Get Updates
Get notified of breaking news, exclusive insights, and must-see stories!

ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರುವ 8 ಜೆಡಿಎಸ್ ಶಾಸಕರ ಪರಿಚಯ

Recommended Video

      ಕುಮಾರಸ್ವಾಮಿ ಸಂಪುಟ ಸೇರುವ 8 ಜೆಡಿಎಸ್ ಶಾಸಕರು ಯಾರ್ಯಾರು ? | Oneindia Kannada

      ಬೆಂಗಳೂರು, ಜೂನ್ 06 : ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದು ಎರಡು ವಾರಗಳು ಕಳೆದಿವೆ. ಬುಧವಾರ ಸಚಿವ ಸಂಪುಟ ವಿಸ್ತರಣೆ ನಡೆಯುತ್ತಿದೆ. ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರುವ ಜೆಡಿಸ್ ಶಾಸಕರ ಪಟ್ಟಿ ಅಂತಿಮವಾಗಿದೆ.

      8 ಜೆಡಿಎಸ್ ಶಾಸಕರು ಬುಧವಾರ ಮಧ್ಯಾಹ್ನ ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟವನ್ನು ಸೇರಲಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿ ರಾಜಭವನಕ್ಕೆ ರವಾನೆ ಮಾಡಿದ್ದಾರೆ. ಮಧ್ಯಾಹ್ನ 2.11ಕ್ಕೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

      ಕಾಂಗ್ರೆಸ್‌ನ 15, ಜೆಡಿಎಸ್‌ನ 8 ಶಾಸಕರು ಮೊದಲ ಹಂತದ ಸಂಪುಟ ವಿಸ್ತರಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಸಂಪುಟವನ್ನು ಸೇರಲಿದ್ದಾರೆ. ಕಾಂಗ್ರೆಸ್‌ 22, ಜೆಡಿಎಸ್‌ 12 ಸಚಿವ ಸ್ಥಾನಗಳನ್ನು ಹಂಚಿಕೊಂಡಿವೆ.

      ಬುಧವಾರ ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರುವ ಜೆಡಿಎಸ್ ಶಾಸಕರ ಪಟ್ಟಿ ಇಲ್ಲಿದೆ. ಕೊಳ್ಳೇಗಾಲ ಕ್ಷೇತ್ರದ ಬಿಎಸ್‌ಪಿ ಶಾಸಕ ಎನ್.ಮಹೇಶ್ ಅವರಿಗೂ ಸಚಿವರಾಗುವ ಅವಕಾಶ ಸಿಕ್ಕಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಬಿಎಸ್‌ಪಿ ಮೈತ್ರಿ ಮಾಡಿಕೊಂಡಿದ್ದವು.

      ಎಚ್.ಡಿ.ರೇವಣ್ಣ ಕುಮಾರಸ್ವಾಮಿ ಸಂಪುಟಕ್ಕೆ

      ಎಚ್.ಡಿ.ರೇವಣ್ಣ ಕುಮಾರಸ್ವಾಮಿ ಸಂಪುಟಕ್ಕೆ

      ಎಚ್.ಡಿ.ಕುಮಾರಸ್ವಾಮಿ ಸಹೊದರ ಎಚ್.ಡಿ.ರೇವಣ್ಣ ಅವರು ಕುಮಾರಸ್ವಾಮಿ ಸಂಪುಟ ಸೇರುತ್ತಿದ್ದಾರೆ. ರೇವಣ್ಣ ಅವರಿಗೆ ಯಾವ ಖಾತೆ ಸಿಗಲಿದೆ ಎಂದು ಕಾದು ನೋಡಬೇಕು.

      ಈಗಾಗಲೇ ಇಂಧನ, ಲೋಕೋಪಯೋಗಿ ಸಚಿವರಾಗಿ ಕಾರ್ಯ ನಿರ್ವಹಿಸಿದ ಅನುಭವ ರೇವಣ್ಣ ಅವರಿಗಿದೆ. 2018ರ ಚುನಾವಣೆಯಲ್ಲಿ 108541 ಮತಗಳನ್ನು ಪಡೆದು ಅವರು ಜಯಗಳಿಸಿದ್ದಾರೆ.

      ಜಿ.ಟಿ.ದೇವೇಗೌಡ ಕುಮಾರಸ್ವಾಮಿ ಸಂಪುಟಕ್ಕೆ

      ಜಿ.ಟಿ.ದೇವೇಗೌಡ ಕುಮಾರಸ್ವಾಮಿ ಸಂಪುಟಕ್ಕೆ

      ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರಲಿದ್ದಾರೆ.

      ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 30 ಸಾವಿರ ಮತಗಳ ಅಂತರದಿಂದ ಸೋಲಿಸಿದ ಜಿ.ಟಿ.ದೇವೇಗೌಡ ಅವರು ವಿಧಾನಸಭೆ ಪ್ರವೇಶಿಸಿದ್ದಾರೆ.

      2018ರ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಕ್ಷೇತ್ರ ಚಾಮುಂಡೇಶ್ವರಿ. ಸಿದ್ದರಾಮಯ್ಯ ಅವರನ್ನು ಸೋಲಿಸಿದ ಜಿ.ಟಿ.ದೇವೇಗೌಡರಿಗೆ ಮೈಸೂರು ಜಿಲ್ಲಾ ಉಸ್ತುವಾರಿಯೂ ಸಿಗುವ ಸಾಧ್ಯತೆ ಇದೆ.

      ದೇವೇಗೌಡರ ಆಪ್ತರು ಕುಮಾರಸ್ವಾಮಿ ಸಂಪುಟಕ್ಕೆ

      ದೇವೇಗೌಡರ ಆಪ್ತರು ಕುಮಾರಸ್ವಾಮಿ ಸಂಪುಟಕ್ಕೆ

      ರಾಯಚೂರು ಜಿಲ್ಲೆಯ ಸಿಂಧನೂರು ಕ್ಷೇತ್ರದ ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಸಚಿವರಾಗಿ ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರಲಿದ್ದಾರೆ.

      ವೆಂಕಟರಾವ್ ನಾಡಗೌಡ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. 2018ರ ಚುನಾವಣೆಯಲ್ಲಿ 71,514 ಮತಗಳನ್ನು ಪಡೆದು ಅವರು ಜಯಗಳಿಸಿದ್ದಾರೆ.

      ಸಿ.ಎಸ್.ಪುಟ್ಟರಾಜು ಸಚಿವ ಸಂಪುಟಕ್ಕೆ

      ಸಿ.ಎಸ್.ಪುಟ್ಟರಾಜು ಸಚಿವ ಸಂಪುಟಕ್ಕೆ

      ಮಂಡ್ಯ ಜಿಲ್ಲೆಗೆ ಸಚಿವ ಸ್ಥಾನ ಸಿಕ್ಕಿದೆ. ಮೇಲುಕೋಟೆ ಕ್ಷೇತ್ರದ ಶಾಸಕ ಸಿ.ಎಸ್.ಪುಟ್ಟರಾಜು ಅವರು ಸಚಿವರಾಗಿ ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರಲಿದ್ದಾರೆ.

      ಸಿ.ಎಸ್.ಪುಟ್ಟರಾಜು ಮಂಡ್ಯ ಕ್ಷೇತ್ರದ ಸಂಸದರಾಗಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

      ಕುಮಾರಸ್ವಾಮಿ ಸಂಪುಟಕ್ಕೆ ಕಾಶೆಂಪೂರ

      ಕುಮಾರಸ್ವಾಮಿ ಸಂಪುಟಕ್ಕೆ ಕಾಶೆಂಪೂರ

      ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟಕ್ಕೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಕಾಶೆಂಪೂರ ಅವರು ಸೇರಲಿದ್ದಾರೆ. ಬಂಡೆಪ್ಪ ಕಾಶೆಂಪೂರ ಅವರು ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಅವರಿಗೆ ಆಪ್ತರು. ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಪಕ್ಷದ ಪ್ರಭಾವಿ ನಾಯಕರು.

      ಸಾ.ರಾ.ಮಹೇಶ್‌ ಕುಮಾರಸ್ವಾಮಿ ಸಂಪುಟಕ್ಕೆ

      ಸಾ.ರಾ.ಮಹೇಶ್‌ ಕುಮಾರಸ್ವಾಮಿ ಸಂಪುಟಕ್ಕೆ

      ಮೈಸೂರು ಜಿಲ್ಲೆಗೆ 2 ಸಚಿವ ಸ್ಥಾನಗಳು ಸಿಗಲಿವೆ. ಕೆ.ಆರ್.ನಗರ ಕ್ಷೇತ್ರದ ಶಾಸಕ ಸಾ.ರಾ.ಮಹೇಶ್ ಅವರು ಸಂಪುಟ ಸೇರಲಿದ್ದಾರೆ. 2018ರ ಚುನಾವಣೆಯಲ್ಲಿ ಸಾ.ರಾ.ಮಹೇಶ್ ಅವರು 85011 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

      ಎಚ್.ಕೆ.ಕುಮಾರಸ್ವಾಮಿಗೆ ಸಚಿವ ಸ್ಥಾನ

      ಎಚ್.ಕೆ.ಕುಮಾರಸ್ವಾಮಿಗೆ ಸಚಿವ ಸ್ಥಾನ

      ಹಾಸನ ಜಿಲ್ಲೆಗೆ ಸಚಿವ ಸ್ಥಾನ ಸಿಕ್ಕಿದೆ. ಸಕಲೇಶಪುರ ಕ್ಷೇತ್ರದ ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರ ಸಂಪುಟ ಸೇರಲಿದ್ದಾರೆ.

      ಹಾಸನ ಜಿಲ್ಲೆಯಿಂದ ಎಚ್.ಡಿ.ರೇವಣ್ಣ, ಎಚ್.ಕೆ.ಕುಮಾರಸ್ವಾಮಿ ಅವರು ಸಂಪುಟಕ್ಕೆ ಸೇರುತ್ತಿದ್ದಾರೆ.

      ಎನ್.ಮಹೇಶ್ ಸಚಿವ ಸಂಪುಟಕ್ಕೆ

      ಎನ್.ಮಹೇಶ್ ಸಚಿವ ಸಂಪುಟಕ್ಕೆ

      ಕರ್ನಾಟಕದ ಚುನಾವಣೆಯಲ್ಲಿ ಜೆಡಿಎಸ್-ಬಿಎಸ್‌ಪಿ ಮೈತ್ರಿ ಮಾಡಿಕೊಂಡಿದ್ದವು. ಕೊಳ್ಳೇಗಾಲ ಕ್ಷೇತ್ರದ ಬಿಎಸ್‌ಪಿ ಶಾಸಕ ಎನ್.ಮಹೇಶ್ ಅವರಿಗೆ ಸಚಿವರಾಗುವ ಅವಕಾಶ ಸಿಕ್ಕಿದೆ. ಇಂದು ಸಚಿವರಾಗಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+