ಪೈಪ್ ಮೂಲಕ ಎಲ್‌ಪಿಜಿ ಪೂರೈಕೆ, ಕರ್ನಾಟಕದ 8 ಜಿಲ್ಲೆ ಆಯ್ಕೆ
ಬೆಂಗಳೂರು, ನವೆಂಬರ್ 22 : ಪೈಪ್‌ಲೈನ್ ಮೂಲಕ ಮನೆ-ಮನೆಗೆ ಎಲ್‌ಪಿಜಿ ಗ್ಯಾಸ್ ಪೂರೈಕೆ ಮಾಡುವ ಯೋಜನೆಗೆ ಕರ್ನಾಟಕದ 8 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. 7.34 ಲಕ್ಷ ಮನೆಗಳಿಗೆ ಗ್ಯಾಸ್ ಪೂರೈಕೆ ಮಾಡಲಾಗುತ್ತದೆ.
ನವದೆಹಲಿಯಲ್ಲಿ ಏಪ್ರಿಲ್‌ನಲ್ಲಿ ನಡೆದ ಸಭೆಯಲ್ಲಿ ರಾಜ್ಯದ 8 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಶೀಘ್ರದಲ್ಲೇ ಈ ಯೋಜನೆ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಶಂಕುಸ್ಥಾಪನೆ ಮಾಡಲಿದ್ದಾರೆ.
ಪ್ರಸ್ತುತ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಪೈಪ್‌ಲೈನ್ ಮೂಲಕ ಎಲ್‌ಪಿಜಿ ಪೂರೈಕೆ ಮಾಡಲಾಗುತ್ತಿದೆ. ಇದೇ ಯೋಜನೆಯನ್ನು ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಯಾವ-ಯಾವ ಜಿಲ್ಲೆ? : ರಾಮನಗರ, ಚಿತ್ರದುರ್ಗ, ಉಡುಪಿ, ಬಳ್ಳಾರಿ, ಗದಗ, ಬೀದರ್, ದಕ್ಷಿಣ ಕನ್ನಡ, ದಾವಣಗೆರೆ ಜಿಲ್ಲೆಗಳ 7.34 ಲಕ್ಷ ಮನೆಗಳಿಗೆ ಪೈಪ್‌ಲೈನ್ ಮೂಲಕ ಗ್ಯಾಸ್ ಪೂರೈಕೆ ಮಾಡಲಾಗುತ್ತದೆ. 218 ಗ್ಯಾಸ್ ಪೂರೈಕೆ ಮಾಡುವ ಘಟಕಗಳನ್ನು ಆರಂಭಿಸಲಾಗುತ್ತದೆ.












Click it and Unblock the Notifications