7th Pay Commission; ಸರ್ಕಾರಿ ನೌಕರರ ಪ್ರತಿಭಟನೆ, ಗುಪ್ತಚರ ಮಾಹಿತಿ
ಬೆಂಗಳೂರು, ಫೆಬ್ರವರಿ 29: ಕರ್ನಾಟಕ ಸರ್ಕಾರದ ಮುಂದೆ ರಾಜ್ಯ ಸರ್ಕಾರಿ ನೌಕರರು ಪ್ರಮುಖವಾಗಿ ಇಟ್ಟಿರುವ ಬೇಡಿಕೆ 7ನೇ ವೇತನ ಆಯೋಗದ ವರದಿ ಜಾರಿ ಕುರಿತು ಸ್ಪಷ್ಟವಾದ ಭರವಸೆ ನೀಡುವುದು. ಆದರೆ, ಇದು ಆಗಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್‌ನಲ್ಲಿ, ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿಯೂ ಈ ಕುರಿತು ಸ್ಪಷ್ಟವಾದ ಭರವಸೆ ಕೊಟ್ಟಿಲ್ಲ. ಇದರಿಂದಾಗಿ ಸರ್ಕಾರಿ ನೌಕರರು ಅಸಮಾಧಾನಗೊಂಡಿದ್ದಾರೆ. ಇದೇ ಕಾರಣಕ್ಕೆ 7ನೇ ವೇತನ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಸರ್ಕಾರಿ ನೌಕರರು ಮಾರ್ಚ್ 1ರಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಪ್ರತಿಭಟನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧೀನದಲ್ಲಿರುವ ರಾಜ್ಯ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಗುಪ್ತಚರ ಇಲಾಖೆ ವರದಿಯಲ್ಲಿ ಏನಿದೆ?
ಫೆಬ್ರವರಿ 28 ರಂದು ನಿರ್ದೇಶಕರು ರಾಜ್ಯ ಗುಪ್ತವಾರ್ತೆ, ಬೆಂಗಳೂರು ಇವರ ಸಹಿ ಇರುವ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಪೊಲೀಸ್ ಆಯುಕ್ತರು, ಬೆಂಗಳೂರು, ಮೈಸೂರು, ಬೆಳಗಾವಿ, ಮಂಗಳೂರು, ಕಲಬುರಗಿ ಮತ್ತು ಹುಬ್ಬಳ್ಳಿ - ಧಾರವಾಡ ನಗರಗಳು. ಎಲ್ಲಾ ಜಿಲ್ಲೆಯ ಪೊಲೀಸ್ ಅಧೀಕ್ಷಕರುಗಳಿಗೆ ಈ ವರದಿ ನೀಡಿದ್ದು, ಮುನ್ಸೂಚನಾ ಪತ್ರ ಎಂಬ ಶೀರ್ಷಿಕೆಯಲ್ಲಿ ಈ ಮಾಹಿತಿಯನ್ನು ಸಲ್ಲಿಕೆ ಮಾಡಲಾಗಿದೆ.
ಪೊಲೀಸ್ ಆಯುಕ್ತರು, ಬೆಂಗಳೂರು, ಮೈಸೂರು, ಬೆಳಗಾವಿ, ಮಂಗಳೂರು, ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ನಗರಗಳು, ಎಲ್ಲಾ ಜಿಲ್ಲೆಯ ಪೊಲೀಸ್ ಅಧೀಕ್ಷಕರುಗಳಿಗೆ ಮತ್ತು ಎಲ್ಲಾ ವಲಯಗಳ ಐ.ಜಿ.ಪಿ ರವರುಗಳಿಗೆ, ಎಲ್ಲಾ ರಾಗುವಾ ವಿಭಾಗದ/ಘಟಕದ ಉಪ ನಿರ್ದೇಶಕರು, ಸಹಾಯಕ ನಿರ್ದೇಶಕರು & ಮುಖ್ಯ ಗುಪ್ತಚರ ಅಧಿಕಾರಿಗಳಿಗೆ ಈ ಮುನ್ಸೂಚನಾ ಪತ್ರವನ್ನು ರಾಜ್ಯ ಗುಪ್ತವಾರ್ತೆ ನಿರ್ದೇಶಕರು ಸಲ್ಲಿಸಿದ್ದಾರೆ.
"ದಿನಾಂಕ: 01.03.2024 ರಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು 7ನೇ ವೇತನ ಆಯೋಗವನ್ನು ಶೀಘ್ರವಾಗಿ ಜಾರಿಗೆ ತರಬೇಕು ಮತ್ತು ಓ.ಪಿ.ಎಸ್. ಅನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ, ಅನಿರ್ಧಿಷ್ಟಾವಧಿ ಮುಷ್ಕರ (ಪೆನ್ ಡೌನ್ ಚಳವಳಿ) ನಡೆಸುವುದಾಗಿ ತಿಳಿದು ಬಂದಿರುತ್ತದೆ. ಈ ಸಂಬಂಧ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆ ಇರುತ್ತದೆ" ಎಂದು ಮುನ್ಸೂಚನಾ ಪತ್ರದಲ್ಲಿ ತಿಳಿಸಲಾಗಿದೆ.

ಪೆನ್ ಡೌನ್ ಚಳವಳಿಗೆ ಸಿದ್ದರಾದ ನೌಕರರು!
ರಾಜ್ಯ ಸರ್ಕಾರಿ ನೌಕರರು ಸಮ್ಮೇಳನ ನಡೆಸಿ ಸರ್ಕಾರದ ಮುಂದೆ ಏಳನೇ ವೇತನ ಆಯೋಗ ಸೇರಿದಂತೆ ವಿವಿಧ ಬೇಡಿಕೆಗಳನ್ನು ಇಟ್ಟಿದ್ದರು. ಆದರೆ, ಸಮ್ಮೇಳನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಳನೇ ವೇತನ ಆಯೋಗದ ಜಾರಿ ಕುರಿತು ಬರೀ ಭರವಸೆ ನೀಡಿದ್ದಾರೆ. ಹೀಗಾಗಿಯೇ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಿದ್ಧರಾಗಿದ್ದಾರೆ.
ಮುಷ್ಕರ ನಡೆಸುವ ಬಗ್ಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಕೂಡ ಬಹಿರಂಗವಾಗಿಯೇ ಹೇಳಿದ್ದಾರೆ. ಸಮ್ಮೇಳನದಲ್ಲಿಯೇ ವೇತನ ಆಯೋಗದ ಜಾರಿ ಬಗ್ಗೆ ಘೋಷಣೆಯಾಗದ ಬಗ್ಗೆ ಹಲವು ನೌಕರರನು ಅಸಮಾಧಾನ ವ್ಯಕ್ತಪಡಿಸಿದ್ದರು. ಇನ್ನು, ಸರ್ಕಾರ ನೀಡಿರುವ ಗಡುವಿನ ತನಕ ನಾವು ಶಾಂತರಾಗಿ ಕಾಯೋಣ ಗಡುವು ಮುಗಿದ ಮೇಲೆ ನಿರ್ಧಾರ ತೆಗೆದುಕೊಳ್ಳೋಣ ಎಂದು ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಗುಪ್ತಚರ ಇಲಾಖೆ ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ಮಾಹಿತಿ ನೀಡಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications