ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಹಾಸನ, ಜ. 21 : ಶ್ರವಣಬೆಳಗೊಳದಲ್ಲಿ ಫೆ.1ರಿಂದ ಆರಂಭವಾಗಲಿರುವ 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ. ಸಮ್ಮೇಳದನ ಸಿದ್ಧತೆಗಳು ಬಿರುಸಿನಿಂದ ನಡೆಯುತ್ತಿದೆ.

ಮಂಗಳವಾರ ಹಾಸನ ಜಿಲ್ಲಾಧಿಕಾರಿ ಉಮೇಶ್‌ ಎಚ್‌. ಕುಸುಗಲ್‌ ಅವರು 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು. ಈ ಬಾರಿಯ ಸಮ್ಮೇಳನಕ್ಕೆ ಒಟ್ಟು 4 ರಿಂದ 4.5­ಕೋಟಿ ರೂಪಾಯಿ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ ಎಂದರು ಹೇಳಿದರು. [ಸಮ್ಮೇಳನ ಮುಖ್ಯ ವೇದಿಕೆಗೆ ಒಡೆಯರ್ ಹೆಸರು]

Kannada Sahitya Sammelana

ಸಮ್ಮೇಳನಕ್ಕಾಗಿ ಸರ್ಕಾರ ಒಂದು ಕೋಟಿ ರೂಪಾಯಿ ನೀಡಿದೆ. ಸರ್ಕಾರಿ ನೌಕರರು ಅರ್ಧದಿನದ ಸಂಬಳ ನೀಡಲು ಒಪ್ಪಿಗೆ ನೀಡಿದ್ದಾರೆ. ಅದರಿಂದ ಸುಮಾರು ಒಂದು ಕೋಟಿ ರೂಪಾಯಿ ದೊರೆಯಲಿದೆ. ಸಮ್ಮೇಳನಕ್ಕಾಗಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸುವ ಉದ್ದೇಶವಿಲ್ಲ ಎಂದು ತಿಳಿಸಿದರು. [ಎತ್ತಿನಗಾಡಿಯಲ್ಲಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ]

ಸಮ್ಮೇಳನದಲ್ಲಿ ಪ್ರತಿ ದಿನ 25ರಿಂದ 30 ಸಾವಿರ ಜನರು ಊಟ ಮಾಡಬಹುದು ಎಂಬ ನಿರೀಕ್ಷೆ ಇದೆ. 12 ರಿಂದ 15 ಸಾವಿರ ಜನ­ರಿಗೆ ವಸತಿ ವ್ಯವಸ್ಥೆ ಮಾಡಲಾ­ಗು­ತ್ತಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು. ಸಮ್ಮೇಳನದ ಯಶಸ್ಸಿಗೆ ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

Kannada

ಬಿರುಸಿನಿಂದ ನಡೆದಿದೆ ಕಾಮಗಾರಿ : ಸಮ್ಮೇಳನದ ಪೂರ್ವ ಸಿದ್ಧತಾ ಸಮಿತಿ ಮಂಗಳವಾರ ಸಭೆ ನಡೆಸಿ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದೆ. ಶ್ರವಣಬೆಳಗೊಳದಲ್ಲಿ ವೇದಿಕೆ ನಿರ್ಮಾಣ ಕಾರ್ಯ ಬಿರುಸಿನಿಂದ ನಡೆಯುತ್ತಿದೆ.

ಫೆಬ್ರವರಿ 1ರಿಂದ ಮೂರು ದಿನಗಳ ಕಾಲ ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರು ಸಮ್ಮೇಳನದ ಅಧ್ಯಕ್ಷರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+