7th Pay Commission: ಅರಣ್ಯ ಇಲಾಖೆಯ Forest Guard ವೇತನ ಎಷ್ಟು ಏರಿಕೆ?
ಬೆಂಗಳೂರು, ಸೆಪ್ಟೆಂಬರ್ 03: ಕರ್ನಾಟಕ ಸರ್ಕಾರ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ ನೀಡಿರುವ 558 ಪುಟಗಳ ಸಂಪುಟ-1ರ ವರದಿಯನ್ನು ಅಂಗೀಕರಿಸಿದೆ. ಆಗಸ್ಟ್ 2024ರಿಂದಲೇ 7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳು ಜಾರಿಗೆ ಬಂದಿವೆ. ವಿವಿಧ ಇಲಾಖೆಗಳ ಸರ್ಕಾರಿ ನೌಕರರ ವೇತನ, ಪಿಂಚಣಿ ಮತ್ತು ಭತ್ಯೆಗಳಲ್ಲಿ ಏರಿಕೆಯಾಗಿದೆ. ಯಾವ ನೌಕರರಿಗೆ ಎಷ್ಟು ವೇತನ ಏರಿಕೆ? ಎಂಬ ಚರ್ಚೆಗಳು ನಡೆಯುತ್ತಿವೆ. ಅರಣ್ಯ ಇಲಾಖೆಯ ಅರಣ್ಯ ರಕ್ಷಕ (Forest guard) ವೇತನ ಎಷ್ಟು? ಎಂದು ಮಾಹಿತಿ ನೀಡಲಾಗಿದೆ.
ಡಾ. ರೇಜು ಎಂ. ಟಿ. ಸರ್ಕಾರದ ಕಾರ್ಯದರ್ಶಿ (ವೆಚ್ಚ) ಆರ್ಥಿಕ ಇಲಾಖೆ ಆದೇಶದಲ್ಲಿ ಅರಣ್ಯ ರಕ್ಷಕರ ವೇತನ ಎಷ್ಟು ಹೆಚ್ಚಳವಾಗಲಿದೆ? ಎಂದು ವಿವರವಾದ ಆದೇಶವನ್ನು ಹೊರಡಿಸಿದ್ದಾರೆ. ಹಾಗಾದರೆ ಅರಣ್ಯ ರಕ್ಷಕರ ವೇತನ ಎಷ್ಟು ಏರಿಕೆ? ಎಂಬ ವಿವರ ಇಲ್ಲಿದೆ.

ಅರಣ್ಯ ರಕ್ಷಕರ ವೇತನ: ಅರಣ್ಯ ರಕ್ಷಕರ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರನ 2018ರ ಪರಿಷ್ಕೃತ ವೇತನ ಶ್ರೇಣಿಯಲ್ಲಿನ ವೇತನದ ದೃಷ್ಟಾಂತ ಉದಾಹರಣೆ ಈ ಕೆಳಕಂಡಂತಿದೆ. 1ನೇ ಜುಲೈ 2022ರಂದು ಧಾರಣೆ ಮಾಡಿದ ಹುದ್ದೆಯ ಪದನಾಮ. ಅರಣ್ಯ ರಕ್ಷಕ.
ದಿನಾಂಕ 01.07.2022ರಲ್ಲಿ ಇದ್ದಂತೆ ಪ್ರಸಕ್ತ ವೇತನ ಶ್ರೇಣಿ ರೂ. 21400-500-22400-550-24600- 600-27000-650-29600-750-32600-850-36000-950-39800-1100-42000 ರೂ.ಗಳು.
1ನೇ ಜುಲೈ 2022ರಂದು ಇದ್ದಂತೆ ಪ್ರಸಕ್ತ ವೇತನ ಶ್ರೇಣಿಯಲ್ಲಿ ಮೂಲ ವೇತನ. ರೂ. 25,800. ದಿನಾಂಕ 1/8/2022ರಿಂದ ಜಾರಿಗೆ ಬರುವಂತೆ ಉನ್ನತೀಕರಿಸಲಾದ ವೇತನ ಶ್ರೇಣಿ ರೂ. 23500-550-24600-600-27000-650-29600-750-32600-850-36000-950-39800-1100-46400-1250-47650.
ಕ.ನಾ.ಸ.ನಿಯಮಗಳು, ನಿಯಮ 43 ರನ್ವಯ ಪರಿಷ್ಕರಿಸಲಾದ ವೇತನ ಶ್ರೇಣಿಯಲ್ಲಿ ವೇತನ ಪುನರ್ ನಿಗದಿ. ರೂ. 25,800. ಪ್ರಸಕ್ತ ವೇತನ ಶ್ರೇಣಿಯಲ್ಲಿ ಮುಂದಿನ ವೇತನ ಬಡ್ತಿಯ ದಿನಾಂಕ 1ನೇ ಜುಲೈ 2023.
2024ನೇ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಸರ್ಕಾರಿ ನೌಕರನ ವೇತನವನ್ನು ಈ ಕೆಳಕಂಡಂತೆ ಪುನರ್ ನಿಗದಿಪಡಿಸಿದೆ. ದಿನಾಂಕ 01.07.2022 ರಲ್ಲಿದ್ದಂತೆ ಹುದ್ದೆಗೆ ಅನ್ವಯವಾಗುವ ಪರಿಷ್ಕೃತ ವೇತನ ಶ್ರೇಣಿ. 34100-800-35700-900-39300-1000-43300-1125-47800-1250-52800-1375-58300-1500-64300-1650-67600 ರೂ.ಗಳು.
1ನೇ ಜುಲೈ, 2022 ರಿಂದ ಜಾರಿಗೆ ಬರುವಂತೆ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಕಾಲ್ಪನಿಕವಾಗಿ ನಿಗದಿಪಡಿಸಬೇಕಾದ ಮೂಲ ವೇತನ. ರೂ. 41,300.
ದಿನಾಂಕ 1/8/2022 ರಿಂದ ಜಾರಿಗೆ ಬರುವಂತೆ ಹುದ್ದೆಗೆ ಅನ್ವಯಿಸುವ ಪರಿಷ್ಕೃತ ವೇತನ ಶ್ರೇಣಿ. ರೂ. 37500-900-39300-1000-43300-1125-47800-1250-52800-1375-58300-1500-64300-1650-74200-1900-76100.
ಕ.ನಾ.ಸೇ.ನಿಯಮಗಳು, ನಿಯಮ 43 ರನ್ವಯ ಮೇಲ್ದರ್ಜೆಗೇರಿಸಲಾದ ವೇತನ ಶ್ರೇಣಿಯ ಸಂವಾದಿ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ಪುನರ್ ನಿಗದಿ. ರೂ. 41,300.
01.07.2023 ರಂದು ಲಭ್ಯವಿರುವ ವಾರ್ಷಿಕ ವೇತನ ಬಡ್ತಿಯನ್ನು ಬಿಡುಗಡೆ ಮಾಡಿ ಕಾಲ್ಪನಿಕವಾಗಿ ವೇತನ ನಿಗದಿ. ರೂ. 42,300.
01/07/2023ರಂದು ಲಭ್ಯವಿರುವ ವಾರ್ಷಿಕ ವೇತನ ಬಡ್ತಿಯನ್ನು ಬಿಡುಗಡೆ ಮಾಡಿ ಕಾಲ್ಪನಿಕವಾಗಿ ವೇತನ ನಿಗದಿ. ರೂ. 42,300. ಆರ್ಥಿಕ ಸೌಲಭ್ಯವು 1/8/2024 ರಿಂದ ಪ್ರಾಪ್ತವಾಗುತ್ತದೆ. ಮುಂದಿನ ವೇತನ ಬಡ್ತಿಯ ದಿನಾಂಕ 1ನೇ ಜುಲೈ 2025.
ಕಛೇರಿ ಅಧೀಕ್ಷಕರ ವೇತನ: ಕಛೇರಿ ಅಧೀಕ್ಷಕರ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರನ 2018ರ ಪರಿಷ್ಕೃತ ವೇತನ ಶ್ರೇಣಿಯಲ್ಲಿನ ವೇತನದ ದೃಷ್ಟಾಂತ ಉದಾಹರಣೆ. 1ನೇ ಜುಲೈ 2022 ರಂದು ಧಾರಣೆ ಮಾಡಿದ ಹುದ್ದೆಯ ಪದನಾಮ. ಕಛೇರಿ ಅಧೀಕ್ಷಕರು. ಪ್ರಸಕ್ತ ವೇತನ ಶ್ರೇಣಿ ರೂ. 40900-1100-46400-1250-53900- 1450-62600-1650-72500-1900-78200.
1ನೇ ಜುಲೈ, 2022 ರಂದು ಇದ್ದಂತೆ ಪ್ರಸಕ್ತ ವೇತನ ಶ್ರೇಣಿಯಲ್ಲಿ ಮೂಲ ವೇತನ. 65,900. ಪ್ರಸಕ್ತ ವೇತನ ಶ್ರೇಣಿಯಲ್ಲಿ ಮುಂದಿನ ವೇತನ ಬಡ್ತಿಯ ದಿನಾಂಕ 1ನೇ ಜನವರಿ, 2023.
2024ನೇ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಸರ್ಕಾರಿ ನೌಕರನ ವೇತನವನ್ನು ಈ ಕೆಳಕಂಡಂತ ಪುನರ್ ನಿಗದಿಪಡಿಸಿದೆ. ಹುದ್ದೆಗೆ ಅನ್ವಯವಾಗುವ ಪರಿಷ್ಕೃತ ವೇತನ ಶ್ರೇಣಿ. 65950-1650-74200-1900-85600-2300-99400-2700-115600-3100-124900 ರೂ.ಗಳು.
1ನೇ ಜುಲೈ, 2022ರಿಂದ ಜಾರಿಗೆ ಬರುವಂತೆ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಕಾಲ್ಪನಿಕವಾಗಿ ನಿಗದಿಪಡಿಸಬೇಕಾದ ಮೂಲ ವೇತನ. ರೂ. 1,04,800.
ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳು, 2024ರ ನಿಯಮ 8ರ ಉಪನಿಯಮ (1)ರನ್ವಯ ದಿನಾಂಕ 01.01.2023ರಂದು ಲಭ್ಯವಿದ್ದ ವಾರ್ಷಿಕ ವೇತನ ಬಡ್ತಿಯನ್ನು ಬಿಡುಗಡೆ ಮಾಡಿ ಕಾಲ್ಪನಿಕವಾಗಿ ವೇತನ ನಿಗದಿ. ರೂ. 1,07,500.
01.07.2024ರಂದು ಲಭ್ಯವಿರುವ ವಾರ್ಷಿಕ ವೇತನ ಬಡ್ತಿಯನ್ನು ಬಿಡುಗಡೆ ಮಾಡಿ ಕಾಲ್ಪನಿಕವಾಗಿ ವೇತನ ನಿಗದಿ. ರೂ. 1,10,200. ಆರ್ಥಿಕ ಸೌಲಭ್ಯವು 01.08.2024 ರಿಂದ ಪ್ರಾಪ್ತವಾಗುತ್ತದೆ. ಮುಂದಿನ ವಾರ್ಷಿಕ ವೇತನ ಬಡ್ತಿ 1ನೇ ಜನವರಿ 2025.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications