ಕರ್ನಾಟಕದಲ್ಲಿ ಒಂದೇ ದಿನ 783 ಮಂದಿಗೆ ಕೊರೊನಾವೈರಸ್
ಬೆಂಗಳೂರು, ಸೆಪ್ಟೆಂಬರ್ 19: ಕಳೆದ ಎರಡು ದಿನಗಳಿಂದ ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖಗೊಂಡಿದೆ. ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.60ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.04ರಷ್ಟಿದೆ.
ರಾಜ್ಯದಲ್ಲಿ ಒಂದು ದಿನದಲ್ಲಿ 783 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,139 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 16 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37,603 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 29,67,866ಕ್ಕೆ ಏರಿಕೆಯಾಗಿದೆ. ಒಟ್ಟು 29,14,852 ಸೋಂಕಿತರು ಗುಣಮುಖರಾಗಿದ್ದು. 15,383 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಕೊರೊನಾವೈರಸ್ ಸಂಖ್ಯೆ ಏರಿಕೆ:
ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 267 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1243480ಕ್ಕೆ ಏರಿಕೆಯಾಗಿದೆ. 7 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 16089ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7474 ಸಕ್ರಿಯ ಪ್ರಕರಣಗಳಿವೆ. ಸಿಲಿಕಾನ್ ಸಿಟಿಯಲ್ಲಿ ಈವರೆಗೂ ಸೋಂಕು ತಗುಲಿದ 1219916 ಮಂದಿ ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಕೊವಿಡ್-19 ಸೋಂಕಿನ ಪರೀಕ್ಷೆ ಪ್ರಮಾಣ:
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 28,377 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,01,497 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,29,874 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 86,64,821 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,76,08,368 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,62,73,189 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.
ಜಿಲ್ಲಾವಾರು ಕೊರೊನಾವೈರಸ್ ಸೋಂಕಿತ ಪ್ರಕರಣ:
ರಾಜ್ಯದಲ್ಲಿ ಒಟ್ಟು 783 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 15, ಬೆಂಗಳೂರು ಗ್ರಾಮಾಂತರ 9 ಬೆಂಗಳೂರು 267, ಬೀದರ್ 1, ಚಾಮರಾಜನಗರ 4, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 36, ಚಿತ್ರದುರ್ಗ 13, ದಕ್ಷಿಣ ಕನ್ನಡ 97, ದಾವಣಗೆರೆ 6, ಧಾರವಾಡ 2, ಗದಗ 3, ಹಾಸನ 34, ಹಾವೇರಿ 1, ಕಲಬುರಗಿ 3, ಕೊಡಗು 41, ಕೋಲಾರ 2, ಕೊಪ್ಪಳ 0, ಮಂಡ್ಯ 13, ಮೈಸೂರು 69, ರಾಯಚೂರು 0, ರಾಮನಗರ 0, ಶಿವಮೊಗ್ಗ 28, ತುಮಕೂರು 23, ಉಡುಪಿ 82, ಉತ್ತರ ಕನ್ನಡ 29, ವಿಜಯಪುರ 1, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Recommended Video
ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?
ರಾಜ್ಯದಲ್ಲಿ ಈವರೆಗೂ 7,63,098 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 6,36,736 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,39,062 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 6,52,637 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,54,52,236 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 86,53,841 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 3,74,01,455 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 1,45,75,815 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.












Click it and Unblock the Notifications