ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೈಪ್‌ ಮೂಲಕ ಎಲ್‌ಪಿಜಿ ಪೂರೈಕೆ, ಕರ್ನಾಟಕದ 8 ಜಿಲ್ಲೆ ಆಯ್ಕೆ

|
Google Oneindia Kannada News

ಬೆಂಗಳೂರು, ನವೆಂಬರ್ 22 : ಪೈಪ್‌ಲೈನ್ ಮೂಲಕ ಮನೆ-ಮನೆಗೆ ಎಲ್‌ಪಿಜಿ ಗ್ಯಾಸ್ ಪೂರೈಕೆ ಮಾಡುವ ಯೋಜನೆಗೆ ಕರ್ನಾಟಕದ 8 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. 7.34 ಲಕ್ಷ ಮನೆಗಳಿಗೆ ಗ್ಯಾಸ್ ಪೂರೈಕೆ ಮಾಡಲಾಗುತ್ತದೆ.

ಕರ್ನಾಟಕದಲ್ಲಿ 1000 ರುಪಾಯಿ ದಾಟಿತು ಸಬ್ಸಿಡಿರಹಿತ ಅಡುಗೆ ಅನಿಲ ಸಿಲಿಂಡರ್ ದರ ಕರ್ನಾಟಕದಲ್ಲಿ 1000 ರುಪಾಯಿ ದಾಟಿತು ಸಬ್ಸಿಡಿರಹಿತ ಅಡುಗೆ ಅನಿಲ ಸಿಲಿಂಡರ್ ದರ

ನವದೆಹಲಿಯಲ್ಲಿ ಏಪ್ರಿಲ್‌ನಲ್ಲಿ ನಡೆದ ಸಭೆಯಲ್ಲಿ ರಾಜ್ಯದ 8 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಶೀಘ್ರದಲ್ಲೇ ಈ ಯೋಜನೆ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಶಂಕುಸ್ಥಾಪನೆ ಮಾಡಲಿದ್ದಾರೆ.

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಉರುಳಿ ಬಿದ್ದ ಗ್ಯಾಸ್ ಟ್ಯಾಂಕರ್, ತಪ್ಪಿದ ಅನಾಹುತ ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಉರುಳಿ ಬಿದ್ದ ಗ್ಯಾಸ್ ಟ್ಯಾಂಕರ್, ತಪ್ಪಿದ ಅನಾಹುತ

ಪ್ರಸ್ತುತ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಪೈಪ್‌ಲೈನ್ ಮೂಲಕ ಎಲ್‌ಪಿಜಿ ಪೂರೈಕೆ ಮಾಡಲಾಗುತ್ತಿದೆ. ಇದೇ ಯೋಜನೆಯನ್ನು ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

7 district of Karnataka will get piped gas soon

ಯಾವ-ಯಾವ ಜಿಲ್ಲೆ? : ರಾಮನಗರ, ಚಿತ್ರದುರ್ಗ, ಉಡುಪಿ, ಬಳ್ಳಾರಿ, ಗದಗ, ಬೀದರ್, ದಕ್ಷಿಣ ಕನ್ನಡ, ದಾವಣಗೆರೆ ಜಿಲ್ಲೆಗಳ 7.34 ಲಕ್ಷ ಮನೆಗಳಿಗೆ ಪೈಪ್‌ಲೈನ್ ಮೂಲಕ ಗ್ಯಾಸ್ ಪೂರೈಕೆ ಮಾಡಲಾಗುತ್ತದೆ. 218 ಗ್ಯಾಸ್ ಪೂರೈಕೆ ಮಾಡುವ ಘಟಕಗಳನ್ನು ಆರಂಭಿಸಲಾಗುತ್ತದೆ.

English summary
7.34 lakh houses of the 7 districts of the Karnataka will get piped gas soon. Prime Minister Narendra Modi will lay foundation stone for the project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X