7th Pay Commission; ಸರ್ಕಾರಿ ನೌಕರರು ಈ ಹಿಂದೆ ಮುಷ್ಕರ ನಡೆಸಿದಾಗ ಏನಾಗಿತ್ತು?

ಬೆಂಗಳೂರು, ಜುಲೈ 15: ಕರ್ನಾಟಕದ ಸರ್ಕಾರಿ ನೌಕರರು ರಾಜ್ಯದ ಕಾಂಗ್ರೆಸ್ ಸರ್ಕಾರ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸು ಜಾರಿಗೊಳಿಸಿಲ್ಲ ಎಂದು ಅಸಮಾಧಾನಗೊಂಡಿದ್ದಾರೆ. ಸೋಮವಾರ ಸಂಜೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ನೌಕರರಿಗೆ ಸಿಹಿಸುದ್ದಿ ಸಿಗಲಿದೆಯೆ? ಕಾದು ನೋಡಬೇಕಿದೆ.

7ನೇ ವೇತನ ಆಯೋಗದ ವರದಿ ಜಾರಿಗೊಳಿಸಲು ವಿಳಂಬ ಮಾಡುತ್ತಿರುವ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವ ನೌಕರರು ಅನಿರ್ಧಿಷ್ಟಾವಧಿ ಮುಷ್ಕರದ ಕರೆಯನ್ನು ನೀಡಿದ್ದಾರೆ. ಸರ್ಕಾರ ವರದಿ ಜಾರಿ ಬಗ್ಗೆ ತೀರ್ಮಾನವನ್ನು ಕೈಗೊಳ್ಳದಿದ್ದರೆ ಜುಲೈ ಅಂತ್ಯ ಅಥವ ಆಗಸ್ಟ್ ಮೊದಲ ವಾರದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವ ನಿರೀಕ್ಷೆ ಇದೆ.

7th Pay Commission Report Govt Employees Strike Mrach 1st 2023 Recall

ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವುದು ಇದೇ ಮೊದಲಲ್ಲ. 2023ರ ಮಾರ್ಚ್‌ 1ರಂದು 7ನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕದ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದರು. ಆದರೆ ಸರ್ಕಾರ ನೌಕರರ ವೇತನವನ್ನು ಶೇ 17ರಷ್ಟು ಏರಿಕೆ ಮಾಡುವ ಘೋಷಣೆ ಮಾಡಿದ ಬಳಿಕ ಮುಷ್ಕರ ವಾಪಸ್ ಪಡೆದಿದ್ದರು.

ಅಂದು ಮುಷ್ಕರ ನಡೆಸಿದಾಗ ಏನಾಗಿತ್ತು?: ಆಗ ಕರ್ನಾಟಕದ ಸರ್ಕಾರಿ ನೌಕರರು 7ನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದರು. ಆಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿತ್ತು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದರು, ಹಣಕಾಸು ಖಾತೆಯೂ ಅವರ ಬಳಿ ಇತ್ತು.

ಸರ್ಕಾರಿ ನೌಕರರು ಮುಷ್ಕರ ಆರಂಭಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಣಕಾಸು ಇಲಾಖೆ ಅಧಿಕಾರಿಗಳ ಸಭೆಯನ್ನು ನಡೆಸಿದ್ದರು. ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಳ ಮಾಡಬಹುದು? ಎಂದು ವಿವರ ಪಡೆದಿದ್ದರು. ಬಳಿಕ ಹಣಕಾಸು ಇಲಾಖೆ ಅಧಿಕಾರಿಗಳು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಸಭೆಯನ್ನು ನಡೆಸಿದ್ದರು.

ಸರಣಿ ಸಭೆಗಳ ಬಳಿಕ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಸೇವೆಗಳು-2) ಸರ್ಕಾರಿ ನೌಕರರ ವೇತನ ಶೇ 17ರಷ್ಟು ಹೆಚ್ಚಳದ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಿದ್ದರು. 2023ರ ಏಪ್ರಿಲ್‌ 1ರಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ಸ್ಪಷ್ಟಪಡಿಸಿದ್ದರು.

ಅಲ್ಲದೇ ಆದೇಶದಲ್ಲಿ ದಿನಾಂಕ 19/11/2022ರ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿದೆ. ಪ್ರಸ್ತುತ ಸರ್ಕಾರಿ ನೌಕರರ ಬೇಡಿಕೆ ಹಿನ್ನೆಲೆಯಲ್ಲಿ, ಸರ್ಕಾರದ ನೀತಿ ನಿರ್ಣಯದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ರಾಜ್ಯ ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ನಿರ್ಧರಿಸಿರುತ್ತದೆ ಎಂದು ತಿಳಿಸಲಾಗಿತ್ತು.

2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಏಪ್ರಿಲ್ 2023 ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ಆರ್ಥಿಕ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿತ್ತು. ಈ ಆದೇಶ ಪ್ರಕಟವಾದ ಬಳಿಕ ಸರ್ಕಾರಿ ನೌಕರರು ರಾಜ್ಯದ ಜನರಿಗೆ ಉಂಟಾದ ತೊಂದರೆಗೆ ಕ್ಷಮೆಯನ್ನು ಕೇಳಿ ಮುಷ್ಕರವನ್ನು ವಾಪಸ್ ಪಡೆದಿದ್ದರು.

ಈಗ ಕೆ. ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಾರ್ಚ್‌ 16 ರಂದು ವರದಿ ನೀಡಿದೆ. ಆಯೋಗ ತನ್ನ ವರದಿಯಲ್ಲಿ ನೌಕರರ ಮೂಲ ವೇತನದ ಶೇಕಡ 27.5ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ಇದರಿಂದ ಸರ್ಕಾರಕ್ಕೆ ಆಗುವ ಆರ್ಥಿಕ ಹೊರೆಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಲೆಕ್ಕಚಾರ ಹಾಕಿ ವರದಿಯನ್ನು ಹೇಗೆ ಜಾರಿಗೊಳಿಸಬಹುದು? ಎಂದು ಮುಖ್ಯಮಂತ್ರಿಗಳಿಗೆ ವರದಿಯನ್ನು ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+