7th pay commission: 7ನೇ ವೇತನ ಆಯೋಗ ವರದಿ ಜಾರಿ ಒತ್ತಡದಲ್ಲಿ ಸರ್ಕಾರ
ನವದೆಹಲಿ, ಮೇ. 06 : ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಒಂದು ದಿನದ ಮೊದಲು ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಮೇ 7 ರಂದು ಎರಡನೇ ಹಂತದ ಮತದಾನ ಮುಗಿಯಲಿದ್ದು, ಚುನಾವಣಾ ನೀತಿ ಸಂಹಿತೆ ಸಡಿಲವಾಗಲಿದೆ.
ಹೀಗಾಗಿ, ಮತ್ತೆ 7ನೇ ವೇತನ ಆಯೋಗದ ವರದಿ ಜಾರಿಗೆ ಒತ್ತಡ ಕೇಳಿ ಬರುತ್ತಿದೆ. ವೇತನ ಪರಿಷ್ಕರಣೆಗಾಗಿ ರಾಜ್ಯದ ಐದು ಲಕ್ಷ ಸರ್ಕಾರಿ ನೌಕರರ ಜೊತೆಗೆ ಅಷ್ಟೇ ಸಂಖ್ಯೆಯ ಪಿಂಚಣಿದಾರರು ಕಾಯುತ್ತಿದ್ದಾರೆ. ಚುನಾವಣಾ ನೀತಿ ಸಂಹಿತೆ ವಾಪಸ್ ಪಡೆಯುವ ತಕ್ಷಣ ವರದಿಯನ್ನು ಅಂಗೀಕರಿಸಿ ಜಾರಿ ಮಾಡುವ ಒತ್ತಡ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಮೇಲಿದೆ.

2022 ರ ಜುಲೈ 1 ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಆಗಬೇಕೆಂಬುದು ಸರ್ಕಾರಿ ನೌಕರರ ಬೇಡಿಕೆಯಾಗಿತ್ತು. ಆದರೆ, ವೇತನ ಆಯೋಗದ ಜಾರಿಯನ್ನು 2024 ರ ಮೇ ವರೆಗೂ ಎಳೆದಾಡಲಾಗಿದೆ. 2023ರ ಜನವರಿಯಿಂದಲಾದರೂ ವರದಿ ಜಾರಿಯಾಗುತ್ತದೆ ಎಂದು ನೌಕರರು ಕಾಯುತ್ತಿದ್ದರು. ಆದರೆ, ಲೋಕಸಭೆ ಚುನಾವಣಾ ದಿನಾಂಕ ಘೋಷಣೆಗೂ ಮುನ್ನ ವರದಿ ಸಲ್ಲಿಕೆಯಾಗಿದೆ. ಈಗ ಅನುಷ್ಠಾನಕ್ಕಾಗಿ ಸರ್ಕಾರಿ ನೌಕರರು ಕಾಯುತ್ತಿದ್ದಾರೆ.
ಕಳೆದ ಬಾರಿಯ ಬಿಜೆಪಿ ಸರ್ಕಾರವಿದ್ದಾಗ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ನೌಕರರ ವೇತನ ಪರಿಷ್ಕರಣೆಗಾಗಿ ವೇತನ ಆಯೋಗ ರಚಿಸಿತ್ತು. ಆದರೆ, ಅನುದಾನ ಕೊಟ್ಟಿರಲಿಲ್ಲ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಫೆಬ್ರವರಿಯಲ್ಲಿ ಮಂಡಿಸಿದ 2024-25ನೇ ಸಾಲಿನ ಬಜೆಟ್‌ನಲ್ಲಿ ವೇತನ ಆಯೋಗ ರಚಿಸಿ ವರದಿ ಬಂದ ನಂತರ ಜಾರಿ ಮಾಡಲಾಗುವುದೆಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು.
ಬಜೆಟ್‌ನಲ್ಲಿಯೇ ವೇತನ ಆಯೋಗದ ಜಾರಿ ಬಗ್ಗೆ ಘೋಷಣೆಯನ್ನು ನಿರೀಕ್ಷಿಸಿದ್ದ ನೌಕರರಿಗೆ ತೀವ್ರ ನಿರಾಸೆಯಾಗಿತ್ತು. ಈಗ ಕೆ. ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ವರದಿಯನ್ನು ಚುನಾವಣೆ ಬಳಿಕ ಅಂಗೀಕರಿಸುವುದಾಗಿಯೂ ಹೇಳಲಾಗಿದೆ. ಅದನ್ನು ಅನುಷ್ಠಾನ ಮಾಡುವ ಹೊಣೆಗಾರಿಕೆ ರಾಜ್ಯ ಸರ್ಕಾರದ ಮೇಲಿದೆ.

ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 3,71,383 ಕೋಟಿ ರೂಪಾಯಿ ಮೊತ್ತದ ಬಜೆಟ್ ಮಂಡಿಸಿದರು. ಬಜೆಟ್ ಭಾಷಣದಲ್ಲಿ 7ನೇ ರಾಜ್ಯ ವೇತನ ಆಯೋಗದ ಕುರಿತು ಉಲ್ಲೇಖಿಸಿದರು. ಏಳನೇ ವೇತನ ಆಯೋಗದ ಶಿಫಾರಸು ಈ ಹಣಕಾಸು ವರ್ಷದಲ್ಲಿ ಜಾರಿಗೆ ಬಂದರೆ ಸರ್ಕಾರದ ಬೊಕ್ಕಸಕ್ಕೆ 15 ರಿಂದ 20 ಸಾವಿರ ಕೋಟಿ ರೂಪಾಯಿಯ ಹೊರೆ ಬೀಳುತ್ತದೆ. ಹೀಗಾಗಿ ಸರ್ಕಾರ ಎಲ್ಲಾ ವಿಚಾರಗಳನ್ನು ಚಿಂತಿಸಿ ತೀರ್ಮಾನ ತೆಗೆದುಕೊಳ್ಳಬೇಕಿದೆ.
ಇನ್ನು, ವರದಿಯಲ್ಲಿ ಸರ್ಕಾರಿ ನೌಕರರಿಗೆ ಮೂಲ ವೇತನದಲ್ಲಿ 27.50 % ಹೆಚ್ಚಳ ಹಾಗೂ ಅಸ್ತಿತ್ವದಲ್ಲಿರುವ ಮೂಲ ವೇತನವನ್ನು 17 ಸಾವಿರ ರೂಪಾಯಿಗಳಿಂದ 27 ಸಾವಿರ ರೂಪಾಯಿಗಳಿಗೆ ಏರಿಸಬೇಕು ಎಂಬ ಶಿಫಾರಸು ಮಾಡಲಾಗಿದೆ. ಚುನಾವಣೆ ಮುಗಿದ ಬಳಿಕವೇ ನೌಕರರು ವರದಿ ಅನುಷ್ಠಾನಕ್ಕೆ ಪಟ್ಟು ಹಿಡಿಯಲಿದ್ದಾರೆ. ಆದರೆ, ಸರ್ಕಾರ ಯಾವ ನಿರ್ಧಾರ ತೆಗ೪ಎದುಕೊಳ್ಳಲಿದೆ..? ಯಾವಾಗಿನಿಂದ ವರದಿ ಜಾರಿಗೊಳಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications