7th Pay Commission; ಸರ್ಕಾರದ ಮುಂದೆ ನೌಕರರರ ಹೊಸ ಬೇಡಿಕೆ
ಬೆಂಗಳೂರು, ಮೇ 03: ಕರ್ನಾಟಕದ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಂತೆ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ. ಆದರೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವರದಿಯ ಕುರಿತು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.
2024ರ ಮಾರ್ಚ್ 19ರ ಶನಿವಾರ ಕರ್ನಾಟಕ ಸರ್ಕಾರಕ್ಕೆ 7ನೇ ವೇತನ ಆಯೋಗದ ವರದಿ ಸಲ್ಲಿಸಲಾಗಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವರದಿ ಪಡೆದಿದ್ದಾರೆ. ರಾಜ್ಯದ 28 ಕ್ಷೇತ್ರಗಳ ಪೈಕಿ 14 ಲೋಕಸಭಾ ಕ್ಷೇತ್ರದ ಮತದಾನ ಏಪ್ರಿಲ್ 26ಕ್ಕೆ ಮುಕ್ತಾಯಗೊಂಡಿದೆ. ಉಳಿದ 14 ಕ್ಷೇತ್ರದ ಮತದಾನ ಮೇ 7ರಂದು ನಡೆಯಲಿದೆ.

ಎರಡೂ ಹಂತದ ಮತದಾನ ಮುಗಿದ ಮೇಲೆ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಸಡಿಲಿಕೆಯಾಗಲಿದೆ. ಆಗ ಸರ್ಕಾರದ ಮೇಲೆ 7ನೇ ರಾಜ್ಯ ವೇತನ ಆಯೋಗದ ವರದಿಯ ಶಿಫಾರಸುಗಳನ್ನು ಜಾರಿಗೊಳಿಸುವ ಒತ್ತಡ ಬರಲಿದೆ. ಸರ್ಕಾರಿ ನೌಕರರು ಸರ್ಕಾರವನ್ನು ವರದಿ ಅನುಷ್ಠಾನಕ್ಕೆ ಒತ್ತಾಯಿಸಲಿದ್ದಾರೆ. ಆದರೆ ಇದಕ್ಕೂ ಮೊದಲು ಸರ್ಕಾರಿ ನೌಕರರು ಸರ್ಕಾರದ ಮುಂದೆ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ, ರಾಜ್ಯದ 7ನೇ ವೇತನ ಆಯೋಗವು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ವರದಿಯಲ್ಲಿ ಕನಿಷ್ಠ ಮೂಲವೇತನವನ್ನು ರೂ.17,000 ದಿಂದ ರೂ.27,000 ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ ಎಂದು ಹೇಳಿದ್ದಾರೆ.
ವರದಿಯಲ್ಲಿ ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕುಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಸರ್ಕಾರಿ ನೌಕರರಿಗೆ ಭರವಸೆ ನೀಡಿದ್ದಾರೆ.
ಮೊದಲು ವರದಿ ಅನುಷ್ಠಾನಗೊಳಿಸಿ: ರಾಜ್ಯದ ಖಜಾನೆ ಇಲಾಖೆ ಈಗಾಗಲೇ ಕರ್ನಾಟಕ ಸರ್ಕಾರಿ ಜೀವ ವಿಮೆ ಇಲಾಖೆಯಲ್ಲಿ ಜೀವವಿಮೆ ಪಡೆಯದ 72,754 ಸರ್ಕಾರಿ ನೌಕರರು ಮತ್ತು ಅಧಿಕಾರಿಗಳನ್ನು ಪತ್ತೆ ಹಚ್ಚಿದೆ. ಅವರ ಸರಾಸರಿ ವೇತನ ಶ್ರೇಣಿಯಲ್ಲಿ ಕನಿಷ್ಠ 6.25 ಮಾಸಿಕ ವಿಮಾ ಕಂತು ಕಟಾವಡೆ ಮಾಡಲು ಆದೇಶಿಸಿದೆ.
ವೇತನ ಬಿಲ್ಲುಗಳಲ್ಲಿ ಕಡ್ಡಾಯ ಜೀವ ವಿಮೆ ಕಂತುಗಳನ್ನು ಕಡಿತಗೊಳಿಸುವ ಕುರಿತು ಸುತ್ತೋಲೆಯನ್ನು ಹೊರಡಸಿರುವುದಕ್ಕೆ ಸರ್ಕಾರಿ ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕಡ್ಡಾಯ ಜೀವ ವಿಮಾ ನಿಯಮಾವಳಿಗಳ ನಿಯಮ 8ರಂತೆ ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರ/ ಅಧಿಕಾರಿಯು, ಅವರು ಹೊಂದಿರುವ ಹುದ್ದೆಯ ವೇತನ ಶ್ರೇಣಿಯ ಸರಾಸರಿ ವೇತನದ ಕನಿಷ್ಠ ಶೇ 6.25 ರಷ್ಟು ಮಾಸಿಕ ವಿಮಾ ಕಂತಿಗೆ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯಲ್ಲಿ ಕಡ್ಡಾಯವಾಗಿ ಜೀವವಿಮೆ ಪಡೆಯಬೇಕಿರುತ್ತದೆ ಎಂಬುದು ನಿಯಮ.
ನಿಯಮಗಳ ಅನ್ವಯ 50 ವರ್ಷ ಪೂರ್ಣಗೊಂಡಿರುವವರನ್ನು ಹೊರತುಪಡಿಸಿ ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ ಹಾಗೂ ನೌಕರ ಅವರು ಹೊಂದಿರುವ ಹುದ್ದೆಯ ವೇತನ ಶ್ರೇಣಿಯ ಸರಾಸರಿ ವೇತನದ ಕನಿಷ್ಠ ಶೇ 6.25ರಷ್ಟು ಮಾಸಿಕ ವಿಮಾ ಕಂತಿಗೆ ಕಡ್ಡಾಯವಾಗಿ ಜೀವವಿಮೆ ಪಡೆಯಬೇಕು.
ಈಗ ಸರ್ಕಾರಿ ನೌಕರರು ಮೊದಲು ಸರ್ಕಾರ ನೀಡಿರುವ ಭರವಸೆಯಂತೆ 7ನೇ ವೇತನ ಆಯೋಗದ ವರದಿಯನ್ನು ಅನುಷ್ಠಾನ ಮಾಡಲಿ ಬಳಿಕ ಕಡ್ಡಾಯ ಜೀವ ವಿಮೆ ಕಂತುಗಳನ್ನು ಕಡಿತಗೊಳಿಸಲಿ. ವೇತನ ಆಯೋಗದ ವರದಿ ಜಾರಿಗೆ ಮುನ್ನವೇ ಕಂತುಗಳನ್ನು ಕಡಿತಗೊಳಿಸುವುದು ಬೇಡ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಲೋಕಸಭೆ ಚುನಾವಣೆಯ ಫಲಿತಾಂಶ ಜೂನ್ 4ರಂದು ಪ್ರಕಟವಾಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದೆ. ಒಂದು ವೇಳೆ ರಾಜ್ಯದಲ್ಲಿ ಪಕ್ಷ ಅಂದುಕೊಂಡಂತೆ ಫಲಿತಾಂಶ ಬಾರದಿದ್ದರೆ ವೇತನ ಆಯೋಗದ ವರದಿ ಜಾರಿಗೆ ಸರ್ಕಾರ ಇನ್ನೂ ವಿಳಂಬ ಮಾಡಬಹುದು ಎಂಬುದು ಸರ್ಕಾರಿ ನೌಕರರ ಆತಂಕವಾಗಿದೆ.
ಈಗಾಗಲೇ 5 ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಕಾರ್ಯದಲ್ಲಿ ಬ್ಯುಸಿಯಾಗಿರುವ ಸರ್ಕಾರಿ ವೇತನ ಆಯೋಗದ ವರದಿ ಜಾರಿಯಿಂದ ಸರ್ಕಾರದ ಮೇಲೆ ಬೀಳುವ ಹೆಚ್ಚಿನ ಹೊರೆಗೆ ಸಹ ಸಂಪನ್ಮೂಲ ಸಂಗ್ರಹ ಮಾಡಬೇಕು. ಆದ್ದರಿಂದ ಚುನಾವಣಾ ಫಲಿತಾಂಶದ ಮೇಲೆ ಸರ್ಕಾರಿ ನೌಕರರು ಕಣ್ಣಿಟ್ಟಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications