ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹುಷಾರಾಗಿರಿ: ಕರ್ನಾಟಕದಲ್ಲಿ ಒಂದೇ ದಿನ ಅಂಟಿದೆ 750 ಮಂದಿಗೆ ಕೊರೊನಾ ವೈರಸ್!

|
Google Oneindia Kannada News

ಬೆಂಗಳೂರು, ಜೂನ್ 18: ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವುದರಲ್ಲೇ ಅಂಕಿ-ಸಂಖ್ಯೆಗಳಲ್ಲಿ ಏರಿಕೆ ಕಂಡು ಬಂದಿದೆ. ಕೋವಿಡ್-19 ಪಾಸಿಟಿವಿಟಿ ದರವೂ ಹೆಚ್ಚಳವಾಗಿರುವುದು ಸ್ಪಷ್ಟವಾಗಿದೆ.

ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪಾಸಿಟಿವಿಟಿ ದರವು ಶೇ.3.06ರಷ್ಟು ಹೆಚ್ಚಳವಾಗಿದೆ. ಅದೇ ರೀತಿ ಒಂದು ವಾರದಲ್ಲಿ ಕೊರೊನಾ ವೈರಸ್ ಪಾಸಿಟಿವಿಟಿ ದರದಲ್ಲಿ ಶೇ.2.84ರಷ್ಟು ಹೆಚ್ಚಳವಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ನೀವೂ ಎಚ್ಚರಿಕೆ: ಬೆಂಗಳೂರಲ್ಲಿ ಬೆಳೆಯುತಿಹುದು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ!ನೀವೂ ಎಚ್ಚರಿಕೆ: ಬೆಂಗಳೂರಲ್ಲಿ ಬೆಳೆಯುತಿಹುದು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ!

ಕರ್ನಾಟಕದ ಮಟ್ಟಿಗೆ ಕೋವಿಡ್-19 ಸೋಂಕಿತ ಪ್ರಕರಣಗಳು ಏರಿಕೆ ಕಂಡಿದ್ದರೂ, ಬೆಂಗಳೂರು ಹೆಚ್ಚು ಅಪಾಯಕಾರಿ ಎನಿಸಿದೆ. ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಬಹುತೇಕ ಸೋಂಕಿತ ಪ್ರಕರಣಗಳು ಸಿಲಿಕಾನ್ ಸಿಟಿಯಲ್ಲೇ ವರದಿಯಾಗುತ್ತಿವೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಏರಿಳಿತದ ಕುರಿತು ಸಂಪೂರ್ಣ ಮಾಹಿತಿಯನ್ನು ಈ ವರದಿ ಓದಿ.

ರಾಜ್ಯದಲ್ಲಿ ಕೋವಿಡ್19 ಸೋಂಕಿತ ಪ್ರಕರಣಗಳು

ರಾಜ್ಯದಲ್ಲಿ ಕೋವಿಡ್19 ಸೋಂಕಿತ ಪ್ರಕರಣಗಳು

ಕಳೆದ 24 ಗಂಟೆಗಳಲ್ಲೇ 750 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 425 ಸೋಂಕಿತರು ಗುಣಮುಖರಾಗಿದ್ದು, ಯಾವುದೇ ಸಾವಿನ ಪ್ರಕರಣಗಳು ವರದಿಯಾಗಿಲ್ಲ. ಶನಿವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 3960208 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 3915271 ಸೋಂಕಿತರು ಗುಣಮುಖರಾಗಿದ್ದು, 40,070 ಜನರು ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಇದರ ಹೊತರಾಗಿ ರಾಜ್ಯದಲ್ಲಿ 4825 ಸಕ್ರಿಯ ಪ್ರಕರಣಗಳಿವೆ.

750ರಲ್ಲಿ ಬೆಂಗಳೂರಿನಲ್ಲೇ 716 ಪ್ರಕರಣಗಳು ವರದಿ

750ರಲ್ಲಿ ಬೆಂಗಳೂರಿನಲ್ಲೇ 716 ಪ್ರಕರಣಗಳು ವರದಿ

ಕರ್ನಾಟಕದ ಇಡೀ ರಾಜ್ಯದಲ್ಲಿ 750 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ಖಾತ್ರಿಯಾಗಿದ್ದರೆ, ಅದರಲ್ಲಿ 716 ಮಂದಿ ಸೋಂಕಿತರು ಬೆಂಗಳೂರಿನವರೇ ಆಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ 716 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 1795454ಕ್ಕೆ ಏರಿಕೆಯಾಗಿದೆ. ಇದುವರೆಗೂ 1773834 ಸೋಂಕಿತರು ಗುಣಮುಖರಾಗಿದ್ದರೆ, 16966 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ಕೋವಿಡ್-19 ಅಪಾಯ ಇನ್ನೂ ಕಡಿಮೆಯಾಗಿಲ್ಲ ಎನ್ನುವ ಸಂದೇಶ ರವಾನೆಯಾಗಿದೆ.

ಬೆಂಗಳೂರು ಹೊರತಾಗಿ ಇತರೆ ಜಿಲ್ಲೆಗಳಲ್ಲಿ 34 ಪ್ರಕರಣ

ಬೆಂಗಳೂರು ಹೊರತಾಗಿ ಇತರೆ ಜಿಲ್ಲೆಗಳಲ್ಲಿ 34 ಪ್ರಕರಣ

ಕರ್ನಾಟಕದಲ್ಲಿ ವರದಿ ಆಗಿರುವ ಒಟ್ಟು 750 ಕೊರೊನಾ ವೈರಸ್ ಪ್ರಕರಣಗಳಲ್ಲಿ 716 ಪ್ರಕರಣಗಳು ಬೆಂಗಳೂರು ನಗರ ಜಲ್ಲೆಗೆ ಸೇರಿವೆ. ಉಳಿದ 34 ಸೋಂಕಿತ ಪ್ರಕರಣಗಳ ಪೈಕಿ ಬಳ್ಳಾರಿ 2, ಬೆಳಗಾವಿ 2, ದಕ್ಷಿಣ ಕನ್ನಡ 7, ಧಾರವಾಡ 4, ಮೈಸೂರು 8, ಮತ್ತು ಉಡುಪಿ 6 ಕೋವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಅಂಕಿ-ಅಂಶಗಳಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದಲ್ಲಿ ಕೋವಿಡ್-19 ತಪಾಸಣೆ ಮತ್ತು ಲಸಿಕೆ ವಿತರಣೆ

ರಾಜ್ಯದಲ್ಲಿ ಕೋವಿಡ್-19 ತಪಾಸಣೆ ಮತ್ತು ಲಸಿಕೆ ವಿತರಣೆ

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 6323 ಜನರಿಗೆ ರಾಪಿಡ್ ಆಂಟಿಜೆನಿಕ್ ಪರೀಕ್ಷೆ ನಡೆಸಲಾಗಿದೆ. 18146 ಜನರಿಗೆ RT-PCR ತಪಾಸಣೆ ನಡೆಸಲಾಗಿದ್ದು, ಒಂದು ದಿನದಲ್ಲಿ ಒಟ್ಟು 24469 ಮಂದಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ.

ಕರ್ನಾಟಕದಲ್ಲಿ ಈವರೆಗೂ 5,46,95,460 ಜನರಿಗೆ ಮೊದಲ ಡೋಸ್, 5,32,13,798 ಜನರಿಗೆ ಎರಡನೇ ಡೋಸ್ ಮತ್ತು 32,05,851 ಮಂದಿಗೆ ಬೂಸ್ಟರ್ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 11,08,51,808 ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.

English summary
Karnataka Reported 750 Covid-19 Cases in last 24 Hours. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X