7ನೇ ವೇತನ ಆಯೋಗ ಜಾರಿಗೆ ಬದ್ಧ ಎಂದ ಬೊಮ್ಮಾಯಿ! ಪ್ರತಿಭಟನೆ ನಿಲ್ಲಿಸ್ತಾರಾ ಸರ್ಕಾರಿ ನೌಕರರು?

ನಮ್ಮ ಪಕ್ಷದ ಬಲ ವರ್ಧನೆಗಾಗಿ ಮೋದಿ, ಅಮಿತ್ ಶಾ ಮತ್ತೆ ರಾಜ್ಯಕ್ಕೆ ಬರ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿ,ಫೆಬ್ರವರಿ28: 7 ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಚ್ 1 ರಿಂದ ರಾಜ್ಯದಲ್ಲಿ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಘೋಷಿಸಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು , 7 ನೇ ವೇತನ ಆಯೋಗದ ಮಧ್ಯಂತರ ವರದಿ ಸಿದ್ದಪಡಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಈ ಕುರಿತು ಹುಬ್ಭಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, 2023-24 ನೇ ಸಾಲಿನಲ್ಲಿಯೇ ಅನುಷ್ಠಾನಕ್ಕೆ ತರ್ತೇವೆ. ಬಜೆಟ್ ನಲ್ಲಿ 7 ವೇತನ ಆಯೋಗ ಜಾರಿಗೆ ಹಣ ತೆಗೆದಿಟ್ಟಿದ್ದೇವೆ. ಮಧ್ಯಂತರ ವರದಿ ಬಂದ ಕೂಡಲೇ ಜಾರಿಮಾಡುವುದಾಗಿ ತಿಳಿಸಿದ್ದಾರೆ.

7th Pay Commission will be implemented after interim report says Basavaraj Bommai

ರಾಜ್ಯ ವಿಧಾನ ಚುನಾವಣೆಗೆ ಹತ್ತಿರವಗುತ್ತಿದ್ದಂತೆ ಬಿಜೆಪಿಯ ಹೈಕಮಾಂಡ್ ನಾಯಕರು ರಾಜ್ಯಕ್ಕೆ ಪದೇ ಪದೇ ಆಗಮಿಸುತ್ತಿರುವುದಕ್ಕೆ ಕಾಂಗ್ರೆಸ್ ನಾಯಕರು ಸಾಕಷ್ಟು ಟೀಕೆ ಟಿಪ್ಪಣಿಗಳನ್ನ ನಡೆಸುತ್ತಿದ್ದು, ಪ್ರಧಾನಿ ನರೇಂದ್ರಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ದೇಶದ ಕೆಲಸ ಮಾಡುವುದನ್ನು ಬಿಟ್ಟು ಕೇವಲ ಬಿಜೆಪಿಯ ಚುನಾವಣಾ ಏಜೆಂಟರಾಗಿ ದುಡಿಯುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಿಡಿಕಾರಿದ್ದಾರೆ.

ನರೇಂದ್ರ ಮೋದಿ ಭೇಟಿಯಿಂದ ಕಾಂಗ್ರೆಸ್ ನಾಯಕರು ಭ್ರಮನಿರಸನಗೊಂಡಿದ್ದಾರೆ. ಮೋದಿ ಅವರು ಬಂದ ಮೇಲೆ ಸಿಗ್ತಿರೋ ಜನ ಬೆಂಬಲದಿಂದ ಅವರು ವಿಚಲಿತಗೊಂಡಿದ್ದಾರೆ. ಒಬ್ಬ ಅನುಭವಿ ಮಾಜಿ ಮುಖ್ಯಮಂತ್ರಿ ಒಬ್ಬರು ಈ ರೀತಿ ಮಾತನಾಡೋದು ಸರಿಯಲ್ಲ, ಹಾಗಾದ್ರೆ ರಾಹುಲ್ ಗಾಂಧಿ ಕಾಂಗ್ರೆಸ್ ಏಜೆಂಟರಾ ಎಂದು ಪ್ರಶ್ನಿಸಿದ್ದಾರೆ.

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ರಾಜಕೀಯ ನಿವೃತ್ತಿ ವಿಚಾರವಾಗಿ ಮಾತನಾಡಿ, ಕುಮಾರಸ್ವಾಮಿ ಅವರು ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಗೊತ್ತಿಲ್ಲ, ಅವರದ್ದು ಇನ್ನೂ ನಿವೃತ್ತಿಯಾಗೋ ವಯಸ್ಸಲ್ಲ, ಇನ್ನೂ ಸೇವೆ ಮಾಡಬೇಕಿದೆ. ಚುನಾವಣೆ ಸಂದರ್ಭದಲ್ಲಿ ಇಂಥವೆಲ್ಲ ನಡೀತಿರುತ್ತದೆ. ಜನ ಪ್ರಬುದ್ಧರಾಗಿದ್ದು, ಎಲ್ಲವನ್ನೂ ಗಮನಿಸುತ್ತಿದ್ದಾರೆ. ಚುನಾವಣೆಯಿಂದ ಚುನಾವಣೆಗೆ ಇನ್ನೂ ಪ್ರಬುದ್ಧರಾಗುತ್ತಿದ್ದಾರೆ. ನಾವು ಮಾತನಾಡುವಾಗ ಅದರ ಹಿಂದಿರೊ ಕಲ್ಪನೆಯೂ ಇರಬೇಕು ಎಂದು ಹೇಳಿದರು.

7th Pay Commission will be implemented after interim report says Basavaraj Bommai

ಈಗಾಗಲೇ ಪಕ್ಷ ಬಲವರ್ಧನೆ ನಡೆಯುತ್ತಿದೆ. ಮೋದಿ, ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಮತ್ತೆ ಬರ್ತಾರೆ, ಪಕ್ಷದ ಬಲವರ್ಧನೆ ದೃಷ್ಟಿಯಿಂದ ಹಲವಾರು ನಾಯಕರು ರಾಜ್ಯಕ್ಕೆ ಬರ್ತಾರೆ, ದಾವಣಗೆರೆಯಲ್ಲಿ ಮಾರ್ಚ್ ನಲ್ಲಿ ರಥಯಾತ್ರೆ ಆರಂಭಿಸಲಾಗುವುದು ಎಂದು ತಿಳಿಸಿದರು.

ಬನವಾಸಿಯಲ್ಲಿ ಸಿಎಂ ಗೋ ಬ್ಯಾಕ್ ವಿಚಾರವಾಗಿ ಮಾತನಾಡಿ ನಾಲ್ಕು ಮಂದಿ ಗೋ ಬ್ಯಾಕ್ ಅಂದ್ರೆ ತಲೆಕೆಡಿಸಿಕೊಳ್ಳಲ್ಲ. ಗೋ ಬ್ಯಾಕ್ ಅಭಿಯಾನ ಮಾಮೂಲಿಯಾಗಿದೆ ಎಂದು ಹೇಳಿದರು.

ಯಡಿಯೂರಪ್ಪ ಜೈಲಿನಲ್ಲಿದ್ದಾಗ ಯಡಿಯೂರಪ್ಪ ಡೈರಿ ಬರೆದ ವಿಚಾರವಾಗಿ ಉತ್ತರಿಸಿ, ಅವರ ಮಗಳು ಡೈರಿ ಬಿಡುಗಡೆ ಮಾಡೋದು ನನಗೆ ಗೊತ್ತಿಲ್ಲ ಹಿರಿಯ ನಾಯಕರ ಕಾಲಿಗೆ ಬಿದ್ದಿದ್ದರೆ ನಾನೂ ಸಿಎಂ ಆಗ್ತಿದ್ದೆ ಎಂಬ ಯತ್ನಾಳ್ ಹೇಳಿಕೆ ಕುರಿತು ಮಾತನಾಡಿ, ಇಂತಹ ಹೇಳಿಕೆಗೆ ನಾನು ಪ್ರತಿಕ್ರಿಯಿಸಲ್ಲ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+