Karnataka 7th pay commission; ಪ್ರೌಢಶಾಲಾ ಶಿಕ್ಷಕರ ಸಭೆ ಕರೆದ ಆಯೋಗ
ಬೆಂಗಳೂರು, ಸೆಪ್ಟೆಂಬರ್ 05; ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಿಸಲು ಮತ್ತು ನೂತನ ವೇತನ ಶ್ರೇಣಿ ರಚನೆ ಇತ್ಯಾದಿಗಳನ್ನು ರೂಪಿಸಲು ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ರಾಜ್ಯ ವೇತನ ಆಯೋಗ ರಚಿದೆ. ಸರ್ಕಾರದ ಪರಿಶೀಲನಾ ಅಂಶಗಳ ಮೇಲೆ ಆಯೋಗ ಕೆಲಸ ಮಾಡುತ್ತಿದೆ.
ಈಗ ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘ (ರಿ)ಕ್ಕೆ ಪತ್ರದ ಮೂಲಕ 7ನೇ ರಾಜ್ಯ ವೇತನ ಆಯೋಗ ಸಭೆಗೆ ಆಹ್ವಾನಿಸಿದೆ. 7ನೇ ರಾಜ್ಯ ವೇತನ ಆಯೋಗದ ಕಾರ್ಯದರ್ಶಿಯಾದ ಹೆಪ್ಸಿಬಾ ರಾಣಿ ಕೊರ್ಲಪಾಟಿ ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.

ಈ ಪತ್ರದಲ್ಲಿ ಸಂಘದ ಮುಖ್ಯಸ್ಥರೊಂದಿಗೆ ಸಂಘದ ಪ್ರತಿಕ್ರಿಯೆ/ ಬೇಡಿಕೆಗಳ ಕುರಿತು ಎಂದು ವಿಷಯ ಪ್ರಸ್ತಾಪಿಸಲಾಗಿದೆ. ದಿನಾಂಕ 6/9/2023ರಂದು ಸಭಾ ಕೊಠಡಿ, 7ನೇ ರಾಜ್ಯ ವೇತನ ಆಯೋಗ, 3ನೇ ಮಹಡಿ, ಹಳೆಯ ಕಲ್ಲು ಕಟ್ಟಡ, ಔಷಧ ನಿಯಂತ್ರಣ ಸಂಕೀರ್ಣ, ಅರಮನೆ ರಸ್ತೆ, ಬೆಂಗಳೂರು ಇಲ್ಲಿ ಮಧ್ಯಾಹ್ನ 2.40ಕ್ಕೆ ಸಭೆಯನ್ನು ಆಯೋಜಿಸಲಾಗಿದೆ.
ಪತ್ರದ ವಿವರಗಳು; ರಾಜ್ಯ ಸರ್ಕಾರವು ಸರ್ಕಾರಿ ನೌಕರರು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು, ಸ್ಥಳೀಯ ಸಂಸ್ಥೆಗಳ ನೌಕರರು ಹಾಗೂ ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳ ವೇತನ, ತುಟ್ಟಿಭತ್ಯೆ ಹಾಗೂ ಇತರ ಸೌಲಭ್ಯಗಳ ಬಗ್ಗೆ ಪರಿಶೀಲಿಸಿ, ಪರಿಷ್ಕರಿಸಿ ಸರ್ಕಾರಕ್ಕೆ ವರದಿ ನೀಡಲು ಸರ್ಕಾರಿ ಆದೇಶ ದಿನಾಂಕ 19/11/2022ರಲ್ಲಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ರಾಜ್ಯ ವೇತನ ಆಯೋಗವನ್ನು ರಚಿಸಿರುವ ಬಗ್ಗೆ ನೆನಪಿಸಲು ಇಚ್ಛಿಸುತ್ತೇನೆ ಎಂದು ತಿಳಿಸಿದೆ.
ಆಯೋಗಕ್ಕೆ ವಹಿಸಲಾಗಿರುವ ಪರಿಶೀಲನಾರ್ಹ ಅಂಶಗಳ ಕುರಿತು ಸಾರ್ವಜನಿಕರು, ಸೇವಾ ಸಂಘಗಳು ಹಾಗೂ ಸರ್ಕಾರಿ ನೌಕರರು, ಸಂಘ ಸಂಸ್ಥೆಗಳಿಂದ ಮುಕ್ತ ಸಲಹೆ, ಅನಿಸಿಕ ಅಲ್ಲದೇ ಇಲಾಖೆಗಳಿಂದ ಮಾಹಿತಿ ಹಾಗೂ ಮುಕ್ತ ಸಲಹೆ ಪಡೆಯುವ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು ಆಯೋಗವು ವಿವಿಧ ಪ್ರಶ್ನಾವಳಿಗಳನ್ನು ರಚಿಸಿ ಕರ್ನಾಟಕ ರಾಜ್ಯಪತ್ರದಲ್ಲಿ ದಿನಾಂಕ 17/01/2023ರಂದು ಪ್ರಕಟಿಸಿರುತ್ತದೆ ಎಂದು ಹೇಳಿದೆ.
ಸದರಿ ಪ್ರಶ್ನಾವಳಿಗಳಿಗೆ ತಮ್ಮ ಸಂಘದ ವತಿಯಿಂದ ಪ್ರತಿಕ್ರಿಯೆಗಳು/ ಉತ್ತರಗಳು/ ಬೇಡಿಕೆಗಳು ಆಯೋಗದಲ್ಲಿ ಸ್ವೀಕೃತಗೊಂಡಿರುತ್ತದೆ. ಈ ಹಿನ್ನೆಲೆಯಲ್ಲಿ, ಆಯೋಗವು ತಮ್ಮ ಸಂಘದ ಬೇಡಿಕೆಗಳು/ ವಿನಂತಿಗಳು/ ಅಭಿಪ್ರಾಯಗಳ ಕುರಿತು ಚರ್ಚಿಸಲು ಇಚ್ಛಿಸುತ್ತದೆ.
ಈ ಹಿನ್ನಲೆಯಲ್ಲಿ ದಿನಾಂಕ 6/9/2023ರ ಬುಧವಾರ ಸಭೆಯನ್ನು ಆಯೋಜಿಸಲಾಗಿದೆ. ಸದರಿ ಸಭೆಗೆ ತಮ್ಮ ಸಂಘದ ವತಿಯಿಂದ ಈ ಕೆಳಕಂಡ ಅಂಶಗಳನ್ನು ಒಳಗೊಂಡಿರುವ ಪ್ರಾತ್ಯಕ್ಷಿಕೆಯನ್ನು (PPT) ಪಸ್ತುತಪಡಿಸಬಹುದು ಎಂದು ಆಹ್ವಾನದಲ್ಲಿ ತಿಳಿಸಲಾಗಿದೆ.
* ಪ್ರಶ್ನಾವಳಿಯ ಉತ್ತರಗಳು
* ಬೇಡಿಕೆಗಳು ಮತ್ತು ಇತರೆ ವಿಷಯಗಳ ಸಂಕ್ಷಿಪ್ತ ಮಾಹಿತಿ
* ಮಾಹಿತಿಯು ವಸ್ತುನಿಷ್ಟ ಹಾಗೂ ನಿರ್ದಿಷ್ಟವಾಗಿರಲಿ
* ಪ್ರಾತ್ಯಕ್ಷಿಕೆಯು 10 ಸೈಡ್‌ಗಳಿಗೆ ಸೀಮಿತಗೊಳಿಸುವುದು
* ಮಾಹಿತಿಯು/ ಸ್ಲೈಡ್‌ಗಳು ಪುನರಾವರ್ತನೆಯಾಗದಿರಲಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆದು, ಹೊಸದಾಗಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ರಾಜ್ಯ ವೇತನ ಆಯೋಗದ ಅವಧಿಯನ್ನು ವಿಸ್ತರಣೆ ಮಾಡಿದೆ. ಆಯೋಗಕ್ಕೆ ನಿಗದಿಪಡಿಸಿರುವ ಕಾಲಾವಧಿಯನ್ನು ದಿನಾಂಕ 19/5/2023ರಿಂದ 6 ತಿಂಗಳು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆದು, ಹೊಸದಾಗಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ರಾಜ್ಯ ವೇತನ ಆಯೋಗದ ಅವಧಿಯನ್ನು ವಿಸ್ತರಣೆ ಮಾಡಿದೆ. ಆಯೋಗಕ್ಕೆ ನಿಗದಿಪಡಿಸಿರುವ ಕಾಲಾವಧಿಯನ್ನು ದಿನಾಂಕ 19/5/2023ರಿಂದ 6 ತಿಂಗಳು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
7ನೇ ವೇತನ ಆಯೋಗ ತನ್ನ ಪರಿಶೀಲನಾ ಅಂಶಗಳ ಹಿನ್ನಲೆಯಲ್ಲಿ ಸರ್ಕಾರಿ ನೌಕರರಿಗೆ ಪ್ರಶ್ನಾವಳಿಯನ್ನು ಬಿಡುಗಡೆ ಮಾಡಿತ್ತು. ಈ ಪ್ರಶ್ನಾವಳಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಈಗಾಗಲೇ ಉತ್ತರಗಳನ್ನು ಸಲ್ಲಿಕೆ ಮಾಡಿದೆ. ವೇತನ ಆಯೋಗ ವೇತನ, ಭತ್ಯೆ, ಪಿಂಚಣಿ, ರಜೆ ಸೌಲಭ್ಯ ಸೇರಿದಂತೆ ವಿವಿಧ ವಿಚಾರಗಳ ಕುರಿತು ಪ್ರಶ್ನಾವಳಿಗಳಿಗೆ ಉತ್ತರಗಳನ್ನು ಪಡೆದಿದೆ. ಈ ಉತ್ತರಗಳ ಕುರಿತು 7ನೇ ರಾಜ್ಯ ವೇತನ ಆಯೋಗ ಸರ್ಕಾರದ ವಿವಿಧ ಇಲಾಖೆಗಳ ನೌಕರರ ಜೊತೆ ಸಭೆಯನ್ನು ನಡೆಸುತ್ತಿದೆ.
ಮುಖ್ಯಮಂತ್ರಿ, ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ವಿಧಾನ ಪರಿಷತ್‌ನಲ್ಲಿ 7ನೇ ರಾಜ್ಯ ವೇತನ ಆಯೋಗದ ಕುರಿತು ಹೇಳಿಕೆ ನೀಡಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸ್ವಾಯತ್ತ ಸಂಸ್ಥೆಗಳೊಂದಿಗೆ ಸಮಾಲೋಚಿಸಲು ನಿಗದಿಪಡಿಸಿರುವ ಕಾಲಾವಧಿಯನ್ನು ಪುನರ್ ಪರಿಶೀಲಿಸಿ ಆಯೋಗಕ್ಕೆ ನಿಗದಿಪಡಿಸಿರುವ ಕಾಲಾವಧಿಯನ್ನು ದಿನಾಂಕ 19/5/2023ರಿಂದ 6 ತಿಂಗಳು ವಿಸ್ತರಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಯ ವಿಷಯವು ಸರ್ಕಾರದ ನೀತಿ ನಿರ್ಣಯಕ್ಕೆ ಸಂಬಂಧಿಸಿದ ವಿಷಯವಾಗಿದ್ದು, ವೇತನ ಆಯೋಗವು ಸಲ್ಲಿಸುವ ಅಂತಿಮ ವರದಿಯನ್ನು ರಾಜ್ಯದ ಆರ್ಥಿಕ ಸ್ಥಿತಿಗಳನ್ನು ಗಮನದಲ್ಲಿರಿಸಿಕೊಂಡು ಪರಿಶೀಲಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಆಯೋಗ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಲಿದೆ? ಎಂಬುದು ಇನ್ನೂ ಅಂತಿಮವಾಗಿಲ್ಲ.












Click it and Unblock the Notifications