ಕರ್ನಾಟಕದಲ್ಲಿ ಕೊವಿಡ್-19 ಪ್ರಕರಣ ಮತ್ತು ಗುಣಮುಖರ ನಡುವಿನ ಅಂತರವೆಷ್ಟು?
ಬೆಂಗಳೂರು, ಸೆಪ್ಟೆಂಬರ್ 12: ಕರ್ನಾಟಕದಲ್ಲಿ ಅಕ್ಟೋಬರ್ ಮತ್ತು ನವೆಂಬರ್ ವೇಳೆಗೆ ಕೊರೊನಾವೈರಸ್ ಮೂರನೇ ಅಲೆಯು ಶುರುವಾಗಲಿದೆ ಎಂದು ತಾಂತ್ರಿಕ ಸಲಹಾ ಸಮಿತಿಯು ಈಗಾಗಲೇ ಎಚ್ಚರಿಕೆ ನೀಡಿದೆ. ಈ ಮಧ್ಯೆ ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.80ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.11ರಷ್ಟಿದೆ.
ರಾಜ್ಯದಲ್ಲಿ ಒಂದು ದಿನದಲ್ಲಿ 803 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 802 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 17 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37504 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2961735ಕ್ಕೆ ಏರಿಕೆಯಾಗಿದೆ. ಒಟ್ಟು 2907548 ಸೋಂಕಿತರು ಗುಣಮುಖರಾಗಿದ್ದು. 16656 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಪ್ರಕರಣ:
ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 255 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1241425ಕ್ಕೆ ಏರಿಕೆಯಾಗಿದೆ. 6 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 16053ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7371 ಸಕ್ರಿಯ ಪ್ರಕರಣಗಳಿವೆ.
ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 27,669 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 72,507 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,00,176 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 84,53,813 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,68,41,115 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,52,94,928 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?
ರಾಜ್ಯದಲ್ಲಿ ಒಟ್ಟು 803 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 1, ಬಳ್ಳಾರಿ 4, ಬೆಳಗಾವಿ 17, ಬೆಂಗಳೂರು ಗ್ರಾಮಾಂತರ 11 ಬೆಂಗಳೂರು 255, ಬೀದರ್ 0, ಚಾಮರಾಜನಗರ 6, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 14, ಚಿತ್ರದುರ್ಗ 4, ದಕ್ಷಿಣ ಕನ್ನಡ 153, ದಾವಣಗೆರೆ 9, ಧಾರವಾಡ 9, ಗದಗ 0, ಹಾಸನ 30, ಹಾವೇರಿ 1, ಕಲಬುರಗಿ 2, ಕೊಡಗು 63, ಕೋಲಾರ 8, ಕೊಪ್ಪಳ 4, ಮಂಡ್ಯ 11, ಮೈಸೂರು 36, ರಾಯಚೂರು 2, ರಾಮನಗರ 1, ಶಿವಮೊಗ್ಗ 24, ತುಮಕೂರು 22, ಉಡುಪಿ 90, ಉತ್ತರ ಕನ್ನಡ 28, ವಿಜಯಪುರ 0, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Recommended Video
ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?
ರಾಜ್ಯದಲ್ಲಿ ಈವರೆಗೂ 7,62,731 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 6,12,871 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,37,585 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 5,80,497 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,44,24,401 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 73,53,854 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 3,52,26,698 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 1,22,90,170 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.












Click it and Unblock the Notifications