7th Pay Commission; ಸರ್ಕಾರಿ ನೌಕರರು ಆನ್‌ಲೈನ್‌ನಲ್ಲಿ ಪಿಂಚಣಿ ಲೆಕ್ಕಾಚಾರ ಹಾಕುವುದು ಹೇಗೆ?
ಬೆಂಗಳೂರು, ಜುಲೈ 30: ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾದ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸು ಜಾರಿಗೊಳಿಸಲು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ. ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು, ಆಗಸ್ಟ್‌ನಿಂದಲೇ ನೌಕರರ ವೇತನ ಹೆಚ್ಚಳವಾಗಲಿದೆ.
ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜುಲೈ 15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗೆ ಅನುಮೋದನೆ ನೀಡಲಾಗಿತ್ತು. ಆರ್ಥಿಕ ಇಲಾಖೆ ಈ ಕುರಿತು ಈಗಾಗಲೇ ಅಧಿಕೃತ ಆದೇಶ ಹೊರಡಿಸಿದೆ.

ದಿನಾಂಕ 19/11/2022ರ ಸರ್ಕಾರಿ ಆದೇಶದಂತೆ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತ ತನ್ನ ವರದಿಯ ಸಂಪುಟ-1 ಸಲ್ಲಿಸಿರುತ್ತದೆ. 7ನೇ ರಾಜ್ಯ ವೇತನ ಆಯೋಗದ ಸಂಪುಟ-1ರ ವರದಿಯಲ್ಲಿನ ಶಿಫಾರಸ್ಸುಗಳನ್ನು ಸರ್ಕಾರವು ಪರಿಗಣಿಸಿ, ಅಂಗೀಕರಿಸಿದೆ.
ತುಟ್ಟಿ ಭತ್ಯೆ, ಮೂಲ ವೇತನ, ಫಿಟ್‌ಮೆಂಟ್ ಸೌಲಭ್ಯ ಒಟ್ಟುಗೂಡಿಸಿ ವೇತನವನ್ನು ಹೇಗೆ ಪರಿಷ್ಕೃರಣೆ ಮಾಡಬೇಕು? ಎಂದು ಸಹ ಸೂಚಿಸಲಾಗಿದೆ. ಪರಿಷ್ಕೃತ ವೇತನ ಶ್ರೇಣಿಗಳ ಅನುಷ್ಠಾನದ ಆರ್ಥಿಕ ಸೌಲಭ್ಯವು 1ನೇ ಆಗಸ್ಟ್ 2024ರಿಂದ ಲಭ್ಯವಾಗಬೇಕು ಎಂದು ಆದೇಶ ಹೇಳಿದೆ.
ಪಿಂಚಣಿ ಲೆಕ್ಕಾಚಾರ ಹೇಗೆ?; ವೇತನ ಮಾತ್ರವಲ್ಲದೇ ಸರ್ಕಾರಿ ನೌಕರರ ಪಿಂಚಣಿಯೂ ಹೆಚ್ಚಳವಾಗಲಿದೆ. ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳ ಪರಿಷ್ಕರಣೆ ಕುರಿತು 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಸರ್ಕಾರವು ಅಂಗೀಕರಿಸಿದೆ.
ಕನಿಷ್ಠ ಮತ್ತು ಗರಿಷ್ಠ ಪಿಂಚಣಿಯ ಪ್ರಸ್ತುತ ಮೊತ್ತವನ್ನು ಕ್ರಮವಾಗಿ ಮಾಸಿಕ ರೂ. 8,500 ಮತ್ತು ರೂ.75,300 ರಿಂದ ರೂ.13,500 ಮತ್ತು ರೂ.1,20,600 ಗಳಿಗೆ ಮತ್ತು ಸಂವಾದಿ ಕುಟುಂಬ ಪಿಂಚಣಿಯ ಕನಿಷ್ಠ ಮತ್ತು ಗರಿಷ್ಠ ಮಿತಿಯನ್ನು ಅನುಕ್ರಮವಾಗಿ ಮಾಸಿಕ ರೂ.8,500 ಮತ್ತು ರೂ. 45,180 ರಿಂದ ಮತ್ತು ರೂ.13,500 ಮತ್ತು ರೂ. 80,400ಗಳಿಗೆ ಪರಿಷ್ಕರಿಸತಕ್ಕದ್ದು ಎಂದು ಆದೇಶ ತಿಳಿಸಿದೆ.
ಪರಿಷ್ಕೃತ ಪಿಂಚಣಿ ಮತ್ತು ಕುಟುಂಬ ಪಿಂಚಣಿಗಳು ದಿನಾಂಕ 01/07/2022ರಿಂದ ಜಾರಿಗೆ ಬರುತ್ತವೆ. ಆದರೆ, ಪಿಂಚಣಿ ಪರಿಷ್ಕರಣೆಯ ಆರ್ಥಿಕ ಲಾಭವು ದಿನಾಂಕ 01/08/2024ರಿಂದ ಸಿಗಲಿದೆ. ಮರಣ ಮತ್ತು ನಿವೃತ್ತಿ ಉಪದಾನದ ಪ್ರಸ್ತುತ ಗರಿಷ್ಠ ಮಿತಿ ರೂ. 20 ಲಕ್ಷಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ದಿನಾಂಕ 01/07/2022ಕ್ಕೆ ಪೂರ್ವದಲ್ಲಿ ನಿವೃತ್ತರಾದ ಅಥವಾ ಸೇವೆಯಲ್ಲಿದ್ದಾಗ ಮೃತರಾದ ಪಿಂಚಣಿ ಮತ್ತು ಕುಟುಂಬ ಪಿಂಚಣಿಯನ್ನು ನಿಗದಿಪಡಿಸತಕ್ಕದ್ದು ಎಂದು ಆದೇಶ ಹೇಳಿದೆ.
ಸರ್ಕಾರಿ ನೌಕರರು ಪಿಂಚಣಿ ಲೆಕ್ಕಾಚಾರ ಹಾಕಲು ಸುಲಭವಾದ ವ್ಯವಸ್ಥೆ ಮಾಡಲಾಗಿದೆ. ನೌಕರರು ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಪಿಂಚಣಿ ಎಷ್ಟಾಗಲಿದೆ? ಎಂದು ಲೆಕ್ಕ ಹಾಕಬಹುದು. ಈಗಿನ ಮೂಲ ನಿವೃತ್ತಿ ವೇತನವನ್ನು ತಮ್ಮ ಪಿಂಚಣಿ ಪಾವತಿ ಆದೇಶದಲ್ಲಿ ಪಡೆಯುಬಹುದಾಗಿದೆ. ತುಟ್ಟಿ ಭತ್ಯೆಯನ್ನೂ ಆಯೋಗದ ವರದಿಯಂತೆ ಕೇಂದ್ರ ಸರಕಾರದ ತುಟ್ಟಿ ಭತ್ಯೆಗೆ 0.722% ರಷ್ಟು ರಾಜ್ಯ ಸರ್ಕಾರವು ತನ್ನ ನೌಕರರಿಗೆ ನೀಡುತ್ತದೆ ಎಂದು ಪಿಂಚಣಿ ಲೆಕ್ಕಾಚಾರದ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗಿದೆ.
7ನೇ ವೇತನ ಆಯೋಗದ ವರದಿ ಜಾರಿ ಬಳಿಕ ಹೆಚ್ಚಳವಾಗುವ ಪಿಂಚಣಿಯ ಲೆಕ್ಕಾಚಾರ ಹಾಕಲು ಸರ್ಕಾರಿ ನೌಕರರು https://karpay.calculator.cafe/7thPayPensionCalculation ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಅಲ್ಲಿ ನೀಡಲಾಗಿರುವ ಮಾಹಿತಿ ಅನ್ವಯ ವಿವರಗಳನ್ನು ಭರ್ತಿ ಮಾಡಿ, ಮಾಹಿತಿ ಪಡೆಯಬಹುದು.
ಸರ್ಕಾರಿ ನೌಕರರು ಇದೇ ಮಾದರಿಯಲ್ಲಿ ಆನ್‌ಲೈನ್‌ನಲ್ಲಿಯೂ ವೇತನ ಹೆಚ್ಚಳದ ಮಾಹಿತಿಯನ್ನು ಪಡೆಯಲು ಸಹ ಇದೇ ವೆಬ್‌ಸೈಟ್‌ನಲ್ಲಿ ಲಿಂಕ್ ನೀಡಲಾಗಿದೆ.
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications