7th Pay Commission: 7ನೇ ವೇತನ ಆಯೋಗ ಜಾರಿ; ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು, ಜುಲೈ 16: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 7ನೇ ವೇತನ ಆಯೋಗ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ತೀರ್ಮಾನ ಕೈಗೊಂಡಿದ್ದು, ಸರ್ಕಾರಿ ನೌಕರರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಕರ್ನಾಟಕದಲ್ಲಿ ಏಳನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.
ಹೌದು, 7ನೇ ವೇತನ ಆಯೋಗ ಜಾರಿ ಕುರಿತು ರಾಜ್ಯ ಸರ್ಕಾರಿ ನೌಕರರ ಬಹುದಿನಗಳಿಂದ ಹೋರಾಟ ನಡೆಸುತ್ತಿದ್ದು, ಕೊನೆಗೂ ರಾಜ್ಯ ಸರ್ಕಾರ ಸರ್ಕಾರಿ ನೌಕರರ ಬೇಡಿಕೆ ಕೊನೆಗೂ ಇಡೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸೋಮವಾರ ಸಚಿವ ಸಂಪುಟ ಸಭೆ ನಡೆದಿದ್ದು, ಈ ಸಭೆಯಲ್ಲಿ 7 ನೇ ವೇತನ ಆಯೋಗದ ಕುರಿತು ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿದ ಬಳಿಕ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ. 7 ನೇ ವೇತನ ಜಾರಿ ಕುರಿತು ಸರ್ಕಾರಿ ನೌಕರರಿಗೆ ಸಂತಸಗೊಂಡಿದ್ದು, 7ನೇ ವೇತನ ಆಯೋಗದ ಶಿಫಾರಸುಗಳು ಆಗಸ್ಟ್ 1ರಿಂದ ಅನ್ವಯವಾಗುವಂತೆ ಜಾರಿಯಾಗಲಿದೆ.

ವೇತನ ಹೆಚ್ಚಳದ ಕುರಿತು ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ನೇತೃತ್ವದ ಏಳನೇ ವೇತನ ಆಯೋಗ ಮಾರ್ಚ್ 16ರಂದು ಅಂತಿಮ ವರದಿ ಸಲ್ಲಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮ ವರದಿ ಸಲ್ಲಿಸಿದ್ದ ಆಯೋಗ, ಕರ್ನಾಟಕ ಸರ್ಕಾರಿ ನೌಕರರಿಗೆ 27.5% ವೇತನವನ್ನು ಹೆಚ್ಚಿಸಲು ಶಿಫಾರಸು ಮಾಡಿತ್ತು. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ನೌಕರರ ಸಂಬಳವನ್ನು ಶೇ.17ರಷ್ಟು ಹೆಚ್ಚಳ ಮಾಡಿದ್ದರು. ಈಗ ಏಳನೇ ವೇತನ ಆಯೋಗದ ಶಿಫಾರಸಿನಂತೆ ಇನ್ನೂ ಶೇ.10.5ರಷ್ಟು ಸೇರಿ ಒಟ್ಟು ಶೇ.27.5ರಷ್ಟು ಆಗುವಂತೆ ವೇತನವನ್ನು ಹೆಚ್ಚಿಸಲಾಗುತ್ತದೆ.
7ನೇ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ಸಂಬಳ ಇಷ್ಟು ಹೆಚ್ಚಾಗಲಿದೆ.#7thPayCommission #GovernmentEmployees #salary #ಒನ್ಇಂಡಿಯಾಕನ್ನಡಸುದ್ದಿ pic.twitter.com/s2Zr0ZXnHn
— oneindiakannada (@OneindiaKannada) July 16, 2024
ಇನ್ನೂ ಕರ್ನಾಟಕದಲ್ಲಿ ಏಳನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ. ಇದರಿಂದ ರಾಜ್ಯದ ಲಕ್ಷಾಂತರ ನೌಕರರ ಸಂಬಳವು ಹೆಚ್ಚಾಗಲಿದೆ. ರಾಜ್ಯ ಸರ್ಕಾರದ ಈ ತಿರ್ಮಾನಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಅವರು ಸೇರಿದಂತೆ ಹಲವು ಸರ್ಕಾರಿ ನೌಕರರು ಸಂತಸ ವ್ಯಕ್ತಪಡಿಸಿದ್ದಾರೆ.
ವಿಭಾಗವಾರು ವೇತನದ ವ್ಯತ್ಯಾಸ
ಎ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಸಿ ಮತ್ತು ಡಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು ಮೂಲ ವೇತನ 17,000 ರೂ. ಇದ್ದರೆ, ತುಟ್ಟಿಭತ್ಯೆ ಶೇ. 31 (5,270 ರೂ.) ಹಾಗೂ ಶೇ.27.50 (4,675 ರೂ. ) ಫಿಟ್ಮೆಂಟ್ ಸೇರಿ ಒಟ್ಟು 26,945 ಸಿಗುತ್ತಿತ್ತು. 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27,000 ಇದ್ದರೆ, ಅಂದಾಜು ತುಟ್ಟಿ ಭತ್ಯೆ ಶೇ.8.5 (2295 ರೂ), ಮನೆ ಬಾಡಿಗೆ ಭತ್ಯೆ ಶೇ.20 (5,400 ರೂ.), ವೈದ್ಯಕೀಯ 500, ನಗರ ಪರಿಹಾರ ಭತ್ಯೆ (ಸಿಸಿಎ) 750 ರೂ. ಸೇರಿ ಒಟ್ಟು 35,945 (01-01-2024ಕ್ಕೆ) ರೂ. ಸಿಗಲಿದೆ. 6ನೇ ವೇತನ ಆಯೋಗದಲ್ಲಾದರೆ ಒಟ್ಟು 29,005 ರೂ. ಸಿಗುತ್ತಿತ್ತು. ಪರಿಷ್ಕೃತ ವೇತನದಲ್ಲಿ 6940 ರೂ. ಹೆಚ್ಚಳವಾಗಲಿದೆ.
ಎ ವಲಯದಲ್ಲಿ ಕಾರ್ಯ ನಿರ್ವಹಿಸುವ ಎ ಮತ್ತು ಬಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು 17,000 ರೂ. ವೇತನ ಇದ್ದರೆ, ಶೇ. 31 ತುಟ್ಟಿ ಭತ್ಯೆ (5270 ರೂ.), ಫಿಟ್ಮೆಂಟ್ ಶೇ.27.50 (4675 ರೂ.) ಸೇರಿ ಒಟ್ಟು 26945 ರೂ ವೇತನ ಸಿಗುತ್ತಿತ್ತು. ಆದರೆ, 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27000 ಇದ್ದರೆ, ತುಟ್ಟಿ ಭತ್ಯೆ ಶೇ.8.5 (2298 ರೂ.), ಮನೆ ಬಾಡಿಗೆ ಭತ್ಯೆ ಶೇ.20 (5400 ರೂ.), ನಗರ ಪರಿಹಾರ ಭತ್ಯೆ(ಸಿಸಿಎ) 900 ಸೇರಿ ಒಟ್ಟು 35,595 ವೇತನ ಸಿಗಲಿದೆ. ಇದು 6ನೇ ವೇತನ ಆಯೋಗದ ಅವಧಿಯಲ್ಲಿ 27,545 ರೂ. ಆಗಿದೆ. ಪರಿಷ್ಕೃತ ವೇತನದಲ್ಲಿ 8,050 ರೂ. ಹೆಚ್ಚಳವಾಗಲಿದೆ.
ಒಟ್ನಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರು ನಿರಂತರ ಹೋರಾಟಕ್ಕೆ ಜಯ ಸಿಕ್ಕಿದ್ದು, ಈ ಹಿಂದೆ ಸರ್ಕಾರಿ ನೌಕರರು 7 ನೇ ವೇತನ ಆಯೋಗದ ವರದಿ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿದ ಸಂದರ್ಭದಲ್ಲಿ ಭರವಸೆಯನ್ನ ನೀಡಿದ್ರು. ಆದರೆ, ಈ ಹಿಂದೆ ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಳ್ಳದ ಹಿನ್ನೆಲೆ ಜುಲೈ 29 ಕ್ಕೆ ಸರ್ಕಾರಿ ನೌಕರರು ಮುಷ್ಕರಕ್ಕೆ ಕರೆ ಕೊಟ್ಟ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಿದ್ದರಾಮಯ್ಯ ಸರ್ಕಾರ 7 ನೇ ವೇತನ ಆಯೋಗ ವರದಿ ಜಾರಿಗೆ ಗ್ರೀನ್ ಸಿಗ್ನಲ್ ನೀಡಿದೆ.












Click it and Unblock the Notifications