ಕಲಬುರಗಿಯಲ್ಲಿ ಭೀಕರ ಅಪಘಾತ, 8 ಸಾವು

Posted By:
Subscribe to Oneindia Kannada

ಕಲಬುರಗಿ, ಜುಲೈ 19 : ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 8 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹಲವು ಜನರು ಅಪಘಾತದಲ್ಲಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಮಂಗಳವಾರ ಮಧ್ಯಾಹ್ನ ಆಳಂದ ತಾಲೂಕಿನ ಡೋಗೀನಾಲಾ ಗ್ರಾಮದ ಬಳಿ ಲಾರಿ ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ನರೋಣಾ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. [ಮುಖ್ಯಮಂತ್ರಿ ಸಾಂತ್ವನ-'ಹರೀಶ್' ಯೋಜನೆ ಬಗ್ಗೆ ತಿಳಿಯಿರಿ]

8 killed in road accident Aland, Kalaburagi

ಮೃತಪಟ್ಟರೆಲ್ಲಾ ಮಹಾರಾಷ್ಟ್ರ ಮೂಲದವರು ಎಂದು ತಿಳಿದುಬಂದಿದೆ. ಕ್ರೂಸರ್‌ನಲ್ಲಿ ಎಲ್ಲರೂ ಶ್ರೀ ಕ್ಷೇತ್ರ ಗಾಣಗಾಪುರ ಕ್ಷೇತ್ರದ ದರ್ಶನಕ್ಕೆಂದು ಹೊರಟಿದ್ದರು.[ಅಪಘಾತವಾದಾಗ ಜೀವ ಉಳಿಸಲು ನೆರವಾಗಿ]

ಕ್ರೂಸರ್‌ನಲ್ಲಿದ್ದ 10ಕ್ಕೂ ಅಧಿಕ ಜನರು ಗಾಯಗೊಂಡಿದ್ದು ಎಲ್ಲರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಗೊಂಡವರಲ್ಲಿ ಬಹುತೇಕ ಜನರು ಮಹಾರಾಷ್ಟ್ರದ ಕಣಗಾರಾ ಗ್ರಾಮದವರಾಗಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Eight persons were killed and many seven were injured in a road accident involving a truck and cruiser at Aland taluk, Kalaburagi on July 19, 2016.
Please Wait while comments are loading...