ʼಬೆಂಗಳೂರಿನ ಇಬ್ಬರು ಸೇರಿದಂತೆ 8 ಬಿಜೆಪಿ ಶಾಸಕರು ಕಾಂಗ್ರೆಸ್​ಗೆʼ

ಬೆಂಗಳೂರು, ಅಕ್ಟೋಬರ್‌ 24: ಲೋಕಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯ ಗದ್ದಲ ಜೋರಾಗಿದೆ. ಕಳೆದ ವಿಧಾನಸಭಾ ಚುಣಾವಣೆಯಲ್ಲಿ ಕಾಂಗ್ರೆಸ್‌ 135 ಸ್ಥಾನಗಳನ್ನ ಗೆದ್ದು ಸರ್ಕಾರ ರಚನೆ ಮಾಡಿದ್ರು ಸಹ ಕರ್ನಾಟಕದಲ್ಲಿ ಸದ್ದಿಲ್ಲದೇ ಆಪರೇಷನ್‌ ಹಸ್ತ ನಡೆಯುತ್ತಿದೆ.

ಮುಡಾ ಹಗರಣ , ವಾಲ್ಮೀಕಿ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದ್ದು, ಕೆಲ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಕೇಸರಿ ಪಡೆ ನಾಯಕರು ಹೇಳಿದ್ದಾರೆ. ಆದರೆ, ಚನ್ನಪಟ್ಟಣ ಕ್ಷೇತ್ರದ ಸದ್ಯ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಬಿಜೆಪಿ ಟಿಕೆಟ್‌ ಸಿಗದ ಹಿನ್ನಲೆ ಸಿಪಿ ಯೋಗೇಶ್ವರ್ ಅವರು ಬಿಜೆಪಿಗೆ ಗುಡ್​ಬೈ ಹೇಳಿ ಕಾಂಗ್ರೆಸ್​​ನಿಂದ ಕಣಕ್ಕಿಳಿದಿದ್ದಾರೆ. ಈ ಎಲ್ಲಾ ಬೆಳವಣಿಗೆಯ ನಡುವೆ ಬಿಜೆಪಿಯ 8 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂದು ಬೆಂಗಳೂರಿನ ಬಿಜೆಪಿ ಶಾಸಕರೊಬ್ಬರು ಹೊಸ ಬಾಂಬ್‌ ಸಿಡಿಸಿದ್ದಾರೆ.

8 BJP MLAs will be Join Congress Says MLA ST somashekar

ಬಿಜೆಪಿಯಿಂದ ಕಾಂಗ್ರೆಸ್ ಗೆ 8 ಜನ ಶಾಸಕರು ಹೋಗುತ್ತಾರೆ. ಅದರಲ್ಲೂ ಬೆಂಗಳೂರಿನ ಇಬ್ಬರು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದು ಬಿಜೆಪಿ ಶಾಸಕ ಎಸ್​​ ಟಿ ಸೋಮಶೇಖರ್​ ಅವರು ಹೇಳಿಕೆ ನೀಡಿದ್ದು, ಸದ್ಯ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸುವಂತೆ ಮಾಡಿದೆ.

ಬಿಜೆಪಿಯಿಂದ ಕಾಂಗ್ರೆಸ್ ಗೆ ಎಂಟು ಜನ ಶಾಸಕರು ಹೋಗುತ್ತಾರೆ. ಅದರಲ್ಲೂ ಬೆಂಗಳೂರಿನ ಇಬ್ಬರು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ. ನನ್ನ ಮೇಲೆ ಯಾವುದೇ ಶಿಸ್ತು ಕ್ರಮ ಜರುಗಿಸಿದ್ರು ನನಗೆ ಭಯವಿಲ್ಲ. ಅಶೋಕ್ ಮಾತಿಗೆ ಬೆಲೆ ಕೊಡಬಾರದು. ಸದ್ಯದಲ್ಲಿ ನೋಡುತ್ತಿರಿ ಇನ್ನು ಎಂಟು ಮಂದಿ ಕಾಂಗ್ರೆಸ್ ಗೆ ಹೋಗುತ್ತಾರೆ ಎಂದು ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್ ಅವರು ಬಹಿರಂಗವಾಗಿಯೇ ಹೇಳಿದ್ದಾರೆ.

ಸಿಪಿ ಯೋಗೇಶ್ವರ್ ರಿಂದ ಚೆನ್ನಾಗಿ ಕೆಲಸ ಮಾಡಿಸಿಕೊಂಡು ಈಗ ಕೈ ಬಿಟ್ಟರು. ನನ್ನ ಮೇಲೆ ಯಾವುದೇ ಶಿಸ್ತು ಕ್ರಮ ಜರುಗಿಸಿದ್ರು ನನಗೆ ಭಯವಿಲ್ಲ. ನನಗೆ ನನ್ನ ಕ್ಷೇತ್ರದ ಅಭಿವೃದ್ಧಿಯಾಗಬೇಕು. ಅದಕ್ಕೆ ನಾನು ನಿರಂತರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡುತ್ತೇನೆ ಎಂದು ಯಶವಂತಪುರ ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್‌ ಹೇಳಿದರು.

ಇನ್ನು ಸೋಮಶೇಖರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್​ ಸೇರಿದಂತೆ ಕಾಂಗ್ರೆಸ್​​ ಶಾಸಕರ, ನಾಯಕರ ಜೊತೆ ಉತ್ತಮ ಸಂಬಂಧ ಹೊಂದಿದ್ದು, ಅವರ ಆಗಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಕಳೆದ ಲೋಕಸಭಾ ಚುನಾವಣೆಯಲ್ಲಿಯೂ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್ ಅವರು ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎನ್ನುವ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿ ಬಂದಿದತ್ತು. ಆದರೆ, ಇದೀಗ ಬಿಜೆಪಿ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡಿದ್ದು, ಸದ್ಯದಲ್ಲಿ ಎಸ್‌ ಟಿ ಸೋಮಶೇಖರ್‌ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+