7th Pay Commission: 7ನೇ ವೇತನ ಆಯೋಗದ ಬಗ್ಗೆ ಸರ್ಕಾರದ ಮಹತ್ವದ ಆದೇಶ!

ಬೆಂಗಳೂರು: ವೇತನ ಪರಿಷ್ಕರಣೆಗಾಗಿ ಕಾಯುತ್ತಿರುವ ಕರ್ನಾಟಕದ ಸರ್ಕಾರಿ ಉದ್ಯೋಗಿಗಳಿಗೆ ಇದೀಗ, ಬ್ರೇಕಿಂಗ್ ನ್ಯೂಸ್ ಸಿಕ್ಕಿದೆ. 7ನೇ ವೇತನ ಆಯೋಗದ ಬಗ್ಗೆ ಸರ್ಕಾರದ ಮಹತ್ವದ ಆದೇಶ ಹೊರಬಿದ್ದಿದೆ. ಸಾಕಷ್ಟು ಸಮಯದಿಂದ ಸಂಬಳ ಹೆಚ್ಚಾಗುತ್ತೆ ಅಂತ ಕಾಯುತ್ತಿದ್ದ ಲಕ್ಷಾಂತರ ಉದ್ಯೋಗಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ.

ಅಷ್ಟಕ್ಕೂ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಿಸಲು ರಾಜ್ಯ ಸರ್ಕಾರವು ಸುಧಾಕರ ರಾವ್ ಅಧ್ಯಕ್ಷತೆಯ 7ನೇ ರಾಜ್ಯ ವೇತನ ಆಯೋಗ ರಚನೆ ಮಾಡಿತ್ತು. ಈ ಆಯೋಗದ ಅವಧಿ ನವೆಂಬರ್ 19ಕ್ಕೆ ಅಂತ್ಯಗೊಳ್ಳಲಿದೆ. ಜೊತೆಗೆ ಈ ಆಯೋಗವು ನವೆಂಬರ್‌ನಲ್ಲೇ ವರದಿಯನ್ನು ನೀಡುವ ಅಂದಾಜು ಮಾಡಲಾಗಿತ್ತು.

7th-pay-commission

ಆದರೆ ರಾಜ್ಯ 7ನೇ ವೇತನ ಆಯೋಗದ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಹಾಗಾದರೆ ಎಷ್ಟು ಅವಧಿಗೆ 7ನೇ ವೇತನ ಆಯೋಗದ ಅವಧಿ ವಿಸ್ತರಣೆ ಮಾಡಲಾಗಿದೆ ಗೊತ್ತಾ?

7ನೇ ವೇತನ ಆಯೋಗದ ಅವಧಿ ವಿಸ್ತರಣೆ

ಹೌದು, ರಾಜ್ಯ ಸರ್ಕಾರವು 7ನೇ ವೇತನ ಆಯೋಗದ ಅವಧಿಯನ್ನು 2024ರ ಮಾರ್ಚ್ 15 ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಇದೀಗ ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದೆ ಆರ್ಥಿಕ ಇಲಾಖೆ. ಇನ್ನು ಆರ್ಥಿಕ ಇಲಾಖೆಯ ಮಾಹಿತಿ ಪ್ರಕಾರ, '7ನೇ ರಾಜ್ಯ ವೇತನ ಆಯೋಗ ತನ್ನ ಕಾರ್ಯಕಲಾಪಗಳ ಪೂರ್ಣಗೊಳಿಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ಅನುಕೂಲ ಆಗುವ ರೀತಿ, ಆಯೋಗದ ಕಾಲಾವಧಿ 2024ರ ಮಾರ್ಚ್ 15ರವರೆಗೂ ವಿಸ್ತರಿಸಿ ಆದೇಶಿಸಲಾಗಿದೆ' ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

2024 ರಲ್ಲಿ ವರದಿ ಸ್ವೀಕಾರ ಪಕ್ಕಾ?

ಹೌದು, ಕರ್ನಾಟಕ ಸರ್ಕಾರವು ರಚನೆ ಮಾಡಿದ್ದ 7ನೇ ರಾಜ್ಯ ವೇತನ ಆಯೋಗಕ್ಕೆ ಸುಧಾಕರ್ ರಾವ್ ಅಧ್ಯಕ್ಷರು. ಹಾಗೇ ಪಿ. ಬಿ. ರಾಮಮೂರ್ತಿ, ಶ್ರೀಕಾಂತ್ ಬಿ. ವನಹಳ್ಳಿ ಸೇರಿದಂತೆ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಈ ಆಯೋಗದಲ್ಲಿ ಇದ್ದಾರೆ. ಈ ಆಯೋಗದ ಅವಧಿ ಮತ್ತೆ ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ 2024 ರಲ್ಲಿ ವರದಿ ಸ್ವೀಕರಿಸುವ ನಿರೀಕ್ಷೆ ಇದ್ದು, ಈ ಮೂಲಕ ರಾಜ್ಯದ ನೌಕರರಿಗೆ ನಿರಾಸೆಯಾಗಿದೆ ಎಂಬ ಮಾತು ಕೂಡ ಕೇಳಿಬರುತ್ತಿದೆ.

ಒಟ್ನಲ್ಲಿ ಇದೀಗ ಹೊರಬಿದ್ದಿರುವ ಮಾಹಿತಿಯ ಪ್ರಕಾರ ಮತ್ತಷ್ಟು ದಿನಗಳ ಕಾಲ ನೌಕರರು ವೇತನ ಹೆಚ್ಚಳಕ್ಕೆ ಕಾಯಬೇಕಿದೆ. ಆದರೆ ಈ ಕುರಿತು ನೌಕರರ ಸಂಘ ಯಾವ ರೀತಿಯಾಗಿ ಪ್ರತಿಕ್ರಿಯೆ ನೀಡಲಿದೆ? ಅನ್ನೋದನ್ನ ಕಾದು ನೋಡಬೇಕಿದೆ. ಮತ್ತೊಂದು ಕಡೆ ಈಗಾಗಲೇ ನೌಕರರ ಸಂಘವು ವೇತನ ಹೆಚ್ಚಳದ ಬಗ್ಗೆ ಸರ್ಕಾರಕ್ಕೆ ಒತ್ತಾಯ ಮಾಡುತ್ತಲೇ ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+