Breaking: ಕರ್ನಾಟಕದಲ್ಲಿ ಒಂದೇ ದಿನ 8,906 ಮಂದಿಗೆ ಕೊರೊನಾವೈರಸ್!
ಬೆಂಗಳೂರು, ಜನವರಿ 8: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣ ಸಂಖ್ಯೆ ದಿನಕ್ಕೊಂದು ದಾಖಲೆ ಬರೆಯುತ್ತಿವೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 8,900ದ ಗಡಿ ದಾಟಿದ್ದು, ಪಾಸಿಟಿವಿಟಿ ದರ ಶೇ.5.42ರಷ್ಟಾಗಿದೆ.
ರಾಜ್ಯದಲ್ಲಿ ಒಂದು ದಿನದಲ್ಲಿ 1,64,261 ಮಂದಿಗೆ ಕೊವಿಡ್-19 ಸೋಂಕಿನ ಪರೀಕ್ಷೆ ನಡೆಸಲಾಗಿದೆ. ಒಂದೇ ದಿನದಲ್ಲಿ 8906 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾಯ ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಇದೇ ಅವಧಿಯಲ್ಲಿ 508 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 4 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲೇ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.ಶನಿವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3039958ಕ್ಕೆ ಏರಿಕೆಯಾಗಿದೆ. ಒಟ್ಟು 2963056 ಸೋಂಕಿತರು ಗುಣಮುಖರಾಗಿದ್ದು. 38507 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಕೊರೊನಾವೈರಸ್ ಸಂಖ್ಯೆ ಏರಿಕೆ:
ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 7113 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1290299ಕ್ಕೆ ಏರಿಕೆಯಾಗಿದೆ. 3 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 16420ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 32157 ಸಕ್ರಿಯ ಪ್ರಕರಣಗಳಿವೆ. ಸಿಲಿಕಾನ್ ಸಿಟಿಯಲ್ಲಿ ಈವರೆಗೂ ಸೋಂಕು ತಗುಲಿದ 1241721 ಮಂದಿ ಗುಣಮುಖರಾಗಿದ್ದಾರೆ.
ಕೊರೊನಾವೈರಸ್ ಸೋಂಕಿನ ಪರೀಕ್ಷೆ ಪ್ರಮಾಣ:
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 28,970 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,35,291 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,64,261 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 1,08,57,274 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 4,66,36,902 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 5,74,94,176 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟಿದೆ ಕೊವಿಡ್-19 ಪ್ರಕರಣ:
ರಾಜ್ಯದಲ್ಲಿ ಒಟ್ಟು 8906 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 6, ಬಳ್ಳಾರಿ 43, ಬೆಳಗಾವಿ 70, ಬೆಂಗಳೂರು ಗ್ರಾಮಾಂತರ 111 ಬೆಂಗಳೂರು 7,113, ಬೀದರ್ 13, ಚಾಮರಾಜನಗರ 10, ಚಿಕ್ಕಬಳ್ಳಾಪುರ 36, ಚಿಕ್ಕಮಗಳೂರು 22, ಚಿತ್ರದುರ್ಗ 15, ದಕ್ಷಿಣ ಕನ್ನಡ 295, ದಾವಣಗೆರೆ 12, ಧಾರವಾಡ 56, ಗದಗ 16, ಹಾಸನ 139, ಹಾವೇರಿ 0, ಕಲಬುರಗಿ 58, ಕೊಡಗು 26, ಕೋಲಾರ 65, ಕೊಪ್ಪಳ 3, ಮಂಡ್ಯ 183, ಮೈಸೂರು 203, ರಾಯಚೂರು 4, ರಾಮನಗರ 28, ಶಿವಮೊಗ್ಗ 66, ತುಮಕೂರು 53, ಉಡುಪಿ 186, ಉತ್ತರ ಕನ್ನಡ 52, ವಿಜಯಪುರ 22, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
ಕರ್ನಾಟಕದಲ್ಲಿ ಯಾವ ರೂಪಾಂತರಿ ಸೋಂಕು ಹೆಚ್ಚು?:
ಕೊರೊನಾವೈರಸ್ ಸೋಂಕಿನ ಯಾವ ರೂಪಾಂತರಿಯು ಹೆಚ್ಚು ಹರಡುತ್ತಿದೆ ಎಂಬುದನ್ನು ಮುಂದೆ ಪಟ್ಟಿ ಮಾಡಲಾಗಿದೆ:
ಅಲ್ಫಾ/ B.1.1.7 - 156
ಬೀಟಾ/ B.1.351 - 08
ಡೆಲ್ಟಾ / B.1.617.2 - 2937
ಡೆಲ್ಟಾ ಪ್ಲಸ್ - 1350
ಕಪ್ಪಾ / B.1.617.1 - 160
ETA / B.1.525 - 01
ಓಮಿಕ್ರಾನ್/ B.1.1.529 - 333












Click it and Unblock the Notifications