ಕರ್ನಾಟಕದಲ್ಲಿ ಒಂದೇ ದಿನ 12030 ಕೊವಿಡ್-19 ಸೋಂಕಿತರು ಗುಣಮುಖ

ಬೆಂಗಳೂರು, ಅಕ್ಟೋಬರ್.12: ರಾಜ್ಯದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 717915ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲೇ 7606 ಮಂದಿಗೆ ಕೊವಿಡ್-19 ಸೋಂಕು ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕರ್ನಾಟಕದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 70 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 10036ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಕೊರೊನಾವೈರಸ್ ಒಟ್ಟು 717915 ಸೋಂಕಿತ ಪ್ರಕರಣಗಳ ಪೈಕಿ 592084 ಸೋಂಕಿತರು ಗುಣಮುಖರಾಗಿದ್ದಾರೆ. 115776 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ. ಕಳೆದ 24 ಗಂಟೆಗಳಲ್ಲಿ 12030 ಕೊವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

 7606 New Coronavirus Cases Reported in Karnataka Today, State Tally Rise to 717915

ಎಷ್ಟು ಮಂದಿಗೆ ಕೊರೊನಾವೈರಸ್ ಪರೀಕ್ಷೆ?:

ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 23564 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 55193 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 78757 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 60,30,980 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.

ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಎಷ್ಟು ಕೊರೊನಾವೈರಸ್ ಕೇಸ್?:

ರಾಜ್ಯದಲ್ಲಿ ಒಟ್ಟು 7606 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 161, ಬಳ್ಳಾರಿ 142, ಬೆಳಗಾವಿ 444, ಬೆಂಗಳೂರು ಗ್ರಾಮಾಂತರ 113, ಬೆಂಗಳೂರು 3498, ಬೀದರ್ 18, ಚಾಮರಾಜನಗರ 70, ಚಿಕ್ಕಬಳ್ಳಾಪುರ 128, ಚಿಕ್ಕಮಗಳೂರು 162, ಚಿತ್ರದುರ್ಗ 210, ದಕ್ಷಿಣ ಕನ್ನಡ 303, ದಾವಣಗೆರೆ 114, ಧಾರವಾಡ 109, ಗದಗ 26, ಹಾಸನ 278, ಹಾವೇರಿ 50, ಕಲಬುರಗಿ 127, ಕೊಡಗು 65, ಕೋಲಾರ 59, ಕೊಪ್ಪಳ 77, ಮಂಡ್ಯ 124, ಮೈಸೂರು 309, ರಾಯಚೂರು 43, ರಾಮನಗರ 53, ಶಿವಮೊಗ್ಗ 66, ತುಮಕೂರು 264, ಉಡುಪಿ 317, ಉತ್ತರ ಕನ್ನಡ 151, ವಿಜಯಪುರ 91, ಯಾದಗಿರಿ 34 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

      ಹೇಳ್ದೆ ಕೇಳ್ದೆ ಕೊಟ್ರು ನೋಡಿ Ramuluge Shock!! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+