7th Pay Commission: ರಾಜ್ಯದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ..
7th Pay Commission: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಈ ವೇಳೆ ಸರ್ಕಾರ ಹಲವು ಯೋಜನೆಗಳನ್ನು ಜಾರಿ ಮಾಡುವ ಸಾಧ್ಯತೆಯಿದೆ. ಹಾಗೆಯೇ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.
ಕರ್ನಾಟಕ ಲೋಕಸೇವಾ ಆಯೋಗದ ಶುದ್ಧೀಕರಣ ಆಗಬೇಕು ಎಂದು ಸಾರ್ವಜನಿಕರಿಂದ ಆಗ್ರಹ ವ್ಯಕ್ತವಾಗುತ್ತಲೇ ಇದೆ. ಈ ನಡುವಯೇ ಕೆಪಿಎಸ್‌ಸಿ ಅಧ್ಯಕ್ಷರು ಹಾಗೂ ಸದಸ್ಯರಿಗೆ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಇಂದು (ಏಪ್ರಿಲ್ 11) ನಡೆಯುವ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳುವುದಕ್ಕೆ ಸರ್ಕಾರ ಮುಂದಾಗಿದೆ. 2016ರ ಜನವರಿ 1ರಿಂದ ಅನ್ವಯ ಆಗುವಂತೆ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಲು ಮುಂದಾಗಿರುವುದು ಇದೀಗ ವಿವಾದಕ್ಕೆ ಕಾರಣವಾಗಿದ್ದು, ಕೆಲ ಸಚಿವರು ಇದಕ್ಕೆ ವಿರೋಧ ವ್ಯಕ್ತಪಡಿಸುವ ಸಾಧ್ಯತೆಯಿದೆ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ.
ಅಲ್ಲದೆ, ಲೋಕಾಯುಕ್ತದಿಂದ ಶಿಸ್ತುಕ್ರಮಕ್ಕೆ ಹಾಗೂ ಅಭಿಯೋಜನೆಗೆ ಶಿಫಾರಸುಗೊಂಡ ಪ್ರಕರಣಗಳನ್ನು ಸಕ್ಷಮ ಪ್ರಾಧಿಕಾರದ ಮೂಲಕ ತನಿಖೆ ಮಾಡಿಸುವ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳುವ ವಿಚಾರವೂ ಸಂಪುಟದ ಮುಂದೆ ಇದೆ. ಆರೋಪ ಎದುರಿಸುತ್ತಿರುವ ಅಧಿಕಾರಿಗಳಿಗೆ ಸರ್ಕಾರ ದಯಾಭಿಕ್ಷೆ ನೀಡಲಿದೆಯೇ ಎಂವ ಪ್ರಶ್ನೆಗಳು ಇದೀಗ ಹುಟ್ಟಿವೆ.
ಸಾಮಾನ್ಯವಾಗ ಸಚಿವ ಸಂಪುಟ ನಡೆದರೆ, ಈ ವೇಳೆ ಹಲವು ಯೋಜನೆಗಳು ಜಾರಿ ಮಾಡುವ ಭರವಸೆಯಲ್ಲಿ ಬಹುತೇಕ ಮಂದಿ ಇರುತ್ತಾರೆ. ಹಾಗೆಯೇ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಯಾವೆಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಕಾದುನೋಡಬೇಕಿದೆ. ಸದ್ಯ ಇದೀಗ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತಿದೆ.
ಮನೆ ಬಾಡಿಗೆ ಮತ್ತು ಸಾರಿಗೆ ಭತ್ಯೆಗಳ ಹೆಚ್ಚಳ: ಸರ್ಕಾರವು ಸರ್ಕಾರಿ ನೌಕರರಿಗೆ ಶುಭಸುದ್ದಿಗಳನ್ನು ನೀಡುತ್ತಲೇ ಇರುತ್ತದೆ. ಇದೀಗ ಈ ಸರ್ಕಾರವು ತನ್ನ ಉದ್ಯೋಗಿಗಳಿಗೆ 15 ವರ್ಷಗಳ ಬಳಿಕ ಸರ್ಕಾರಿ ನೌಕರರಿಗೆ ಮನೆ ಬಾಡಿಗೆ ಭತ್ಯೆ ಮತ್ತು ಸಾರಿಗೆ ಭತ್ಯೆಯಲ್ಲಿ ಏರಿಕೆ ಮಾಡಿದೆ. ಹಾಗಾದ್ರೆ ಎಷ್ಟು ಎನ್ನುವ ಮಾಜಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯದ ಸರ್ಕಾರಿ ಉದ್ಯೋಗಿಗಳಿಗೆ 15 ವರ್ಷಗಳ ನಂತರ ಮಧ್ಯಪ್ರದೇಶ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರಾಜ್ಯದ ಸರ್ಕಾರಿ ನೌಕರರಿಗೆ ಮನೆ ಬಾಡಿಗೆ ಭತ್ಯೆ ಮತ್ತು ಸಾರಿಗೆ ಭತ್ಯೆಯಲ್ಲಿ ಏರಿಕೆ ಮಾಡಿದೆ. ಸಿಎಂ ಡಾ. ಮೋಹನ್ ಯಾದವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಇದರಿಂದ ರಾಜ್ಯದ ಸರ್ಕಾರಿ ನೌಕರರು ಮತ್ತು ಕಾರ್ಮಿಕರು ಸಂತಸಗೊಂಡಿದ್ದಾರೆ.
7ನೇ ವೇತನ ಆಯೋಗದಡಿ ಮಧ್ಯಪ್ರದೇಶ ಸರ್ಕಾರವು ರಾಜ್ಯದ ಸರ್ಕಾರಿ ಉದ್ಯೋಗಿಗಳ ವೇತನವನ್ನು ಪರಿಷ್ಕರಣೆ ಮಾಡಿದೆ. ಹೊಸ ವೇತನ ಶ್ರೇಣಿಯು ಏಪ್ರಿಲ್ 1, 2025ರಿಂದ ಜಾರಿಗೆ ಬರಲಿದ್ದು, ಇದರಿಂದ ಸರ್ಕಾರಿ ನೌಕರರ ಭರ್ಜರಿ ಶುಭ ಸುದ್ದಿ ಸಿಕ್ಕಂತಾಗಿದೆ.
* ಮೊದಲಿಗೆ ಕೌಶಲ್ಯರಹಿತ ಕೆಲಸಗಾರರ ದೈನಂದಿನ ಸಂಬಳ 368.27 ರೂಪಾಯಿ ಇತ್ತು. ಇದೀಗ ಇದು 466.35 ರೂಪಾಯಿಗೆ ಏರಿಕೆಯಾಗಿದ್ದು, ಮಾಸಿಕ ಸಂಬಳ 12,125 ರೂಪಾಯಿ ಆದಂತಾಗಿದೆ.
* ಮೊದಲಿಗೆ ಅರೆ ಕೌಶಲ್ಯಪೂರ್ಣ ಕೆಲಸಗಾರರ ದಿನದ ಸಂಬಳ 406.58 ರೂಪಾಯಿ ಇತ್ತು. ಇದೀಗ ಇದನ್ನು 505.00 ರೂಪಾಯಿಗೆ ಏರಿಕೆ ಮಾಡಲಾಗಿದ್ದು, ಮಾಸಿಕ ವೇತನ 13,121 ರೂಪಾಯಿ ಆದಂತಾಗಿದೆ.
* ಮೊದಲಿಗೆ ಕೌಶಲ್ಯಪೂರ್ಣ ಕೆಲಸಗಾರರಿಗೆ 472.85 ರೂಪಾಯಿ ದಿನದ ವೇತನ ಇತ್ತು. ಇದೀಗ 571.00 ರೂಪಾಯಿಗೆ ಏರಿಕೆ ಮಾಡಲಾಗಿದ್ದು, ಮಾಸಿಕ ವೇತನ 14,844 ರೂಪಾಯಿ ಆದಂತಾಗಿದೆ.
* ಮೊದಲಿಗೆ ಹೆಚ್ಚು ಕೌಶಲ್ಯಪೂರ್ಣ ಕೆಲಸಗಾರರಿಗೆ 535.35 ರೂಪಾಯಿ ದೈನಂದಿನ ಸಂಬಳ ಇತ್ತು. ಇದೀಗ 633.00 ರೂಪಾಯಿಗೆ ಏರಿಕೆ ಮಾಡಲಾಗಿದ್ದು, ಮಾಸಿಕ ವೇತನ 16,469 ರೂಪಾಯಿ ಆಗಿದೆ. ಇನ್ನು ಈ ಹೊಸ ವೇತನ ಶ್ರೇಣಿಯು ಉದ್ಯೋಗಿಗಳ ಆರ್ಥಿಕ ಸ್ಥಿತಿ ಜೊತೆಗೆ ಅವರ ಜೀವನ ಮಟ್ಟವನ್ನು ಸುಧಾರಿಸಲಿದೆ.
ಇನ್ನು ಈ ವೇತನ ಮತ್ತು ಭತ್ಯೆ ಹೆಚ್ಚಳದಿಂದ ರಾಜ್ಯ ಸರ್ಕಾರದ ಹಣಕಾಸಿನ ಮೇಲೆ ಹೆಚ್ಚು ಪರಿಣಾಮ ಬೀರಲಿದೆ. ಸಚಿವ ಕೈಲಾಶ್ ವಿಜಯವರ್ಗಿಯ ಅವರ ಪ್ರಕಾರ, ವೇತನ ಏರಿಕೆಯಿಂದ ರಾಜ್ಯದ ಬೊಕ್ಕಸದ ಮೇಲೆ ವಾರ್ಷಿಕ 1,500 ಕೋಟಿ ರೂಪಾಯಿಗಳ ಹೆಚ್ಚುವರಿಯಾಗಿ ಹೊರೆ ಬೀಳಲಿದೆ. ಆದರೆ, ಉದ್ಯೋಗಿಗಳ ಯೋಗಕ್ಷೇಮಕ್ಕಾಗಿ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿರುವುದು ಸ್ವಾಗತಾರ್ಹ ಅಂತಾ ಹೇಳಿದ್ದಾರೆ.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications