7th Pay Commission: ಮಹಾನಗರ ಪಾಲಿಕೆ ನೌಕರರು, ನಿವೃತ್ತರಿಗೆ ಗುಡ್‌ನ್ಯೂಸ್

ಬೆಂಗಳೂರು, ಸೆಪ್ಟೆಂಬರ್ 14: ಕರ್ನಾಟಕ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ 558 ಪುಟಗಳ ಸಂಪುಟ-1ರ ವರದಿಯನ್ನು ಅಂಗೀಕಾರ ಮಾಡಿದೆ. ಆಗಸ್ಟ್‌ ತಿಂಗಳಿನಿಂದಲೇ ಜಾರಿಗೆ ಬರುವಂತೆ ವರಿಯನ್ನು ಜಾರಿಗೊಳಿಸುವ ಕುರಿತು ಆದೇಶವನ್ನು ಹೊರಡಿಸಿದೆ. ಸರ್ಕಾರಿ ನೌಕರರ ವೇತನ, ಭತ್ಯೆ ಹೆಚ್ಚಳವಾಗಲಿದೆ. ಈಗ ರಾಜ್ಯದ 10 ಮಹಾನಗರ ಪಾಲಿಕೆಗಳ ನೌಕರರು, ನಿವೃತ್ತ ವೇತನದಾರರು/ ಕುಟುಂಬ ಪಿಂಚಣಿದಾರರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಖಾಯಂ ನೌಕರರಿಗೆ ಸಹ ವೇತನ ಆಯೋಗದ ವರದಿ ಜಾರಿಗೊಳಿಸಲು ವಿವರವಾದ ಆದೇಶವನ್ನು ಹೊರಡಿಸಲಾಗಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ನಾಗೇಶ್ ಕೆ. ಸರ್ಕಾರದ ಅಧೀನ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ (ಮಹಾನಗರ ಪಾಲಿಕೆ-2) ಆದೇಶವನ್ನು ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯದ 10 ಮಹಾನಗರ ಪಾಲಿಕೆಗಳ ಖಾಯಂ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನ ಅನ್ವಯ ಪರಿಷ್ಕೃತ ವೇತನ ಶ್ರೇಣಿಯ ಸೌಲಭ್ಯವನ್ನು ವಿಸ್ತರಿಸುವ ಬಗ್ಗೆ ಎಂಬ ವಿಷಯವನ್ನು ಆದೇಶ ಒಳಗೊಂಡಿದೆ.

7th Pay Commission Karnataka Good News For 10 City Corporations Permanent Employees

ಆದೇಶದ ವಿವರ: ದಿನಾಂಕ 09.07.2018ರ ಆದೇಶದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಯನ್ನು ಪರಿಷ್ಕರಿಸಿದ ಸರ್ಕಾರದ ಆದೇಶ ದಿನಾಂಕ 01.03.2018 ಮತ್ತು ಸರ್ಕಾರದ ಆದೇಶ ದಿನಾಂಕ 19.04.2018 ರಲ್ಲಿನ ನಿರ್ದೇಶನದಂತೆ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿ/ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿ ಸೌಲಭ್ಯವನ್ನು ದಿನಾಂಕ 01.07.2017 ರಿಂದ ಜಾರಿಗೆ ಬರುವಂತೆ ಮಂಜೂರು ಮಾಡಲಾಗಿದೆ. ಆದರೆ, ವೇತನ ಪರಿಷ್ಕರಣೆಯ ಆರ್ಥಿಕ ಸೌಲಭ್ಯವು ದಿನಾಂಕ 01.04.2018 ರಿಂದ ಜಾರಿಗೆ ಬರುವಂತೆ ಯಥಾವತ್ತಾಗಿ ವಿಸ್ತರಿಸಿ ಆದೇಶಿಸಲಾಗಿರುತ್ತದೆ.

ದಿನಾಂಕ 22.07.2024ರ ಆದೇಶದಲ್ಲಿ, 7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳನ್ನು ಅಂಗೀಕರಿಸಿ, ಅದರಂತೆ ರಾಜ್ಯ ಸರ್ಕಾರಿ ನೌಕರರ ಮುಖ್ಯವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಹಾಗೂ ಪಿಂಚಣಿಯನ್ನು ದಿನಾಂಕ 01.07.2022 ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲು ಆದೇಶ ಹೊರಡಿಸಲಾಗಿರುತ್ತದೆ. ಈ ಆದೇಶದ ಕಂಡಿಕೆ (8) ರಲ್ಲಿ ಅನ್ವಯಿಸುವ ಬದಲಾವಣೆಗಳೊಂದಿಗೆ ಈ ಮೇಲಿನ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಸಹಾ ಯಥಾವತ್ತಾಗಿ ವಿಸ್ತರಿಸಿ ಆದೇಶಿಸಲಾಗಿರುತ್ತದೆ.

ದಿನಾಂಕ 17.08.2024ರ ಅಧಿಸೂಚನೆಯಲ್ಲಿ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳು 2024ನ್ನು ರಚಿಸಲಾಗಿರುತ್ತದೆ. ದಿನಾಂಕ 23.08.2024ರ ಆದೇಶದಲ್ಲಿನ ಕಂಡಿಕೆ 11.1 ರಲ್ಲಿ ಪರಿಷ್ಕೃತ ವೇತನ ಶ್ರೇಣಿಗಳ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಸ್ಥಳೀಯ ಸಂಸ್ಥೆಗಳ ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಸಹ ವಿಸ್ತರಿಸಲಾಗಿರುತ್ತದೆ. ಈ ಕುರಿತಂತೆ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಪ್ರತ್ಯೇಕವಾಗಿ ಹೊರಡಿಸುತ್ತವೆ ಎಂದು ತಿಳಿಸಲಾಗಿರುತ್ತದೆ.

ದಿನಾಂಕ 02.09.2024ರ ಪತ್ರದಲ್ಲಿ ಜಂಟಿ ನಿರ್ದೇಶಕರು (ಹಣಕಾಸು), ಪೌರಾಡಳಿತ ನಿರ್ದೇಶನಾಲಯ ರವರು, ಆರ್ಥಿಕ ಇಲಾಖೆಯ ಆದೇಶ ದಿನಾಂಕ 22.07.2024ದಲ್ಲಿ, 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನ ಅನ್ವಯ ಪರಿಷ್ಕೃತ ವೇತನ ಶ್ರೇಣಿಗಳನ್ನು ಅಂಗೀಕರಿಸಿ, ಕಂಡಿಕೆ (8) ರಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳಿಗೆ ಈ ಸೌಲಭ್ಯವನ್ನು ಯಥಾವತ್ತಾಗಿ ವಿಸ್ತರಿಸಿ ಆದೇಶಿಸಲಾಗಿರುತ್ತದೆ ಎಂದು ತಿಳಿಸಿರುತ್ತಾರೆ .

ಆರ್ಥಿಕ ಇಲಾಖೆಯ ಆದೇಶ ದಿನಾಂಕ 17.08.2024 ಮತ್ತು 23.08.2024 ರ ಆದೇಶದಲ್ಲಿ, ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ನಿಗದಿಪಡಿಸುವ ಕುರಿತು ವಿಸ್ತಾರವಾದ ಆದೇಶವನ್ನು ಹೊರಡಿಸಲಾಗಿರುತ್ತದೆ. ಸದರಿ ಆದೇಶದ ಕಂಡಿಕೆ (11.1) ರಲ್ಲಿ ಪರಿಷ್ಕೃತ ವೇತನ ಶ್ರೇಣಿಗಳ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಸಹ ವಿಸ್ತರಿಸಲಾಗಿರುತ್ತದೆ. ಈ ಕುರಿತಂತೆ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಪ್ರತ್ಯೇಕವಾಗಿ ಆದೇಶ ಹೊರಡಿಸುವಂತೆ ನಮೂದಿಸಲಾಗಿರುತ್ತದೆ.

ಸರ್ಕಾರದ ಆದೇಶ ದಿನಾಂಕ 28.08.2024ರಲ್ಲಿ ರಾಜ್ಯ ಸರ್ಕಾರಿ ನಿವೃತ್ತಿದಾರರಿಗೆ ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳನ್ನು ಪರಿಷ್ಕರಿಸಿ ಆದೇಶ ಹೊರಡಿಸಲಾಗಿರುತ್ತದೆ. ಆದ್ದರಿಂದ, 7ನೇ ವೇತನ ಆಯೋಗದ ಶಿಫಾರಸಿನಂತೆ 2024ರ ಪರಿಷ್ಕೃತ ಪಿಂಚಣಿ ಶ್ರೇಣಿಯನ್ನು ಮಹಾನಗರ ಪಾಲಿಕೆ ವೃಂದದ ಪಿಂಚಣಿದಾರರಿಗೆ ಯಥಾವತ್ತಾಗಿ ವಿಸ್ತರಿಸಲು ಆದೇಶ ಹೊರಡಿಸುವಂತೆ ಜಂಟಿ ನಿರ್ದೇಶಕರು (ಹಣಕಾಸು), ಪೌರಾಡಳಿತ ನಿರ್ದೇಶನಾಲಯ ಅವರು ಕೋರಿರುತ್ತಾರೆ.

ಜಂಟಿ ನಿರ್ದೇಶಕರು (ಹಣಕಾಸು), ಪೌರಾಡಳಿತ ನಿರ್ದೇಶನಾಲಯ ಅವರ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ. 7ನೇ ರಾಜ್ಯ ವೇತನ ಆಯೋಗವು ಶಿಫಾರಸಉ ಮಾಡಿರುವಂತೆ, ಸರ್ಕಾರದ ಆದೇಶ 22.07.2024, 17.08.2024 3 23.08.2024 ಹೊರಡಿಸಲಾಗಿದ್ದು, ಸದರಿ ಆದೇಶಗಳಲ್ಲಿ ತಿಳಿಸಿರುವಂತೆ, 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನ ಅನ್ವಯ ಪರಿಷ್ಕೃತ ವೇತನ ಶ್ರೇಣಿಗಳನ್ನು ಮತ್ತು ಸೌಲಭ್ಯಗಳನ್ನು ಯಥಾವತ್ತಾಗಿ ರಾಜ್ಯದ 10 ಮಹಾನಗರ ಪಾಲಿಕೆಗಳ ನೌಕರರುಗಳಿಗೂ ಸಹಾ ಯಥಾವತ್ತಾಗಿ ಜಾರಿಗೊಳಿಸಲು ಆದೇಶಿಸಿದೆ. ಇದಕ್ಕೆ ತಗಲುವ ವೆಚ್ಚವನ್ನು ರಾಜ್ಯ ಹಣಕಾಸು ಆಯೋಗದ ವೇತನ ಅನುದಾನದಿಂದ ಭರಿಸತಕ್ಕದ್ದು ಎಂದು ಆದೇಶ ಹೇಳಿದೆ.

ಅಲ್ಲದೇ 7ನೇ ರಾಜ್ಯ ವೇತನ ಆಯೋಗವು ಶಿಫಾರಸು ಮಾಡಿರುವಂತೆ ಸರ್ಕಾರದ ಆದೇಶ ದಿನಾಂಕ 28.08.2024ರನ್ವಯ ಮಹಾನಗರ ಪಾಲಿಕೆ ವೃಂದದ ನಿವೃತ್ತ ವೇತನದಾರರು/ ಕುಟುಂಬ ಪಿಂಚಣಿದಾರರಿಗೆ 2024ರ ಪರಿಷ್ಕೃತ ಪಿಂಚಣಿ ಸೌಲಭ್ಯವನ್ನು ಜಾರಿಗೆ ಬರುವಂತೆ ಯಥಾವತ್ತಾಗಿ ಜಾರಿಗೊಳಿಸಲು ಆದೇಶಿಸಿದೆ. ಇದಕ್ಕೆ ತಗಲುವ ವೆಚ್ಚವನ್ನು ರಾಜ್ಯ ಸಂಚಿತ ನಿಧಿಯಿಂದ ಭರಿಸತಕ್ಕದ್ದು ಎಂದು ಆದೇಶಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+