77th Republic Day: ಸರ್ಕಾರದ ಸಾಧನಗಳೇ ಹೈಲೈಟ್ಸ್; ರಾಜ್ಯ ಸರ್ಕಾರದ ಭಾಷಣ ಯಥಾವತ್ ಓದಿದ ರಾಜ್ಯಪಾಲರು
ಬೆಂಗಳೂರು: ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದಲ್ಲಿ ಜಿ ರಾಮ್ ಜಿಗೆ ವಿರೋಧ ಸೇರಿದಂತೆ 11 ಪ್ಯಾರಾಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಂಶಗಳು ಇದ್ದವು. ಈ ಕಾರಣಕ್ಕಾಗಿ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಪೂರ್ತಿ ಓದದೆ ತೆರಳಿದ್ದರು. ಇದು ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಹಾಗಾಗಿ ರಾಜ್ಯಪಾಲರ ಗಣರಾಜ್ಯೋತ್ಸವದ ಭಾಷಣ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು.
77 ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಜ್ಯಪಾಲರ ಭಾಷಣದಲ್ಲಿ ಒಕ್ಕೂಟ ವ್ಯವಸ್ಥೆಯನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರಕ್ಕೆ ಪರೋಕ್ಷ ಟಾಂಗ್ ನೀಡಲಾಗಿದೆ. ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧದ ಅಂಶಗಳನ್ನು ಉಲ್ಲೇಖಿಸಿಲ್ಲ. ಬದಲಾಗಿ ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ಹೆಚ್ಚಿನ ಅಂಶಗಳನ್ನು ಉಲ್ಲೇಖ ಮಾಡಲಾಗಿದೆ. ಅದಷ್ಟೇ ಅಲ್ಲದೆ, ಒಕ್ಕೂಟ ವ್ಯವಸ್ಥೆಯ ಬಗ್ಗೆ ಪರೋಕ್ಷವಾಗಿ ಉಲ್ಲೇಖ ಮಾಡಲಾಗಿದ್ದು, ಅದನ್ನು ಉಳಿಸುವ ಜವಾಬ್ದಾರಿಯ ಬಗ್ಗೆ ಹೇಳಲಾಗಿದೆ. ಈ ಮೂಲಕ ಪರೋಕ್ಷವಾಗಿ ಟಾಂಗ್ ನೀಡಲಾಗಿದೆ.

ಭಾಷಣದಲ್ಲಿ ಏನಿದೆ?
77 ನೇ ಗಣರಾಜ್ಯೋತ್ಸವದ s ವಿಶೇಷ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ನನ್ನ ಹೃತ್ತೂರ್ವಕ ಶುಭಾಶಯಗಳನ್ನು ಕೋರುತ್ತೇನೆ. ಜನವರಿ 26ನೇ ತಾರೀಖು ಭಾರತದ ಚರಿತ್ರೆಯಲ್ಲಿ ಒಂದು ಅತ್ಯಂತ ನಿರ್ಣಾಯಕ ದಿನ. ಇದು ಸಾವಿರಾರು ವರ್ಷಗಳಿಂದ ರೂಪುಗೊಂಡಿದ್ದ ರಾಜಪ್ರಭುತ್ವ ಹಾಗೂ 17 ನೇ ಶತಮಾನದಿಂದ ಅಸ್ತಿತ್ವಕ್ಕೆ ಬಂದಿದ್ದ ವಸಾಹತುಶಾಹಿ ಆಡಳಿತವನ್ನು ಕೊನೆಗೊಳಿಸಿ ಜನಪ್ರಭುತ್ವವನ್ನು ಪ್ರತಿಷ್ಠಾಪಿಸಿಕೊಂಡ ದಿನ.
ತಾರತಮ್ಯವನ್ನು ಆಧರಿಸಿದ್ದ ವಸಾಹತುಶಾಹಿಯನ್ನು ಹಾಗೂ ಪುರಾತನ ಕಾನೂನುಗಳನ್ನು ಕಿತ್ತೆಸೆದು ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯದ ವಿಚಾರದಲ್ಲಿ ಎಲ್ಲರೂ ಸಮಾನರು ಎನ್ನುವ ನವ ಭಾರತದ ಪರಿಕಲ್ಪನೆಯ ಸಂವಿಧಾನವನ್ನು ಜಾರಿಗೊಳಿಸಿದ ದಿನ. ಗಣತಂತ್ರ ವ್ಯವಸ್ಥೆಯನ್ನು ರೂಪುಗೊಳಿಸಿಕೊಳ್ಳುವುದಕ್ಕಾಗಿ ಅಸಂಖ್ಯಾತ ಜನರು ತ್ಯಾಗ-ಬಲಿದಾನಗಳನ್ನು ಮಾಡಿದ್ದಾರೆ. ಅವರೆಲ್ಲರನ್ನೂ ಈ ಅಮೃತ ಗಳಿಗೆಯಲ್ಲಿ ಗೌರವಪೂರ್ವಕವಾಗಿ ಸ್ಮರಿಸೋಣ.
ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಶತಶತಮಾನಗಳ ಹೋರಾಟ ಮಾಡಿ ನ್ಯಾಯ ಹಾಗೂ ಕಾಲ ಸ್ವಾತಂತ್ರ್ಯವನ್ನು ದಕ್ಕಿಸಿಕೊಟ್ಟಿದ್ದಾರೆ. ನಾವೆಲ್ಲರೂ ನಮ್ಮ ಹಿರಿಯರ ಶ್ರಮ ವ್ಯರ್ಥವಾಗದಂತೆ ಕಾಪಾಡಿಕೊಳ್ಳುವ ಪ್ರತಿಜ್ಞೆ ಮಾಡೋಣ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸ್ವಾತಂತ್ರ್ಯವನ್ನು, ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯವೆಂದು ಮೂರು ಮಾದರಿಗಳಲ್ಲಿ ವ್ಯಾಖ್ಯಾನಿಸಿದ್ದಾರೆ. "ನಾವು ಯಾವುದೇ ಕಾರಣಕ್ಕೂ ರಾಜಕೀಯ ಪ್ರಜಾಪ್ರಭುತ್ವದಿಂದ ಸಂತುಷ್ಟಗೊಳ್ಳಬಾರದು. ನಾವು ನಮ್ಮ ರಾಜಕೀಯ ಪ್ರಜಾಪ್ರಭುತ್ವವನ್ನು ಸಾಮಾಜಿಕ ಪ್ರಜಾಪ್ರಭುತ್ವವಾಗಿಸಬೇಕು.
ಸಾಮಾಜಿಕ ಪ್ರಜಾಪ್ರಭುತ್ವ ಎಂದರೆ, ಸ್ವಾತಂತ್ರ, ಸಮಾನತೆ ಮತ್ತು ಭ್ರಾತೃತ್ವವನ್ನು ಬದುಕಿನ ಸಿದ್ಧಾಂತವಾಗಿ ಗುರುತಿಸಿಕೊಂಡ ಒಂದು ಜೀವನ ಕ್ರಮವಾಗಿದೆ. ಸ್ವಾತಂತ್ರ ಸಮಾನತೆ ಮತ್ತು ಭಾತೃತ್ವದ ನಿಯಮಗಳನ್ನು ಪ್ರತ್ಯೇಕ ಅಂಶಗಳಾಗಿ ಪರಿಗಣಿಸಬಾರದು. ಇವುಗಳಲ್ಲಿ ಒಂದರಿಂದ ಇನ್ನೊಂದನ್ನು ಪ್ರತ್ಯೇಕಿಸಿದರೆ ಅದು ಪ್ರಜಾಪ್ರಭುತ್ವದ ಸೋಲಿಗೆ ಕಾರಣವಾಗುತ್ತದೆ. ಸ್ವಾತಂತ್ರವು ಸಮಾನತೆಯಿಂದ ಪ್ರತ್ಯೇಕವಾಗುವುದಿಲ್ಲ, ಸಮಾನತೆಯು ಸ್ವಾತಂತ್ರದಿಂದ ಪ್ರತ್ಯೇಕವಾಗುವುದಿಲ್ಲ ಅಥವಾ ಸ್ವಾತಂತ್ರ ಮತ್ತು ಸಮಾನತೆಯು ಭಾತೃತ್ವದಿಂದ ಪ್ರತ್ಯೇಕವಾಗುವುದಿಲ್ಲ. ಸಮಾನತೆಯಿಲ್ಲದ ಸ್ವಾತಂತ್ರವು ಹಲವರ ಮೇಲೆ ಕೆಲವರ ಸರ್ವಾಧಿಕಾರವಾಗಿ ಮೆರೆಯುತ್ತದೆ. ಸ್ವಾತಂತ್ರವಿಲ್ಲದ ಸಮಾನತೆಯು ವ್ಯಕ್ತಿಗತ ಕ್ರಿಯಾಶೀಲತೆಯನ್ನು ಅಂತ್ಯಗೊಳಿಸುತ್ತದೆ. ಭಾತೃತ್ವವಿಲ್ಲದಿದ್ದರೆ, ಸ್ವಾತಂತ್ರ ಹಾಗೂ ಸಮಾನತೆಗಳು ಯಾವುದೇ ವಿಷಯದ ಸಹಜ ನಡೆಯಾಗುವುದಿಲ್ಲ ಎಂದಿದ್ದಾರೆ.
ಕರ್ನಾಟಕ ಸರ್ಕಾರವು ಸಂವಿಧಾನವು ಪ್ರಸ್ತಾಪಿಸಿರುವ ಈ ಮೂರೂ ವಿಷಯಗಳನ್ನು ಆದ್ಯತೆಯ ವಿಷಯಗಳನ್ನಾಗಿ ಪರಿಗಣಿಸಿದೆ. ರಾಜ್ಯದ ಪ್ರತಿ ಪ್ರದೇಶ ಹಾಗೂ ಪ್ರತಿ ಸಮುದಾಯಗಳ ಜನರ ಧ್ವನಿಗಳನ್ನು ಆಲಿಸಿ, ಅವುಗಳಿಗೆ ನ್ಯಾಯೋಚಿತ ಪರಿಹಾರ ನೀಡುವ ಕೆಲಸವನ್ನು ಮಾಡುತ್ತಿದೆ. ಸರ್ಕಾರದ ವಿವಿಧ ನೇಮಕಾತಿಗಳಲ್ಲಿ ಅಲಕ್ಷಿತರಿಗೆ ಪ್ರಾಧಾನ್ಯತೆ ನೀಡಲಾಗುತ್ತಿದೆ. ವಿವಿಧ ಜನಸಮುದಾಯಗಳ ಪರಿಸ್ಥಿತಿಗಳನ್ನು ಅರ್ಥ ಮಾಡಿಕೊಳ್ಳಲು ಆಯೋಗಗಳನ್ನು ರಚಿಸಿ ಅವುಗಳ ಶಿಫಾರಸುಗಳನ್ನು ಜಾರಿ ಮಾಡಲಾಗುತ್ತಿದೆ. ಹಾಗೆಯೇ ಪ್ರಾದೇಶಿಕ ಅಸಮಾನತೆಗಳನ್ನು ಹೋಗಲಾಡಿಸಲು ನಿರಂತರವಾಗಿ ಶ್ರಮಿಸಲಾಗುತ್ತಿದೆ. ಇದರ ಮೂಲಕ ಕರ್ನಾಟಕದಲ್ಲಿ ಸಾಮಾಜಿಕ ಹಾಗೂ ರಾಜಕೀಯ ಚೈತನ್ಯ ಉದಯಿಸುತ್ತಿದೆ.
ಸಂವಿಧಾನದ ಮುಖ್ಯ ಆಶಯದಂತೆ ಅತ್ಯಂತ ಹಿಂದುಳಿದವರ ಬಲವರ್ಧನೆಗಾಗಿ ರಾಜ್ಯದ ಜನರಿಗೆ ಆರ್ಥಿಕ ಚೈತನ್ಯ ನೀಡುವುದಕ್ಕಾಗಿ ರಾಜ್ಯವು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಜನ ಕಲ್ಯಾಣಗಳಿಗಾಗಿ ರಾಜ್ಯವು ವರ್ಷಕ್ಕೆ 1.12 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಈವರೆಗೆ 1.13 ಲಕ್ಷ ಕೋಟಿ ರೂ.ಗಳಿಗೂ ಅನುದಾನವನ್ನು ಹೆಚ್ಚಿನ ವಿನಿಯೋಗಿಸಲಾಗಿದೆ. ಇದರ ಪರಿಣಾಮವಾಗಿ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ ಕುಟುಂಬಗಳು ಆರ್ಥಿಕವಾಗಿ ಸಬಲವಾಗುತ್ತಿವೆ ಎಂದು ಹಲವಾರು ಅಧ್ಯಯನಗಳು ಹೇಳಿವೆ.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications