೆ ಸಮೃದ್ಧಿ ಜೀವನವನ್ನ ರೂಪಿಸುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ. ಜಿಲ್ಲೆಯ ಕರಾವಳಿ ಪ್ರದೇಶ ಸುಮಾರು 145 ಕಿ.ಮೀ ವಿಶಾಲತೆ ಹೊಂದಿದ್ದು, ಈ ಜಿಲ್ಲೆಯ ಮೀನುಗಾರಿಕೆ ಮತ್ತು ಬಂದರುಗಳ ಅಭಿವೃದ್ಧಿ ಪಡಿಸಲು ವಿಶೇಷ ಪ್ರಯತ್ನ ನಡೆಸಲಾಗುವುದು ಎಂದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಹಕಾರದಿಂದ ಜಿಲ್ಲಾ ಉಸ್ತುವಾರಿ ಸಚಿವನಾಗಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಈ ಜಿಲ್ಲೆಯ ಅಭಿವೃದ್ಧಿಯನ್ನು ನೆರವೇರಿಸಲು ರಾಜ್ಯ ಮತ್ತು ರಾಷ್ಟ್ರ, ಜಿಲ್ಲೆಯ ಸಮೃದ್ಧಿಯಾಗಿಸಲು ಸಂಕಲ್ಪ ಮಾಡೋಣ ಎಂದರು.

ಈಸೂರಿನ ಸ್ವಾತಂತ್ರ್ಯ ಚಳವಳಿಯ ಮೆಲುಕು

ಈಸೂರಿನ ಸ್ವಾತಂತ್ರ್ಯ ಚಳವಳಿಯ ಮೆಲುಕು

ಶಿವಮೊಗ್ಗದ ಪೊಲೀಸ್ ಪೆರೇಡ್ ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಸ್ವಾತಂತ್ರೊತ್ಸವ ಆಚರಣೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಕೊರೊನಾ ವಿರುದ್ಧದ ಹೋರಾಟದಲ್ಲಿ ಸಕ್ರಿಯರಾಗಿ ಭಾಗವಹಿಸಿದ ಕೊರೊನಾ ವಾರಿಯರ್ ಗಳಿಗೆ ವಿಶೇಷ ಅಭಿನಂದನೆ ಸಲ್ಲಿಸಿದರು. ಸ್ವಾಂತಂತ್ರ್ಯೋತ್ಸವದ ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಈಸೂರು ಗ್ರಾಮದ ಚಳವಳಿಯನ್ನು ನೆನಪಿಸಿಕೊಂಡರು.

ಸಾಂಸ್ಕೃತಿಕ ನಗರಿಯಲ್ಲಿ ಸ್ವಾತಂತ್ರ್ಯೋತ್ಸವ

ಸಾಂಸ್ಕೃತಿಕ ನಗರಿಯಲ್ಲಿ ಸ್ವಾತಂತ್ರ್ಯೋತ್ಸವ

ಮೈಸೂರಿನ ಬನ್ನಿ ಮಂಟಪದ ಕವಾಯತು ಮೈದಾನದಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಗೌರವ ವಂದನೆ ಸ್ವೀಕರಿಸಿ, ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಧ್ವಜಾರೋಹಣ ನೆರವೇರಿಸಿದರು. ನಂತರ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಿ, ಅಭಿವೃದ್ಧಿ ವಿಚಾರದಲ್ಲಿ ಮೈಸೂರು ಜಿಲ್ಲೆ ಕರ್ನಾಟಕವೇ ಹೆಮ್ಮೆ ಪಡುವಂತಹ ಜಿಲ್ಲೆ. ಸ್ವಾತಂತ್ರ ಪೂರ್ವದಲ್ಲಿ ಮೈಸೂರಿನಲ್ಲಿ ಆಳ್ವಿಕೆ ನಡೆಸಿದ ಮಹಾರಾಜರ ಅಭಿವೃದ್ಧಿ ಕಾರ್ಯಗಳಿಂದಾಗಿ ಮೈಸೂರು ಜಿಲ್ಲೆ ರಾಜ್ಯದಲ್ಲಿ ಮಾತ್ರವಲ್ಲ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಹೆಸರುವಾಸಿಯಾಗಿದೆ ಎಂದರು.

ಉಡುಪಿ: ಉಸ್ತುವಾರಿ ಸಚಿವರ ಗೈರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಉಸ್ತುವಾರಿ ಸಚಿವರ ಗೈರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಸರಳ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಅಜ್ಜರಕಾಡು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಧ್ವಜಾರೋಹಣ ನೆರವೇರಿಸಿದರು. ಉಸ್ತುವಾರಿ ಸಚಿವ ಬಸರಾಜ ಬೊಮ್ಮಾಯಿ ಅವರು ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು. ಧ್ವಜಾರೋಹಣದ ಬಳಿಕ ಕೊರೊನಾ ವಾರಿಯರ್ಸ್ ಗಳಿಗೆ ಸನ್ಮಾನ ಮಾಡಲಾಯಿತು. ಉಡುಪಿಯ ಜಾಮಿಯಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಜನಾಬ್ ಮುಹಮ್ಮದ್ ಇಸಾಕ್ ಧ್ವಜಾರೋಹಣ ನೆರವೇರಿಸಿದರು. ಜಾಮಿಯಾ ಮಸೀದಿಯ ಧರ್ಮಗುರು ಮೌಲಾನಾ ರಶೀದ್ ಅಹ್ಮದ್ ನದ್ವಿಯವರು ಸ್ವಾತಂತ್ರ್ಯದ ಮಹತ್ವ, ಇತಿಹಾಸ ನೆನಪಿಸಿದರು. ನೀಲಾವರ ಗೋ ಶಾಲೆಯಲ್ಲಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.

English summary
74th year of Indian independence day celebrated with the motto of "Self-reliant India" throughout the country. How is the celebration in karnataka? Here is a report...,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X