7th Pay Commission; ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಳ?
ಬೆಂಗಳೂರು, ಮೇ 17: ಕರ್ನಾಟಕದ ಸರ್ಕಾರಿ ನೌಕರರು, ನಿವೃತ್ತ ನೌಕರರು ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗಾಗಿ ಕಾದು ಕುಳಿತಿದ್ದಾರೆ. ರಾಜ್ಯದಲ್ಲಿ ಮತದಾನ ಮಗಿದರೂ ಸಹ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವ ತನಕ ವರದಿ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ.
ರಾಜ್ಯದಲ್ಲಿ ಜೂನ್ 6ರ ತನಕ ಲೋಕಸಭೆ ಚುನಾವಣೆ ನೀತಿ ಸಂಹಿತೆ, ಜೂನ್ 12ರ ತನಕ ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಬಳಿಕ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 7ನೇ ವೇತನಆಯೋಗದ ವರದಿ ಜಾರಿ ಬಗ್ಗೆ ತೀರ್ಮಾನವನ್ನು ಕೈಗೊಳ್ಳುವ ನಿರೀಕ್ಷೆ ಇದೆ.

ಈಗಾಗಲೇ ಮುಖ್ಯಮಂತ್ರಿಗಳು, ರಾಜ್ಯದ 7ನೇ ವೇತನ ಆಯೋಗವು ಮಾರ್ಚ್ 16ರಂದು ವರದಿ ಸಲ್ಲಿಸಿದೆ. ಸರ್ಕಾರಿ ನೌಕರರ ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಸರ್ಕಾರಿ ನೌಕರರಿಗೆ ಭರವಸೆ ಕೊಟ್ಟಿದ್ದಾರೆ.
1/7/2022ರಿಂದ ವೇತನ ಆಯೋಗದ ಶಿಫಾರಸು ಜಾರಿಗೆ ಬರಬೇಕು ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಆದರೆ ಸರ್ಕಾರ ಯಾವಾಗಿನಿಂದ, ಎಷ್ಟು ಏರಿಕೆ ಮಾಡಬೇಕು? ಎಂದು ಸರ್ಕಾರ ಅಂತಿಮ ತೀರ್ಮಾನವನ್ನು ಕೈಗೊಳ್ಳಲಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ವೇತನ ಎಷ್ಟು ಏರಿಕೆಯಾಗಲಿದೆ? ಎಂಬ ಪೋಸ್ಟ್ ವೈರಲ್ ಆಗಿದೆ.
ವೇತನ ಎಷ್ಟು ಏರಿಕೆ?: 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಬಂದರೆ ಮೂಲ ವೇತನ, ತುಟ್ಟಿಭತ್ಯೆ, ಮೂಲ ವೇತದನ ಮೇಲೆ ಫಿಟ್ಮೆಂಟ್, ಮನೆ ಬಾಡಿಗೆ ಭತ್ಯೆ, ಎಂಇಡಿ, ಸಿಸಿಎ, ವೇತನ ಆಯೋಗದ ಶಿಫಾರಸಿನಂತೆ ಆಗುವ ಏರಿಕೆ, ವೇತನದಲ್ಲಿ ಒಟ್ಟು ಆಗುವ ಹೆಚ್ಚಳದ ಕುರಿತು ಪಟ್ಟಿಯನ್ನು ನೀಡಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಾಕಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದೊಡ್ಡಬಳ್ಳಾಪುರ ಶಾಖೆ ಉಪಾಧ್ಯಕ್ಷ ವಿ. ಧನಂಜಯ ಅವರು ಸಿದ್ಧಪಡಿಸಿರುವ ಪಟ್ಟಿ ಇದಾಗಿದೆ. ಮೂಲ ವೇತನ 17000 ರೂ. ವೇತನ ಶ್ರೇಣಿಯಿಂದ 150600 ಮೂಲ ವೇತನದ ತನಕ ಯಾವ ವರ್ಗದವರಿಗೆ ಎಷ್ಟು ವೇತನ, ಫಿಟ್ಮೆಂಟ್, ಮನೆ ಬಾಡಿಗೆ ಭತ್ಯೆ, ತುಟ್ಟಿಭತ್ಯೆ ಎಲ್ಲಾ ಸೇರಿ ಒಟ್ಟು ವೇತನ ಎಷ್ಟು ಏರಿಕೆಯಾಗಲಿದೆ? ಎಂದು ಪಟ್ಟಿಯಲ್ಲಿ ಮಾಹಿತಿ ನೀಡಲಾಗಿದೆ.
ಇದು 7ನೇ ವೇತನ ಆಯೋಗವಾಗಲಿ, ಸರ್ಕಾರವಾಗಲಿ ಬಿಡುಗಡೆ ಮಾಡಿರುವ ಅಧಿಕೃತ ಪಟ್ಟಿಯಲ್ಲ. ಆಯೋಗ ಸಲ್ಲಿಸಿರುವ ಶಿಫಾರಸು ಆಧರಿಸಿ ಸರ್ಕಾರ ಅಷ್ಟು ಏರಿಕೆಗೆ ಒಪ್ಪಿದರೆ ಆಗಬಹುದಾದ ವೇತನ ಏರಿಕೆ ಲೆಕ್ಕಾಚಾರವಾಗಿದೆ. ಹಲವು ಸರ್ಕಾರಿ ನೌಕರರು ಇದನ್ನು ವಾಟ್ಸಪ್ ಗ್ರೂಪ್‌ಗಳಲ್ಲಿ ಫಾರ್ವರ್ಡ್ ಮಾಡುತ್ತಿದ್ದಾರೆ.
ಆದರೆ ಈ ವೇತನ ಶ್ರೇಣಿ ಜಾರಿಯಾಗಲು ಸರ್ಕಾರ 7ನೇ ವೇತನ ಆಯೋಗ ಶಿಫಾರಸು ಮಾಡಿರುವ ಅಷ್ಟು ಅಂಶಗಳನ್ನು ಯಥಾವತ್ ಒಪ್ಪಬೇಕು. ಬಳಿಕ ಯಾವಾಗಿನಿಂದ ಜಾರಿಗೆ ಬರಬೇಕು? ಎಂದು ತೀರ್ಮಾನ ಮಾಡಬೇಕು ಬಳಿಕ ವೇತನ ಎಷ್ಟು ಏರಿಕೆಯಾಗಲಿದೆ? ಎಂಬುದು ತಿಳಿಯಲಿದೆ.
'7ನೇ ರಾಜ್ಯ ವೇತನ ಆಯೋಗ ತನ್ನ ವರದಿಯಲ್ಲಿ ಕನಿಷ್ಠ ಮೂಲವೇತನವನ್ನು ರೂ. 17,000ದಿಂದ ರೂ. 27,000ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕುಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವೈರಲ್ ಆಗುತ್ತಿರುವ ಪೋಸ್ಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ಫೆಬ್ರವರಿ 16ರಂದು ಮಂಡಿಸಿದ 2024-25ನೇ ಸಾಲಿನ ಬಜೆಟ್‌ನಲ್ಲಿ 7ನೇ ವೇತನ ಆಯೋಗದ ವರದಿ ಜಾರಿಗಾಗಿಯೇ ಅನುದಾನ ಮೀಸಲಿಟ್ಟಿದ್ದಾರೆ. ಆದರೆ ವೇತನ ಎಷ್ಟು ಏರಿಕೆಗೆ ಸರ್ಕಾರ ಒಪ್ಪಿಗೆ ನೀಡಲಿದೆ ಎಂದು ಕಾದು ನೋಡಬೇಕಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ











Click it and Unblock the Notifications