ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಇಳಿಮುಖ: 787 ಪ್ರಕರಣ

ಬೆಂಗಳೂರು, ಸೆಪ್ಟೆಂಬರ್ 25: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖಗೊಂಡಿದೆ. ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.55ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.39ರಷ್ಟಿದೆ.
ರಾಜ್ಯದಲ್ಲಿ ಒಂದು ದಿನದಲ್ಲಿ 787 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 775 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 11 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37717 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಶನಿವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2972620ಕ್ಕೆ ಏರಿಕೆಯಾಗಿದೆ. ಒಟ್ಟು 2921567 ಸೋಂಕಿತರು ಗುಣಮುಖರಾಗಿದ್ದು. 13307 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

787 New Coronavirus Cases Reported in Karnataka Today, State Tally Rise to 2972620

ಬೆಂಗಳೂರಿನಲ್ಲಿ ಕೊರೊನಾವೈರಸ್ ಸಂಖ್ಯೆ ಏರಿಕೆ:
ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 276 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1245235ಕ್ಕೆ ಏರಿಕೆಯಾಗಿದೆ. 4 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 16129ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7436 ಸಕ್ರಿಯ ಪ್ರಕರಣಗಳಿವೆ. ಸಿಲಿಕಾನ್ ಸಿಟಿಯಲ್ಲಿ ಈವರೆಗೂ ಸೋಂಕು ತಗುಲಿದ 1221669 ಮಂದಿ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಕೊವಿಡ್-19 ಸೋಂಕಿನ ಪರೀಕ್ಷೆ ಪ್ರಮಾಣ:
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 29731 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,11,101 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,40,832 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 88,33,634 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,82,21,534 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,70,55,168 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತ ಪ್ರಕರಣ:
ರಾಜ್ಯದಲ್ಲಿ ಒಟ್ಟು 787 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 22, ಬೆಂಗಳೂರು ಗ್ರಾಮಾಂತರ 17 ಬೆಂಗಳೂರು 276, ಬೀದರ್ 0, ಚಾಮರಾಜನಗರ 6, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 27, ಚಿತ್ರದುರ್ಗ 7, ದಕ್ಷಿಣ ಕನ್ನಡ 127, ದಾವಣಗೆರೆ 1, ಧಾರವಾಡ 6, ಗದಗ 0, ಹಾಸನ 19, ಹಾವೇರಿ 1, ಕಲಬುರಗಿ 1, ಕೊಡಗು 25, ಕೋಲಾರ 22, ಕೊಪ್ಪಳ 0, ಮಂಡ್ಯ 9, ಮೈಸೂರು 65, ರಾಯಚೂರು 1, ರಾಮನಗರ 2, ಶಿವಮೊಗ್ಗ 21, ತುಮಕೂರು 29, ಉಡುಪಿ 68, ಉತ್ತರ ಕನ್ನಡ 27, ವಿಜಯಪುರ 0, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

      ಪಾಕಿಸ್ತಾನದ ಭದ್ರತೆಯ ವಿಚಾರವಾಗಿ ಮಾಡಿದ ಟ್ವೀಟ್ ವೈರಲ್! | Oneindia Kannada

      ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?
      ರಾಜ್ಯದಲ್ಲಿ ಈವರೆಗೂ 7,63,199 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 6,44,346 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,39,511 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 6,88,887 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,57,47,948 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 91,45,925 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 3,84,99,222 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 1,60,36,214 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+