₹80,000 ಕೋಟಿಗಳಷ್ಟು ಸಾಲ ಕರ್ನಾಟಕದಲ್ಲಿ ಏರಿಕೆ: ಕೇಂದ್ರ ಸಚಿವ
ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಅತ್ಯಂತ ಕಡಿಮೆ ಅನುದಾನ ನೀಡಿದೆ ಎಂದು ಕರ್ನಾಟಕ ಸರ್ಕಾರ ಆರೋಪಿಸಿದೆ. ಇದೀಗ ಈ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರು ರಿಯಾಕ್ಟ್ ಮಾಡಿದ್ದಾರೆ. ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷ, ರಾಜ್ಯದ ಅಭಿವೃದ್ಧಿಯನ್ನು ಮೂಲೆಗುಂಪು ಮಾಡಿ, ಆರ್ಥಿಕ ಸ್ಥಿತಿಗತಿಗಳನ್ನು ಹಳ್ಳಕ್ಕೆ ತಳ್ಳಿ, ಇಂದು ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡಿ ನಿಂತಿದೆ ಎಂದು ದೂರಲಾಗಿದೆ.
ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ರಾಜ್ಯಕ್ಕೆ ಅನುದಾನ ಇಲ್ಲ ಎಂದು ಆರೋಪ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಆರ್ಥಿಕತೆಯನ್ನು ಹಾಳು ಮಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ.

ಸುಮಾರು 30 ಕ್ಕೂ ಹೆಚ್ಚು ವಸ್ತುಗಳ ಮೇಲೆ ತೆರಿಗೆ ಹೆಚ್ಚಿಸಿ, ರಾಜ್ಯದ ಜನರ ರಕ್ತ ಹೀರುತ್ತಿರುವ ಕಾಂಗ್ರೆಸ್ ಪಕ್ಷ, ರಾಜ್ಯಕ್ಕೆ ಬರುತ್ತಿರುವ ಎಲ್ಲಾ ಹಣವನ್ನು ಅವೈಜ್ಞಾನಿಕ ಗ್ಯಾರಂಟಿಗಳಿಗೆ ಬಳಸಿಕೊಳ್ಳುವ ಮೂಲಕ ಸುಭೀಕ್ಷವಾಗಿದ್ದ ರಾಜ್ಯದ ಆರ್ಥಿಕತೆಯನ್ನು ಹಾಳುಗೆಡವಿದೆ. ಹೆಚ್ಚುವರಿ ಆದಾಯವಾಗಿದ್ದ ರಾಜ್ಯದಲ್ಲಿ ಇಂದು ₹80,000 ಕೋಟಿಗಳಷ್ಟು ಸಾಲ ಏರಿಕೆ, ₹8 ಲಕ್ಷ ಕೋಟಿಗೂ ಅಧಿಕ ಆರ್ಥಿಕ ಹೊರೆ, ಬಂಡವಾಳ ಶಾಹಿಗಳು ರಾಜ್ಯದಿಂದ ದೂರು ಹೋಗುವ ಪ್ರಸಂಗಕ್ಕೆ ಕಾರಣೀಭೂತರಾಗಿ ಇಂದು ಕೇಂದ್ರ ಸರ್ಕಾರದ ವಿರುದ್ಧ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ಅವರು ಹೇಳಿದ್ದಾರೆ.
ದೇಶದಲ್ಲಿ 60 ವರ್ಷಗಳ ಕಾಲ ಆಡಳಿತ ನಡೆಸಿದ ಯುಪಿಎ, ತನ್ನ ಅವಧಿಯಲ್ಲಿ 27 ಕ್ಕೂ ಹೆಚ್ಚು ರೀತಿಯ ತೆರಿಗೆಗಳನ್ನು, ಕಂಡ ಕಂಡ ಹಾಗೆ ಜನರ ಮೇಲೆ ವಿಧಿಸಿ, ಜನರ ಬದುಕನ್ನೇ ಮೂರಾಬಟ್ಟೆ ಮಾಡಿ, ಬೀದಿಗೆ ತಳ್ಳಿದ ದಿನಗಳು ಇತಿಹಾಸ. ಆದರೆ, ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಸಾಮಾನ್ಯ ಜನರ ಜೀವನವನ್ನು ಸುಲಭಗೊಳಿಸಿ, 99% ವಸ್ತುಗಳ ಮೇಲಿನ ತೆರಿಗೆಯನ್ನು ಶೂನ್ಯ ಅಥವಾ 5% ಕ್ಕೆ ಇಳಿಸಿದೆ. ಆದಾಯ ತೆರಿಗೆ ಸ್ಲ್ಯಾಬ್ ಅನ್ನು ಹೆಚ್ಚಿಸಿದೆ.
ದುರಾಡಳಿತದಿಂದ ರಾಜ್ಯವನ್ನು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. 2023-24ರಲ್ಲಿ ಸಿಎಜಿ ವರದಿಯಲ್ಲಿ ರಾಜ್ಯ ಮಾಡಿದ ಸಾಲವು ₹63,000 ಕೋಟಿಗಳಷ್ಟಿಗೆ ಏರಿಕೆ ಆಗಿದೆ, ಅಲ್ಲದೆ ಮೂಲಸೌಕರ್ಯ ನಿಧಿಯಿಂದ ಇತರ ಯೋಜನೆಗಳಿಗೆ ತಿರುಗಿಸಲ್ಪಟ್ಟಿರುವುದು ಬಹಿರಂಗವಾಗಿದೆ. ಇದು ನಿಮ್ಮ ಸರ್ಕಾರದ ಕೊಡುಗೆ ಎಂದು ಅವರು ಹೇಳಿದ್ದಾರೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications