ಕರ್ನಾಟಕ; 7,908 ಹೊಸ ಕೋವಿಡ್ ಪ್ರಕರಣ ದಾಖಲು

ಬೆಂಗಳೂರು, ಆಗಸ್ಟ್ 14 : ಕರ್ನಾಟಕದಲ್ಲಿ ಇಂದು 7,908 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇಂದು ರಾಜ್ಯದಲ್ಲಿ 103 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 80,883ಕ್ಕೆ ಏರಿಕೆಯಾಗಿದೆ.

ಆರೋಗ್ಯ ಇಲಾಖೆ ಶುಕ್ರವಾರದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಇಂದು 56,638 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. 5,257 ಜನರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬೆಂಗಳೂರು ನಗರದಲ್ಲಿ ಶುಕ್ರವಾರ 2,452 ಹೊಸ ಪ್ರಕರಣಗಳು ದಾಖಲಾಗಿವೆ. ನಗರದಲ್ಲಿ ಇಂದು 22 ಜನರು ಮೃತಪಟ್ಟಿದ್ದಾರೆ. 463 ಜನರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಹೆಲ್ತ್ ಬುಲೆಟಿನ್ ಹೇಳಿದೆ.

COVID Cases

ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,11,108ಕ್ಕೆ ಏರಿಕೆಯಾಗಿದೆ. 747 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 3717 ಜನರು ಇದುವರೆಗೂ ರಾಜ್ಯದಲ್ಲಿ ಮೃತಪಟ್ಟಿದ್ದಾರೆ.

ಬೆಂಗಳೂರು ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 84,185ಕ್ಕೆ ಏರಿಕೆಯಾಗಿದೆ. 1360 ಜನರು ಇದುವರೆಗೂ ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 33,432.

ಶುಕ್ರವಾರ ಬಳ್ಳಾರಿಯಲ್ಲಿ 608, ಶಿವಮೊಗ್ಗ 413, ದಾವಣಗೆರೆ 351, ಬೆಳಗಾವಿ 334, ಉಡುಪಿಯಲ್ಲಿ 322 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+