7th Pay Commission: ಪಕ್ಷಗಳ ಭರವಸೆಯಲ್ಲಿಲ್ಲ 7ನೇ ವೇತನ ಆಯೋಗ ವರದಿ ಜಾರಿ ವಿಚಾರ, ಸರ್ಕಾರಿ ನೌಕರರ ಮುಂದಿನ ನಡೆ ಏನು?
ಲೋಕಸಭಾ ಚುನಾವಣೆಗೆ ದಿನಾಂಕ ಹತ್ತಿರದಲ್ಲಿದೆ. ಈ ನಡುವೆ ಸರ್ಕಾರಿ ನೌಕರರ ನಡೆ ಭಾರೀ ಕುತೂಹಲ ಮೂಡಿಸಿದೆ. ಏಳನೇ ವೇತನ ಆಯೋಗ ವರದಿ ಜಾರಿಗೆ ಸಂಬಂಧಿಸಿದಂತೆ ಸರ್ಕಾರದ ನಿರ್ಧಾರ ಏನು ಎನ್ನುವ ಕೌತುಕ ಮೂಡಿದೆ.
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತು ಅಧ್ಯಯನ ಮಾಡಿ, ವರದಿ ಸಲ್ಲಿಸಲು ರಚಿಸಲಾಗಿದ್ದ 7ನೇ ವೇತನ ಆಯೋಗದ ವರದಿ ಸಲ್ಲಿಸಲಾಗಿದೆ. ವರದಿಯಲ್ಲಿ ಕನಿಷ್ಠ ಮೂಲ ವೇತನವನ್ನು 17000 ರೂಪಾಯಿಗಳಿಂದ 27 ಸಾವಿರ ರೂಪಾಯಿಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ.

ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕುಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
7ನೇ ವೇತನ ಆಯೋಗ ವರದಿ ಜಾರಿಗೆ ತರುತ್ತಾ ಕಾಂಗ್ರೆಸ್?
ಸದ್ಯ ರಾಜ್ಯದಲ್ಲಿ ಲೋಕಸಭಾ ಚುನಾವಣೆಯಿಂದಾಗಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಏಳನೇ ವೇತನ ಆಯೋಗದ ವರದಿ ಸದ್ಯಕ್ಕೆ ಜಾರಿಯಾಗುವುದಿಲ್ಲ. ಚುನಾವಣೆ ಬಳಿಕ ವೇತನ ಆಯೋಗದ ವರದಿಯನ್ನು ಸರ್ಕಾರ ಜಾರಿ ಮಾಡಬಹುದು ಅಥವಾ ಮಾಡದೇ ಕೂಡ ಇರಬಹುದು.
ಯಾಕೆಂದರೆ ಕಳೆದ ಬಾರಿ ಬಿಜೆಪಿ ಸರ್ಕಾರದಲ್ಲೂ ವರದಿ ಸ್ವೀಕರಿಸಿ ಜಾರಿಗೊಳಿಸುವ ಭರವಸೆ ನೀಡಿ ಸರ್ಕಾರಿ ನೌಕಕರ ಆಸೆಯನ್ನು ನಿರಾಸೆಗೊಳಿಸಲಾಗಿತ್ತು. ಆದರೆ ಈ ಬಾರಿ ಆಡಳಿತಕ್ಕೆ ಬಂದ ಕಾಂಗ್ರೆಸ್ ವರದಿ ಜಾರಿಗೆ ತರಲಿದಿಯಾ? ಇಲ್ವಾ ಅನ್ನೋ ಗೊಂದಲ ಮೂಡಿದೆ.

ಹಲವರು ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದ ಕಾಂಗ್ರೆಸ್ ಸರ್ಕಾರಕ್ಕೆ ಏಳನೇ ವೇತನ ವರದಿ ದೊಡ್ಡದೇನಲ್ಲ ಎನ್ನುವ ಭರವಸೆಯಲ್ಲಿದ್ದರೆ, ಇನ್ನೂ ಕೆಲವರು ಪಂಚ ಗ್ಯಾರಂಟಿಗಳಿಗಾಗಿ ಹಣ ಹೊಂದಿಸಲು ಸರ್ಕಾರ ಹೆಣಗಾಡುತ್ತಿದೆ ಇನ್ನೂ ಏಳನೇ ವೇತನ ಆಯೋಗ ವರದಿ ಜಾರಿಗೆ ತರುವುದು ಕನಸಿನ ಮಾತು ಎಂಬ ಮಾತುಗಳನ್ನಾಡುತ್ತಿದ್ದಾರೆ.
ಒಂದು ವೇಳೆ ವರದಿ ಜಾರಿಗೆ ತರಲು ಸರ್ಕಾರ ನಿರ್ಧರಿಸಿದ್ದರೆ ಲೋಕಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಪ್ರಕಟಿಸಬಹುದಿತ್ತು. ಆದರೆ ಈ ಕೆಲಸವನ್ನು ಎರಡೂ ಪ್ರಬಲ ಪಕ್ಷಗಳೂ ಮಾಡಲಾಗಿಲ್ಲ. ಹೀಗಾಗಿ ವರದಿ ಜಾರಿ ಬಗ್ಗೆ ನೌಕರರಲ್ಲಿ ಸಾಕಷ್ಟು ಗೊಂದಲಗಳಿವೆ.
7ನೇ ವೇತನ ಆಯೋಗ ವರದಿ ಜಾರಿಗೆ ತರುತ್ತಾ ಬಿಜೆಪಿ?
ಬಿಜೆಪಿ ಸರ್ಕಾರ ಈ ಹಿಂದೆ ಆಡಳಿತದಲ್ಲಿದ್ದಾಗ ವರದಿ ಜಾರಿಗೆ ತರಲಿಲ್ಲ. ಕಾಂಗ್ರೆಸ್‌ಗೆ ಹೋಲಿಸಿದರೆ ಅದೆಷ್ಟೋ ಗ್ಯಾರಂಟಿಗಳು ಮೋದಿ ಸರ್ಕಾರ ಈಡೇರಿಸಿಲ್ಲ ಎನ್ನುವ ಮಾತುಗಳು ಕೇಳಿ ಬಂದಿವೆ. ಅದಾಗ್ಯೂ ಬಿಜೆಪಿ ಸರ್ಕಾರಿ ನೌಕಕರ ಬೇಡಿಕೆಗೆ ಕಿವಿಗೊಟ್ಟು ಏಳನೇ ವೇತನ ಆಯೋಗ ಜಾರಿಗೆ ತರಲು ಮುಂದಾಗಿದ್ದರೆ ಚುನಾವಣೆ ಪ್ರಣಾಳಿಕೆಯಲ್ಲೇ ಭರವಸೆ ನೀಡಬಹುದಿತ್ತು. ಆದರೆ ಬಿಜೆಪಿ ಇದನ್ನು ಮಾಡಿಲ್ಲ.

ಇತ್ತ ಆಡಳಿತ ಪಕ್ಷ ಕಾಂಗ್ರೆಸ್ ಕೂಡ ಚುನಾವಣಾ ಪ್ರಣಾಳಿಕೆಯಲ್ಲಿ ಇಂತಹ ಘೋಷಣೆಯನ್ನು ಮಾಡಿಲ್ಲ. ಕೊಟ್ಟಿರುವ ಪಂಚ ಗ್ಯಾರಂಟಿಗಳನ್ನು ಉಳಿಸಿಕೊಂಡು ಹೋಗುವುದೇ ಕಾಂಗ್ರೆಸ್‌ಗೆ ದೊಡ್ಡ ಸವಾಲಾಗಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. ಇದೆಲ್ಲದರ ನಡುವೆ ಕೊಟ್ಟಿರುವ ಪಂಚ ಗ್ಯಾರಂಟಿಗಳು ಲೋಕಸಭಾ ಚುನಾವಣೆ ಬಳಿಕ ರದ್ದಾಗಲಿವೆ ಎನ್ನುವ ಆರೋಪಗಳು ಕೇಳಿ ಬಂದಿವೆ.
ಅಲ್ಲದೆ ಇದಕ್ಕಾಗಿ ಕಾಂಗ್ರೆಸ್ ಸಾಲದ ಮೊರೆ ಹೋಗಿದೆ ಎಂದು ಹೇಳಲಾಗುತ್ತಿದೆ. ಹೀಗಿರುವಾಗ ಕಾಂಗ್ರೆಸ್ ಸರ್ಕಾರ ಏಳನೇ ವೇತನ ಆಯೋಗ ಜಾರಿಗೆ ತಂದಿದ್ದೇ ಆದಲ್ಲಿ ಸಾವಿರಾರು ಕೋಟಿ ಹೊಂದಿಸಬೇಕಾಗುತ್ತದೆ. ಇದರಿಂದಾಗಿ ಆಡಳಿತ ಪಕ್ಷ ಇದರ ಗೋಜಿಗೆ ಹೋಗುವ ಲಕ್ಷಣಗಳು ಕಾಣಿಸುತ್ತಿಲ್ಲ.
ಸರ್ಕಾರಿ ನೌಕರರ ಮುಂದಿನ ನಡೆ ಏನು?
ಹೀಗಾಗಿ ಸರ್ಕಾರಿ ನೌಕಕರಿಗೆ ಇದು ಜಾರಿ ಆಗುತ್ತೆ ಅನ್ನೋ ನಂಬಿಕೆ ಉಳಿದಿಲ್ಲ. ನಂಬಿಕೆ ಉಳಿಸಿಕೊಂಡು ಈ ಬಾರಿ ಓಟು ಗಿಟ್ಟಿಸಿಕೊಳ್ಳುವ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆಯಾದರೂ ಅಧಿಕೃತವಾಗಿ ಪಕ್ಷಗಳು ಈ ಬಗ್ಗೆ ಆಸಕ್ತಿ ತೋರುತ್ತಿರುವಂತೆ ಕಾಣಿಸುತ್ತಿಲ್ಲ. ಇದು ಸರ್ಕಾರಿ ನೌಕರರಿಗೆ ಬೇಸರ ತಂದಿದೆ. ಅದಾಗ್ಯೂ ಇಂದಲ್ಲಾ ನಾಳೆ ವರದಿ ಜಾರಿಗೆ ಬಂದೇ ಬರುತ್ತೆ ಅನ್ನೋ ನಿರೀಕ್ಷೆಯಲ್ಲಿ ನೌಕರರು ಇದ್ದಾರೆ. ಹೀಗಾಗಿ ಈ ಬಾರಿ ಸರ್ಕಾರಿ ನೌಕರರು ಯಾವ ಪಕ್ಷದ ಮೇಲೆ ನಂಬಿಕೆ ಇಡುತ್ತಾರೆ? ಆ ಪಕ್ಷ ಗೆಲ್ಲುತ್ತಾ? ಏಳನೇ ವೇತನ ಆಯೋಗ ವರದಿ ಜಾರಿಯಾಗುತ್ತಾ ಅನ್ನೋ ಪ್ರಶ್ನೆ ಪ್ರಶ್ನೆಯಾಗಿಯೇ ಉಳಿದಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications