ಕರ್ನಾಟಕದಲ್ಲಿ ಕೊರೊನಾ ಪ್ರಕರಣ ಇಳಿಕೆ: 775 ಮಂದಿಗೆ ವೈರಸ್ ದೃಢ
ಬೆಂಗಳೂರು, ಸೆಪ್ಟೆಂಬರ್ 26: ಕರ್ನಾಟಕದಲ್ಲಿ ಇಂದು ಕೂಡಾ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯು ಇಳಿಕೆ ಕಂಡಿದೆ. ಕಳೆದ ಇಪ್ಪತ್ನಾಲ್ಕು ಗಂಟೆಯಲ್ಲಿ 775 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.54 ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.16 ರಷ್ಟಿದೆ.
ಇದೇ ಅವಧಿಯಲ್ಲಿ 860 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 9 ಮಂದಿ ಕೊರೊನಾವೈರಸ್ ಸೋಂಕಿನಿಂದ ಸಾವನ್ನಪ್ಪಿದ್ದು, ಈವರೆಗೂ 37726 ಮಂದಿ ಈ ಕೊರೊನಾ ವೈರಸ್ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಇನ್ನು ಭಾನುವಾರದ ಅಂಕಿಅಂಶಗಳ ಪ್ರಕಾರ, 775 ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಸೇರಿದಂತೆ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2973395 ಕ್ಕೆ ಏರಿಕೆಯಾಗಿದೆ. ಒಟ್ಟು 2922427 ಸೋಂಕಿತರು ಗುಣಮುಖರಾಗಿದ್ದು, 13213 ಕೋವಿಡ್ ಪ್ರಕರಣಗಳು ಸಕ್ರಿಯವಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಒಟ್ಟು 775 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 3, ಬಳ್ಳಾರಿ 1, ಬೆಳಗಾವಿ 7, ಬೆಂಗಳೂರು ಗ್ರಾಮಾಂತರ 24, ಬೆಂಗಳೂರು 255, ಬೀದರ್ 1, ಚಾಮರಾಜನಗರ 4 ಪ್ರಕರಣಗಳು ದಾಖಲಾಗಿದೆ. ಚಿಕ್ಕಬಳ್ಳಾಪುರ ಶನಿವಾರ 6 ಪ್ರಕರಣಗಳು ದಾಖಲಾಗಿದ್ದು, ಇಂದು ಯಾವುದೇ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿಲ್ಲ.
ಚಿಕ್ಕಮಗಳೂರು 52, ಚಿತ್ರದುರ್ಗ 9, ದಕ್ಷಿಣ ಕನ್ನಡ 99, ದಾವಣಗೆರೆ 2, ಧಾರವಾಡ 2, ಗದಗ 1, ಹಾಸನ 15 ಪ್ರಕರಣಗಳು ದಾಖಲಾಗಿದ್ದು, ಹಾವೇರಿ ಮತ್ತು ಕಲಬುರಗಿಯಲ್ಲಿ ಯಾವುದೇ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿಲ್ಲ. ಇನ್ನು ಕೊಡಗಿನಲ್ಲಿ 55, ಕೋಲಾರ 31 ಪ್ರಕರಣ ದಾಖಲಾಗಿದ್ದು, ಕೊಪ್ಪಳದಲ್ಲಿ ಯಾವುದೇ ಹೊಸ ಪ್ರಕರಣ ದಾಖಲಾಗಿಲ್ಲ. ನಿನ್ನೆಯು ಕೂಡಾ ಕೊಪ್ಪಳದಲ್ಲಿ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಮಂಡ್ಯ 12, ಮೈಸೂರು 81, ರಾಯಚೂರು 1, ರಾಮನಗರ 1, ಶಿವಮೊಗ್ಗ 21, ತುಮಕೂರು 29, ಉಡುಪಿ 40, ಉತ್ತರ ಕನ್ನಡ 28, ವಿಜಯಪುರದಲ್ಲಿ 1 ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದೆ. ಯಾದಗಿರಿಯಲ್ಲಿ ಯಾವುದೇ ಸೋಂಕಿತ ಪ್ರಕರಣಗಳು ದಾಖಲಾಗಿಲ್ಲ.
ರಾಜ್ಯದಲ್ಲಿ ಈವರೆಗೂ 7,63,201 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 6,44,593 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,39,514 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 6,90,250 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,57,55,499 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 91,59,251 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 3,85,27,769 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 1,60,85,191 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.
ಸೆಪ್ಟೆಂಬರ್ 26ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 232,417,914 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,759,566ಕ್ಕೇರಿದೆ. ಒಟ್ಟಾರೆ, 209,038,194 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 18,620,154ಸಕ್ರಿಯ ಪಾಸಿಟಿವ್ 93,482 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 213,797,760 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 28,149 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 33,671,714ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 447,154ಕ್ಕೆ ಏರಿಕೆಯಾಗಿದೆ, 32,916,015ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 25,990 ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಚೇತರಿಕೆ ದರ ಒಟ್ಟಾರೆ 97.68%ಗೆ ಸುಧಾರಣೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
(ಒನ್‌ಇಂಡಿಯಾ ಸುದ್ದಿ)
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications