LS Polls: ಇಂದು ಏ.1ರಂದು ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ವಿವರ ಇಲ್ಲಿದೆ
ಬೆಂಗಳೂರು, ಏಪ್ರಿಲ್ 01: ಲೋಕಸಭಾ ಚುನಾವಣೆಯ ಅಧಿಸೂಚನೆ ಪ್ರಕಟ ಬಳಿಕ ಮೊದಲ ಹಂತದಲ್ಲಿ ಚುನಾವಣೆ ಎದುರಿಸುವ ಕ್ಷೇತ್ರಗಳ ಪೈಕಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕ್ಷೇತ್ರಗಳ ಅಭ್ಯರ್ಥಿಗಳು ಸೋಮವಾರ ನಾಮಪತ್ರ ಸಲ್ಲಿಸಿದರು. ಇಂದು ಒಟ್ಟು ಎಂಟು ಮಂದಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಅವರ ಮಾಹಿತಿ ಇಲ್ಲಿದೆ.
ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು ಆಯಾ ಕ್ಷೇತ್ರಗಳಲ್ಲಿ ಚುನಾವಣಾಧಿಕಾರಿಗಳ ಕಚೇರಿಗೆ ಶುಭ ಸಮಯದಲ್ಲಿ ತೆರಳಿ ಉಮೇದುವಾರಿಕೆ ಸಲ್ಲಿಸಿದರು. ಕೆಲವು ನಾಯಕರು ನಾಮಪತ್ರ ಸಲ್ಲಿಕೆ ಮೊದಲು ದೇವರಲ್ಲಿ ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಸಿ, ಭರ್ಜರಿ ಮೆರವಣಿಗೆ ಮೂಲಕ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿದರು.

ಶುಭಗಳಿಗೆಯಲ್ಲಿ ಯಧುವೀರ ನಾಮಪತ್ರ ಸಲ್ಲಿಕೆ
ಬಿಜೆಪಿಯಿಂದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಪಡೆದ ರಾಜವಂಶಸ್ಥರಾದ ಮೈಸೂರಿನ ಯಧುವೀರ ಕೃಷ್ಣದತ್ತ ಒಡೆಯರ್ ಅವರು ಜಿಲ್ಲಾ ಚುನಾವಣಾಧಿಕಾರಿಗಳಲ್ಲಿ ನಾಮಪತ್ರ ಸಲ್ಲಿಸಿರುವ. ಶುಭಗಳಿಗೆ ನೋಡಿಕೊಂಡು ಕಚೇರಿಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ಯಧುವೀರ ಕೃಷ್ಣದತ್ತ ಒಡೆಯರ್ ಅವರು ಉಮೇದುವಾರಿಕೆ ಸಲ್ಲಿಸಿದರು. ಬುಧವಾರ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ.
ಗಣೇಶ ಪೂಜೆ ಬಳಿಕ ಉಮೇದುವಾರಿಕೆ ಸಲ್ಲಿಕೆ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಇದೇ ಮೊದಲ ಬಾರಿಗೆ ಟಿಕೆಟ್ ಪಡೆದ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರು ಗಣೇಶ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲಿಂದ ನೇರ ಚುನಾವಣಾಧಿಕಾರಿಗಳ ಕಚೇರಿಗೆ ಹೋಗಿ ಉಮೇದುವಾರಿಕೆ ಸಲ್ಲಿಸಿದರು. ಅವರೊಂದಿಗೆ ಬಂಬಲಿಗರು ಆಗಮಿಸಿದ್ದರು.
ರಾಜಧಾನಿಯ ಮತ್ತೊಂದು ಕ್ಷೇತ್ರವಾದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪಿಸಿ ಮೋಹನ್ ಅವರು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯೂ ಆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಾಮಪತ್ರ ಸಲ್ಲಿಸಿದರು. ಈ ವೇಳೆ ಕಾರ್ಯಕರ್ತರು, ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಒಂದೇ ದಿನ ಪ್ರತಿಸ್ಪರ್ಧಿಗಳ ನಾಮಪತ್ರ ಸಲ್ಲಿಕೆ
ಬಿಜೆಪಿ ಮಾಜಿ ಸಚಿವರ ಡಾ.ಕೆ.ಸುಧಾಕರ್ ಅವರು ಚಿಕ್ಕಬಳ್ಳಾಪುರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ ಅವರು ಇಂದು ನಾಮಪತ್ರ ಸಲ್ಲಿಸಿದರು. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಸಹ ಸೋಮವಾರವೇ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು.
ಇದೇ ರೀತಿ ತುಮಕೂರಿನ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ವಿ.ಸೋಮಣ್ಣ, ಕಾಂಗ್ರೆಸ್ ಅಭ್ಯರ್ಥಿಯಾದ ಸ್ಟಾರ್ ಚಂದ್ರು ಎಂದು ಕರೆಯುವ ವೆಂಕಟರಮಣೇಗೌಡ ಅವರು ಮಂಡ್ಯದಿಂದ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್ ಅವರು ಹಾಸನ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಿದರು.
ಅಭ್ಯರ್ಥಿಗಳು ಚುನಾವಣಾ ಪ್ರಚಾರ ಸಹಿತ, ಬೆಂಬಲಿಗರು ಮತ್ತು ಸ್ಥಳೀಯರು ಮುಖಂಡರ ಜೊತೆಗೂ ನಾಮಪತ್ರ ಸಲ್ಲಿಕೆಗೆ ಆಗಮಿಸಿದರು. ನೂರಾರು ಕಾರ್ಯಕರ್ತರು ತಮ್ಮ ನಾಯಕರ ಜೊತೆ ಆಗಮಿಸಿದ್ದು, ಕಂಡು ಬಂತು.
ಪ್ರಮುಖ ದಿನಾಂಕಗಳ ಮಾಹಿತಿ
ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಲೋಕಸಭಾ ಚುನಾವಣೆಯು ಏಪ್ರೀಲ್ 26ರಂದು ನಡೆದರೆ, ಬಾಕಿ 14 ಕ್ಷೇತ್ರಗಳಿಗೆ ಮೇ 7ರಂದು ನಡೆಯಲಿದೆ. ಇದೀಗ ಮೊದಲ ಹಂತದ ಚುನಾವಣೆ ಎದುರಿಸುವ ಅಭ್ಯರ್ಥಿಗಳಿಗೆ ಏಪ್ರಿಲ್ 4ರವರೆಗೂ ನಾಮಪತ್ರ ಸಲ್ಲಿಕೆಗೆ ಅವಕಾಶ ಇದೆ. ಮರುದಿನವೇ ಚುನಾವಣಾಧಿಕಾರಿಗಳು ನಾಮಪತ್ರ ಪರಿಶೀಲಿಸುತ್ತಾರೆ. ನಂತರ ಏಪ್ರಿಲ್ 8 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ಚುನಾವಣೆ ಆಯೋಗದ ಅಧಿಸೂಚನೆ ತಿಳಿಸಿದೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications