7th Pay Commission; ಸರ್ಕಾರದ ಮೇಲೆ ಸರ್ಕಾರಿ ನೌಕರರಿಗೆ ಭರವಸೆ ಏಕೆ?
ಬೆಂಗಳೂರು, ಮೇ 22: ಕರ್ನಾಟಕದ ಸರ್ಕಾರಿ ನೌಕರರು ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿ ಯಾವಾಗ ಎಂದು ಎದುರು ನೋಡುತ್ತಿದ್ದಾರೆ. ಸರ್ಕಾರ ಆಯೋಗದ ವರದಿ ಸ್ವೀಕಾರ ಮಾಡಿದ್ದರೂ ಸಹ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣ ವರದಿ ಅನುಷ್ಠಾನದ ಬಗ್ಗೆ ಸರ್ಕಾರ ಕ್ರಮ ಕೈಗೊಂಡಿಲ್ಲ.
ರಾಜ್ಯದಲ್ಲಿ ಲೋಕಸಭೆ ಚುನಾವಣೆ ನೀತಿ ಸಂಹಿತೆ, ವಿಧಾನ ಪರಿಷತ್‌ನ 6 ಮತ್ತು 11 ಸ್ಥಾನಗಳ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಜೂನ್ 15ಕ್ಕೆ ಎಲ್ಲಾ ನೀತಿ ಸಂಹಿತೆಗಳು ಮುಕ್ತಾಯಗೊಳ್ಳಲಿವೆ. ಲೋಕಸಭೆ ಚುನಾವಣೆ ನೀತಿ ಸಂಹಿತೆಯಲ್ಲಿ ಕೆಲವು ಸಡಿಲಿಕೆ ಮಾಡಲಾಗಿದೆ. ಆದರೆ ಘೋಷಣೆಗಳನ್ನು ಮಾಡುವಂತಿಲ್ಲ.

ಮಾರ್ಚ್‌ನಲ್ಲಿ 7ನೇ ವೇತನ ಆಯೋಗದ ವರದಿ ಸ್ವೀಕಾರ ಮಾಡಿದ ಹಣಕಾಸು ಸಚಿವ, ಮುಖ್ಯಮಂತ್ರಿ ಸಿದ್ದರಾಮಯ್ಯ, "7ನೇ ರಾಜ್ಯ ವೇತನ ಆಯೋಗ ತನ್ನ ವರದಿಯಲ್ಲಿ ಕನಿಷ್ಠ ಮೂಲವೇತನವನ್ನು ರೂ. 17,000ದಿಂದ ರೂ. 27,000ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕುಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ" ಎಂದು ಹೇಳಿದ್ದಾರೆ.
ನೌಕರರಿಗೆ ಭರವಸೆ ಏಕೆ?; ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ನೌಕರರಿಗೆ ಭರವಸೆಯನ್ನು ನೀಡಿದ್ದಾರೆ. ಬಜೆಟ್ ಭಾಷಣದಲ್ಲಿ, ಸರ್ಕಾರಿ ನೌಕರರ ಸಂಘದ ನಿಯೋಗ ಭೇಟಿ ಮಾಡಿದಾಗಲೂ ಅಭಯ ನೀಡಿದ್ದಾರೆ.
ಫೆಬ್ರವರಿಯಲ್ಲಿ 7ನೇ ವೇತನ ಆಯೋಗದ ವರದಿ ಅನುಷ್ಠಾನ ಸೇರಿದಂತೆ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರವನ್ನು ಆಯೋಜನೆ ಮಾಡಿತ್ತು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಮಹಾ ಸಮ್ಮೇಳನ ಯಶಸ್ವಿಯಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಮಹಾ ಸಮ್ಮೇಳನದಲ್ಲಿ ಪಾಲ್ಗೊಂಡು 7ನೇ ವೇತನ ಆಯೋಗದ ವರದಿ ಜಾರಿ ಕುರಿತು ಭರವಸೆಯನ್ನು ನೀಡಿದ್ದರು. ಆದರೆ ವರದಿ ಸ್ವೀಕಾರ ಮಾಡಿದ ಬಳಿಕ ನೀತಿ ಸಂಹಿತೆ ಜಾರಿಗೆ ಬಂದಿದೆ.
ಮಂಗಳೂರಿನಲ್ಲಿ ಮಾತನಾಡಿದ ಕರ್ನಾಟಕ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಅವರು, "7ನೇ ವೇತನ ಆಯೋಗದ ಶಿಫಾರಸುಗಳು ಜೂನ್‌ನಲ್ಲಿ ಜಾರಿಯಾಗುವ ಸಾಧ್ಯತೆ ಇದೆ. ಹಳೆಯ ಪಿಂಚಣಿ ಯೋಜನೆಯನ್ನು ಶೀಘ್ರದಲ್ಲಿ ಪುನರಾರಂಭಿಸುವ ಕುರಿತು ಸರ್ಕಾರ ನಿರ್ಧರಿಸಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದ್ದಾಗ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ 19 ನವೆಂಬರ್ 2022ರಲ್ಲಿ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ 7ನೇ ವೇತನ ಆಯೋಗ ರಚನೆ ಮಾಡುವ ಆದೇಶ ಹೊರಡಿಸಲಾಯಿತು. ಆದರೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಿಲ್ಲ.
2023ರ ಏಪ್ರಿಲ್‌ನಿಂದ ಜಾರಿಯಾಗುವಂತೆ ಶೇ 17ರ ಮಧ್ಯಂತರ ಪರಿಹಾರ ಘೋಷಣೆ ಮಾಡಲಾಗಿತ್ತು. 2023-24ರ ಬಜೆಟ್‌ನಲ್ಲಿಯೂ ಪರಿಹಾರ ನೀಡಲು ಯಾವುದೇ ಅನುದಾನ ಒದಗಿಸಲಿಲ್ಲ. 2024-25ರ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯೋಗದ ವರದಿ ಬಂದ ನಂತರ ಮುಂದಿನ ಕ್ರಮ ಎಂದು ಭರವಸೆ ನೀಡಿದರು.
ಸರ್ಕಾರ ನೀಡಿರುವ ಭರವಸೆಯಂತೆ 7ನೇ ವೇತನ ಆಯೋಗದ ವರದಿ ಜಾರಿಗೊಳಿಸಬೇಕಿದೆ. ಆಯೋಗ ತನ್ನ ಶಿಫಾರಸಿನಲ್ಲಿ 1/7/2022ರಿಂದ ಕಾಲ್ಪನಿಕವಾಗಿ ವರದಿ ಅನ್ವಯವಾಗುತ್ತದೆ ಎಂದು ಹೇಳಿದೆ. ಆದರೆ ಯಾವಾಗಿನಿಂದ ಜಾರಿಗೆ ಬರಬೇಕು ಎಂದು ಸರ್ಕಾರ ತೀರ್ಮಾನ ಮಾಡಲಿದೆ.
ವಿವಿಧ ವೇದಿಕೆಗಳಲ್ಲಿ ಸರ್ಕಾರಿ ನೌಕರರ ಬೇಡಿಕೆಯಂತೆ 7ನೇ ವೇತನ ಆಯೋಗ ವರದಿ ಜಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿರುವ ಕಾರಣ ಸುಮಾರು 5 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರು, ನಿವೃತ್ತ ನೌಕರರು ಆಯೋಗದ ವರದಿ ಜಾರಿಗಾಗಿ ಸರ್ಕಾರದ ಮೇಲೆ ಭರವಸೆ ಇಟ್ಟುಕೊಂಡು ಕಾದು ಕುಳಿತಿದ್ದಾರೆ.
-
Davanagere By Election: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ: ಸಿ.ಎಂ ಸಿದ್ದರಾಮಯ್ಯ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications