7th Pay Commission; ಜನವರಿ 18ರಂದು ಮಹತ್ವದ ಘೋಷಣೆ?

ಬೆಂಗಳೂರು, ಜನವರಿ 16: ಕರ್ನಾಟಕದ ಸರ್ಕಾರಿ ನೌಕರರು 7ನೇ ರಾಜ್ಯ ವೇತನ ಆಯೋಗದ ವರದಿ ಜಾರಿಗೊಳಿಸಲು ಒತ್ತಾಯಿಸುತ್ತಿದ್ದಾರೆ. ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಸರ್ಕಾರ ಈ ಕುರಿತು ನಿಲುವು ಪ್ರಕಟಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಸೋಮವಾರ ಹಾವೇರಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, "ಮಾರ್ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವುದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು" ಎಂದು ಹೇಳಿದ್ದಾರೆ.

7th Pay Commission Report Big Announcement On January 18

2024-25ನೇ ಸಾಲಿನ ಬಜೆಟ್‌ನಲ್ಲಿಯೇ 7ನೇ ರಾಜ್ಯ ವೇತನ ಆಯೋಗದ ವರದಿ ಜಾರಿಗೊಳಿಸುವ ಕುರಿತು ಸರ್ಕಾರ ಘೋಷಣೆ ಮಾಡುವ ನಿರೀಕ್ಷೆ ಇದೆ. ಬಜೆಟ್ ಪೂರ್ವ ಸಭೆಯಲ್ಲಿಯೂ ಈ ಕುರಿತು ಒತ್ತಾಯಿಸಲು ರಾಜ್ಯ ಸರ್ಕಾರಿ ನೌಕರರ ಸಂಘ ತೀರ್ಮಾನಿಸಿದೆ.

ಜನವರಿ 18ರಂದು ಘೋಷಣೆ; ಕರ್ನಾಟಕ ಸರ್ಕಾರ 7ನೇ ರಾಜ್ಯ ವೇತನ ಆಯೋಗದ ಅವಧಿಯನ್ನು 15/3/2023ರ ತನಕ ವಿಸ್ತರಣೆ ಮಾಡಿ ನವೆಂಬರ್‌ನಲ್ಲಿ ಆದೇಶ ಹೊರಡಿಸಿದೆ. ಆದರೆ ಆ ವೇಳೆಗೆ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿ ನೀತಿ ಸಂಹಿತೆ ಜಾರಿಗೆ ಬರುವ ನಿರೀಕ್ಷೆ ಇದೆ.

ವೇತನ ಆಯೋಗದ ವರದಿ ಜಾರಿಗೊಳಿಸಲು ಒತ್ತಾಯಿಸುತ್ತಿರುವ ಸರ್ಕಾರಿ ನೌಕರರ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನವೊಂದನ್ನು ಕೈಗೊಳ್ಳಲಾಗುತ್ತದೆ.

ಜನವರಿ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿತ್ತು. ಆದರೆ ಅಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಚಿವರ ಸಭೆ ಕರೆದ ಕಾರಣ ಜನವರಿ 18ರಂದು ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರ ಬೇಡಿಕೆಯ ಕುರಿತು ಚರ್ಚಿಸಿ ಅಂದೇ ಮಹತ್ವದ ಘೋಷಣೆಯನ್ನು ಮಾಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿವೆ. ಆದರೆ ಯಾವ ವಿಚಾರ ಚರ್ಚೆಗೆ ಬರಲಿದೆ? ಎಂಬುದು ಮಾತ್ರ ಇನ್ನೂ ತಿಳಿದುಬಂದಿಲ್ಲ.

ಮಾರ್ಚ್‌ 2ನೇ ವಾರದಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಆಗ ಬಜೆಟ್ ಸಹ ಮುಗಿದಿರುತ್ತದೆ. ಆದ್ದರಿಂದ ಫೆಬ್ರವರಿಯಲ್ಲಿಯೇ ವೇತನ ಆಯೋಗದ ವರದಿ ಜಾರಿ ಕುರಿತು ಸರ್ಕಾರ ನಿರ್ಧಾರ ಪ್ರಕಟಿಸಬೇಕು ಎಂಬುದು ಸರ್ಕಾರಿ ನೌಕರರ ಬೇಡಿಕೆಯಾಗಿದೆ.

ಲೋಕಸಭೆ ಚುನಾವಣೆ ಬಳಿಕ ಸಾಲು ಸಾಲು ಚುನಾವಣೆಗಳು ಎದುರಾಗಲಿವೆ. ಆದ್ದರಿಂದ ರಾಜ್ಯ ಸರ್ಕಾರ ಕೆ. ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ರಾಜ್ಯ ವೇತನ ಆಯೋಗದ ವರದಿಯನ್ನು ಪಡೆದು ಅನುಷ್ಠಾನಗೊಳಿಸಲು ಚುನಾವಣಾ ಮಾದರಿ ನೀತಿ ಸಂಹಿತೆ ಅಡ್ಡಬರಲಿದೆ. ಅದಕ್ಕಾಗಿಯೇ ಈಗಾಗಲೇ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ತಾಲೂಕು, ಜಿಲ್ಲಾ ಮಟ್ಟದಲ್ಲಿ ಜನಪ್ರತಿನಿಧಿಗಳನ್ನು ಭೇಟಿ ಮಾಡಿ ವೇತನ ಆಯೋಗದ ವರದಿ ಜಾರಿಗಾಗಿ ಮನವಿಗಳನ್ನು ಸಲ್ಲಿಕೆ ಮಾಡುತ್ತಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದ್ದಾಗ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾಗಿದ್ದಾಗ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ 7ನೇ ವೇತನ ಆಯೋಗ ರಚನೆ ಮಾಡಿದ್ದರು. ಈ ಕುರಿತು ದಿನಾಂಕ 9/11/2022ರ ಸರ್ಕಾರಿ ಆದೇಶ ಪ್ರಕಟಿಸಲಾಗಿತ್ತು.

ಮೂವರು ಸದಸ್ಯರ 7ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿತ್ತು. ರಾಜ್ಯದಲ್ಲಿ ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ಮುಗಿದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎರಡು ಬಾರಿ ವೇತನ ಆಯೋಗದ ಅವಧಿ ವಿಸ್ತರಣೆ ಮಾಡಲಾಗಿದೆ.

ಸರ್ಕಾರಿ ನೌಕರರ ಬೇಡಿಕೆಯಂತೆ ಸರ್ಕಾರ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಬೇಕಾದರೆ ಸರ್ಕಾರಕ್ಕೆ ಆರ್ಥಿಕ ಹೊರೆಯೂ ಉಂಟಾಗಲಿದೆ. ಶಿಫಾರಸು ಜಾರಿಯಿಂದ ವೇತನ, ಭತ್ಯೆ ಹೆಚ್ಚಳವಾಗಲಿದೆ. ಇದರಿಂದಾಗಿ ಸುಮಾರು 12 ಸಾವಿರ ಕೋಟಿ ರೂ. ಹೊರೆ ಎದುರಿಸಬೇಕಾಗಬಹುದು ಎಂದು ಆರ್ಥಿಕ ತಜ್ಞರು ಈಗಾಗಲೇ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+