ಶಾಕಿಂಗ್ ನ್ಯೂಸ್: ಕರ್ನಾಟಕದಲ್ಲಿ ಒಂದೇ ದಿನ 760 ಮಂದಿಗೆ ಕೊರೊನಾ!
ಬೆಂಗಳೂರು, ಮಾರ್ಚ್.10: ಕರ್ನಾಟಕದಲ್ಲಿ ಮತ್ತೊಮ್ಮೆ ಕೊರೊನಾವೈರಸ್ ಸೋಂಕಿನ ಹಾವಳಿ ಹೆಚ್ಚುವ ಲಕ್ಷಣ ಗೋಚರಿಸುತ್ತಿದೆ. ಬೆಂಗಳೂರು ನಗರ ಒಂದರಲ್ಲೇ 488 ಹೊಸ ಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 760 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 331 ಸೋಂಕಿತರು ಗುಣಮುಖರಾಗಿದ್ದು, ಆರು ಜನರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ.
ಬುಧವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 956801 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 936947 ಸೋಂಕಿತರು ಗುಣಮುಖರಾಗಿದ್ದರೆ, ಇದುವರೆಗೂ 12379 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 7456 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಜಿಲ್ಲಾವಾರು ಕೊರೊನಾವೈರಸ್:
ರಾಜ್ಯದಲ್ಲಿ ಒಟ್ಟು 760 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 2, ಬಳ್ಳಾರಿ 6, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 7, ಬೆಂಗಳೂರು 488, ಬೀದರ್ 15, ಚಾಮರಾಜನಗರ 3, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 0, ಚಿತ್ರದುರ್ಗ 6, ದಕ್ಷಿಣ ಕನ್ನಡ 25, ದಾವಣಗೆರೆ 3, ಧಾರವಾಡ 25, ಗದಗ 1, ಹಾಸನ 4, ಹಾವೇರಿ 1, ಕಲಬುರಗಿ 37, ಕೊಡಗು 6, ಕೋಲಾರ 3, ಕೊಪ್ಪಳ 1, ಮಂಡ್ಯ 4, ಮೈಸೂರು 22, ರಾಯಚೂರು 1, ರಾಮನಗರ 1, ಶಿವಮೊಗ್ಗ 5, ತುಮಕೂರು 36, ಉಡುಪಿ 33, ಉತ್ತರ ಕನ್ನಡ 7, ವಿಜಯಪುರ 6, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.












Click it and Unblock the Notifications