7th pay commission: 7ನೇ ವೇತನ ಆಯೋಗ ಸೇರಿ ಹಲವು ಆದೇಶಗಳ ಜಾರಿಗೆ ಸಿದ್ದರಾಮಯ್ಯ ಸರ್ಕಾರದ ಸಿದ್ಧತೆ
ಬೆಂಗಳೂರು, ಮೇ. 09 : ಸರ್ಕಾರಿ ನೌಕರರು ಜಾತಕ ಪಕ್ಷಿಯಂತೆ ಕಾಯುತ್ತಿರೋದು 7ನೇ ವೇತನ ಆಯೋಗದ ವರದಿ ಜಾರಿಗಾಗಿ. ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಒಂದು ದಿನ ಮೊದಲು ವರದಿ ಸರ್ಕಾರ ಕೈ ಸೇರಿದೆ. ಹೀಗಾಗಿ ಮಾದರಿ ನೀತಿ ಸಂಹಿತೆ ಸಡಿಲಗೊಂಡ ಕೂಡಲೇ 2024-25ನೇ ಸಾಲಿನ ಬಜೆಟ್ ಘೋಷಣೆಗಳಿಗೆ ಜಾರಿಯಾಗುವಂತೆ ಸರ್ಕಾರಿ ಆದೇಶಗಳ ಸುರಿಮಳೆಗೆ ಸಿದ್ದರಾಮಯ್ಯ ಆಡಳಿತ ಸಿದ್ಧತೆ ನಡೆಸಿದೆ.
ಈ ಹಿಂದೆಯೇ ಲೋಕಸಭಾ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲೇಖಿಸಿ ಸರ್ಕಾರ ನೌಕರರನ್ನು ಕಟ್ಟಿ ಹಾಕಿದೆ. ಆದರೆ, ನೀತಿ ಸಂಹಿತೆ ಸಡಿಲಗೊಳ್ಳುತ್ತಿದ್ದಂತೆ ಸರ್ಕಾರಿ ನೌಕರರು ಒತ್ತಡ ಹಾಕಲಿದ್ದಾರೆ. ಹೀಗಾಗಿಯೇ ಸರ್ಕಾರ ಕೂಡ ಸಕಲ ಸಿದ್ಧತೆ ನಡೆಸಿದೆ. ಕೆಲವೇ ದಿನಗಳಲ್ಲಿ ಅದೂ ಕೂಡ ನಡೆಯಲಿದೆ.

ಲೋಕಸಭೆಯ ನೀತಿ ಸಂಹಿತೆ ಮಾರ್ಚ್ 16 ರಿಂದ ಪ್ರಾರಂಭವಾಗಿದೆ. ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆಗೆ ಜೂನ್ 3 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿದೆ. ರಾಜ್ಯ ವಿಧಾನ ಪರಿಷತ್ ಚುನಾವಣಾ ಫಲಿತಾಂಶಗಳು ಜೂನ್ 6 ರಂದು ಹೊರಬೀಳುತ್ತವೆ.
ಜೂನ್ 15 ಕ್ಕೆ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!
"ಸರ್ಕಾರದ ಎಲ್ಲಾ ಆದೇಶಗಳನ್ನು ಸಿದ್ಧಪಡಿಸುವಂತೆ ನಾವು ತಿಳಿಸಿದ್ದೇವೆ. ಜೂನ್ 15 ರ ಮೊದಲು ಎಲ್ಲಾ ಆದೇಶಗಳನ್ನು ಹೊರಡಿಸಲು ಪ್ರಯತ್ನಿಸುತ್ತಿದ್ದೇವೆ" ಎಂದು ಹೇಳಿದ್ದಾರೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಹಣಕಾಸು) ಎಲ್‌ಕೆ ಅತೀಕ್ ಅವರನ್ನು ಡೆಕ್ಕನ್ ಹೆರಾಲ್ಡ್ ಉಲ್ಲೇಖಿಸಿದೆ. ಎಲ್‌ಕೆ ಅತೀಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಹೌದು.
ಸಿದ್ದರಾಮಯ್ಯ ಅವರು 2024-25ರ ಬಜೆಟ್‌ನಲ್ಲಿ ನೀಡಿದ ಭರವಸೆಗಳನ್ನು ಜಾರಿಗೆ ತರಲು 337 ಸರ್ಕಾರಿ ಆದೇಶಗಳು ಬೇಕಾಗುತ್ತವೆ ಎಂದು ಅಂದಾಜಿಸಲಾಗಿದೆ. "ನಮ್ಮ ವಿನಂತಿಯ ಆಧಾರದ ಮೇಲೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯ ಸಡಿಲಿಕೆಯನ್ನು ಮಾಡುತ್ತದೆ. ಇದು ಕೇಸ್ ಟು ಕೇಸ್ ಆಧಾರದ ಮೇಲೆ ಇರುತ್ತದೆ" ಎಂದು ಎಲ್‌ಕೆ ಅತೀಕ್ ಹೇಳಿದ್ದಾರೆ.

"ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಯಾರೇ ಸಚಿವರಾದರೂ ಅಧಿಕೃತ ಸಭೆಗಳ ಅಧ್ಯಕ್ಷತೆ ವಹಿಸಲು ಚುನಾವಣಾ ಸಮಿತಿಯ ಒಪ್ಪಿಗೆ ಅಗತ್ಯ. ಯಾವುದೇ ಹೊಸ ಘೋಷಣೆ, ಹೊಸ ಆದೇಶಗಳನ್ನು ನೀಡುವುದು, ಹೊಸ ಟೆಂಡರ್‌ಗಳನ್ನು ಕರೆಯುವುದು, ಹೊಸ ಗುತ್ತಿಗೆಗಳನ್ನು ನೀಡುವುದು, ಹೊಸ ಕೆಲಸದ ಆದೇಶಗಳನ್ನು ವಹಿಸಿಕೊಡುವುದು ಮತ್ತು ಹೊಸ ಯೋಜನೆಗಳನ್ನು ಮಂಜೂರು ಮಾಡುವುದು ಮಾದರಿ ನೀತಿ ಸಂಹಿತೆಯ ಕಾರಣದಿಂದಾಗಿ ತಡೆಯಾಗುತ್ತವೆ" ಎಂದು ಹೇಳಿದ್ದಾರೆ.
ಇನ್ನು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿದಿರುವ ಕಾರಣ ಇಷ್ಟು ದಿನ ಚುನಾವಣಾ ಕರ್ತವ್ಯದಲ್ಲಿದ್ದ ಅನೇಕ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಹಿಂತಿರುಗುತ್ತಾರೆ. ಇದು ಆಡಳಿತ ಯಂತ್ರವನ್ನು ಮತ್ತೆ ಟ್ರಾಕ್‌ಗೆ ತರಲು ಸಹಾಯ ಮಾಡುತ್ತದೆ. ಇದಾದ ನಂತರ ಸರ್ಕಾರ ಹಲವು ಆದೇಶಗಳನ್ನು ಜಾರಿಗೆ ತರಲಿದೆ.
ಆದರೆ, ರಾಜ್ಯ ಕ ಕೇಡರ್‌ನ ಸುಮಾರು 50-60 ಐಎಎಸ್ ಅಧಿಕಾರಿಗಳನ್ನು ಭಾರತದಾದ್ಯಂತ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸರ್ಕಾರಿ ನೌಕರರು ತಮ್ಮ ತಮ್ಮೆ ಕೆಲಸಗಳಿಗೆ ಹಿಂತಿರುಗಿನ ನಂತರ, ಮಾದರಿ ನೀತಿ ಸಂಹಿತೆ ಸಡಿಲವಾದ ಬಳಿಕ ಎಲ್ಲಾ ಆದೇಶಗಳು ಜಾರಿಯಾಗುವ ಸಂಭವವಿದೆ. ಸರ್ಕಾರ ಕೂಡ ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಿದೆ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್












Click it and Unblock the Notifications