ಸಿಹಿಸುದ್ದಿ: ಕರ್ನಾಟಕದಲ್ಲಿ ಇಳಿಮುಖ ಕಂಡ ಕೊರೊನಾ ಸೋಂಕು ಪ್ರಕರಣ
ಬೆಂಗಳೂರು, ಸೆಪ್ಟೆಂಬರ್ 11: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬರುತ್ತಿದ್ದು, ಕಳೆದ 24 ಗಂಟೆಗಳಲ್ಲಿ 15 ಸಾವಿನ ಪ್ರಕರಣಗಳು ವರದಿಯಾಗಿದೆ. ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.67ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.87ರಷ್ಟಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 801 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ರಾಜ್ಯದ ಆರೋಗ್ಯ ಇಲಾಖೆ ವರದಿಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1142 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ 15 ಮಂದಿ ಕೊರೊನಾ ವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37,487 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಶನಿವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 29,60,932ಕ್ಕೆ ಏರಿಕೆಯಾಗಿದೆ. ಒಟ್ಟು 29,06,746 ಸೋಂಕಿತರು ಗುಣಮುಖರಾಗಿದ್ದು. ಇನ್ನೂ 16,672 ಕೊವಿಡ್- 19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ಕೊವಿಡ್-19 ಪ್ರಕರಣ ವರದಿ
ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 207 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಇದು ನಿನ್ನೆಯ ವರದಿಗೆ ಹೋಲಿಸಿದರೆ ಕಡಿಮೆಯಾಗಿದೆ.
ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1241170ಕ್ಕೆ ಏರಿಕೆಯಾಗಿದೆ. ಇಂದು 2 ಮಂದಿ ಕೋವಿಡ್‌ಗೆ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 16047ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ 7229 ಸಕ್ರಿಯ ಪ್ರಕರಣಗಳಿವೆ.
ಕೊರೊನಾ ವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?
ರಾಜ್ಯದಲ್ಲಿ ಗಣೇಶ ಹಬ್ಬವಿದ್ದರೂ ಕೊರೊನಾ ಸೋಂಕು ಪ್ರಕರಣಗಳು ಕಡಿಮೆಯಾಗಿವೆ. ಆದರೂ ಕೊರೊನಾ ವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 17,191 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,02,312 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,19,503 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.
ರಾಜ್ಯದಲ್ಲಿ ಈವರೆಗೂ 84,26,144 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,67,68,608 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,51,94,752 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೋವಿಡ್ ಸೋಂಕು
ರಾಜ್ಯದಲ್ಲಿ ಒಟ್ಟು 801 ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 1, ಬಳ್ಳಾರಿ 4, ಬೆಳಗಾವಿ 93, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು 207, ಬೀದರ್ 2, ಚಾಮರಾಜನಗರ 6, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 39, ಚಿತ್ರದುರ್ಗ 2, ದಕ್ಷಿಣ ಕನ್ನಡ 133, ದಾವಣಗೆರೆ 8, ಧಾರವಾಡ 1, ಗದಗ 0, ಹಾಸನ 17, ಹಾವೇರಿ 0, ಕಲಬುರಗಿ 6, ಕೊಡಗು59, ಕೋಲಾರ 2, ಕೊಪ್ಪಳ 1, ಮಂಡ್ಯ 12, ಮೈಸೂರು 47, ರಾಯಚೂರು 2, ರಾಮನಗರ 0, ಶಿವಮೊಗ್ಗ 30, ತುಮಕೂರು 26, ಉಡುಪಿ 86, ಉತ್ತರ ಕನ್ನಡ 11, ವಿಜಯಪುರ 0, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 133 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. 343 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಶನಿವಾರ ನಾಲ್ವರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
Recommended Video
ಶನಿವಾರ ಜಿಲ್ಲೆಯಲ್ಲಿ ಶೇ. 1.35 ಪಾಸಿಟಿವಿಟಿ ದರ ದಾಖಲಾಗಿದೆ. ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 1,12,193ಕ್ಕೆ ಏರಿಕೆಯಾಗಿದೆ. ಈ ಪೈಕಿ 1812 ಸಕ್ರಿಯ ಪ್ರಕರಣಗಳು. 1,08,771 ಮಂದಿ ಗುಣಮುಖರಾಗಿದ್ದಾರೆ. 1610 ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 87014 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 10593670ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.












Click it and Unblock the Notifications