ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಬರೋಬ್ಬರಿ 82 ಸಾವಿರ ಮಕ್ಕಳು ಶಾಲೆಯಿಂದ ಹೊರಗೆ! ಇದೇನಿದು?

|
Google Oneindia Kannada News

Recommended Video

ಕರ್ನಾಟಕದಲ್ಲಿ ಬರೋಬ್ಬರಿ 82 ಸಾವಿರ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ | Oneindia Kannada

ಬೆಂಗಳೂರು, ನವೆಂಬರ್ 5: ಕರ್ನಾಟಕದಲ್ಲಿ ಸುಮಾರು 82 ಸಾವಿರ ಮಕ್ಕಳು ಶಾಲೆಯಿಂದ ಹೊರಗೆ ಇದೇನಿದು ವಿಚಿತ್ರ ಅಂತೀರಾ ಈ ಮಕ್ಕಳು ಶಾಲೆಯ ಶಿಕ್ಷಣದಿಂದ ದೂರ ಇದ್ದಾರೆ.

ದೀಪಾವಳಿ ವಿಶೇಷ ಪುರವಣಿ

ವಿದ್ಯಾರ್ಥಿಗಳನ್ನು ಶಾಲೆಗೆ ಕರೆ ತರಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ.ಹೀಗಾಗಿ ಬಲವಾದ ಕಾರಣ ಏನೆಂದು ಅರಿಯಲು ನಿರ್ಧರಿಸಿದೆ.

ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಕುರಿತು ನಿರ್ದಿಷ್ಟವಾದ ಅಂಕಿ ಅಂಶ ಲಭ್ಯವಾಗುತ್ತಿಲ್ಲ. ಈ ಕುರಿತು ದತ್ತಾಂಶ ಸಂಗ್ರಹಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಹೊಸ ಸಮೀಕ್ಷೆ ನಡೆಸಲು ನಿರ್ಧರಿಸಿದೆ.

ಛೆ, ಇದೆಂಥ ವಿಡಿಯೋ ನೋಡಿ! ವಿದ್ಯಾರ್ಥಿಗಳ ಕಾಲಿಗೆ ಬಿದ್ದ ಗುರು! ಛೆ, ಇದೆಂಥ ವಿಡಿಯೋ ನೋಡಿ! ವಿದ್ಯಾರ್ಥಿಗಳ ಕಾಲಿಗೆ ಬಿದ್ದ ಗುರು!

ಈ ಕುರಿತು ಚರ್ಚೆ ನಡೆಸಲು ನವೆಂಬರ್ 14ರಂದು ಗ್ರಾಮ ಸಭೆ ನಡೆಸಲು ಚಿಂತನೆ ನಡೆದಿದೆ. ಎಸ್‌ಎಟಿಎಸ್ ಮೂಲಕ ನೋಂದಣಿ ಮಾಡಿಕೊಳ್ಳುವ ವ್ಯವಸ್ಥೆಯೇನೋ ಇದೆ ಆದರೆ ಎಸ್‌ಎಟಿಎಸ್ ವ್ಯವಸ್ಥೆಯಲ್ಲಿ ನಮೂದಿಸಲಾಗುವ ವಿದ್ಯಾರ್ಥಿಗಳ ಸಂಖ್ಯೆ, ಕೇಣದ್ರ ಮಾನವ ಸಂಪನ್ಮೂಲ ಸಚಿವಾಲಯದ ಬಳಿ ಇರುವ ಅಂಕಿ ಅಂಶಗಳಿಗೂ ಭಾರಿ ವ್ಯತ್ಯಾಸ ಕಂಡುಬಂದಿರುವ ಕಾರಣ ಹೊಸದಾಗಿ ಸಮೀಕ್ಷೆ ನಡೆಸಲು ಸಿದ್ಧತೆ ನಡೆದಿದೆ.

ಒಟ್ಟು 82 ಸಾವಿರ ವಿದ್ಯಾರ್ಥಿಗಳು ಶಿಕ್ಷಣದಿಂದ ಹೊರಗೆ

ಒಟ್ಟು 82 ಸಾವಿರ ವಿದ್ಯಾರ್ಥಿಗಳು ಶಿಕ್ಷಣದಿಂದ ಹೊರಗೆ

2018-19ನೇ ಸಾಲಿನಲ್ಲಿ 6ರಿಂದ 16 ವರ್ಷದ ಸುಮಾರು 82 ಸಾವಿರ ವಿದ್ಯಾರ್ಥಿಗಳು ಶಾಲೆಗಳಿಂದ ಹೊರಗುಳಿದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಪ್ರತಿಯೊಬ್ಬರನ್ನೂ ಶಿಕ್ಷಿತರನ್ನಾಗಿ ಮಾಡಬೇಕೆಂಬ ಗುರಿಹೊಂದಿದ್ದಾರೆ. ಹಿರಿಯ ನಾಗರಿಕರಿಗೂ ಶಿಕ್ಷಣವನ್ನು ನೀಡಲಾಗುತ್ತಿದೆ. ಆದರೆ ಮಕ್ಕಳೇ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.

3 ವರ್ಷಗಳಿಂದ ವರ್ಗಾವಣೆ ಸ್ಥಗಿತ: ಉಪವಾಸಕ್ಕೆ ಮುಂದಾದ ಶಿಕ್ಷಕರು 3 ವರ್ಷಗಳಿಂದ ವರ್ಗಾವಣೆ ಸ್ಥಗಿತ: ಉಪವಾಸಕ್ಕೆ ಮುಂದಾದ ಶಿಕ್ಷಕರು

ಸಮೀಕ್ಷೆಯಲ್ಲಿ ಯಾರ್ಯಾರಿರ್ತಾರೆ?

ಸಮೀಕ್ಷೆಯಲ್ಲಿ ಯಾರ್ಯಾರಿರ್ತಾರೆ?

ಶಾಲಾ ವಿದ್ಯಾರ್ಥಿಗಳ ವಿಸ್ತೃತ ಮತ್ತು ಪರಿಣಾಮಕಾರಿಯಾದ ಸಮೀಕ್ಷೆ ನಡೆಸುವ ಅಗತ್ಯವಿದ್ದು, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಕಾರ್ಮಿಕ, ನಗರಾಭಿವೃದ್ಧಿ ಮತ್ತು ಮಕ್ಕಳ ಅಭಿವೃದ್ಧಿ ಆರೋಗ್ಯ ಇಲಾಖೆಯಗಳ ಸಮನ್ವಯದೊಂದಿಗೆ ಗ್ರಾಮ ಪಂಚಾಯ್ತಿ ಸದಸ್ಯರು, ಎಸ್‌ಡಿಎಂಸಿ ಸದಸ್ಯರು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಎನ್‌ಎಸ್‌ಎಸ್ ಸೇರಿದಂತೆ ಇತರೆ ಸ್ವಯಂ ಸೇವಕರ ತಂಡ ರಚಿಸಿ ಸಮೀಕ್ಷೆ ನಡೆಸುವಂತೆ ತಿಳಿಸಲಾಗಿದೆ.

ಉಪನ್ಯಾಸಕರಿಗೆ ಚೆಕ್‌ಪೋಸ್ಟ್ ಕೆಲಸಕೊಟ್ಟ ಚುನಾವಣಾ ಆಯೋಗ ಉಪನ್ಯಾಸಕರಿಗೆ ಚೆಕ್‌ಪೋಸ್ಟ್ ಕೆಲಸಕೊಟ್ಟ ಚುನಾವಣಾ ಆಯೋಗ

ನವೆಂಬರ್ 14ರಂದು ವಿದ್ಯಾರ್ಥಿಗಳ ಸಮೀಕ್ಷೆ

ನವೆಂಬರ್ 14ರಂದು ವಿದ್ಯಾರ್ಥಿಗಳ ಸಮೀಕ್ಷೆ

ನವೆಂಬರ್ 14ರಂದು ಗ್ರಾಮ ಸಭೆ ನಡೆಯಲಿದೆ, ಶಿಕ್ಷಕರು ಶಾಲೆಯಿಂದ ಹೊರಗುಳಿದಿರುವ ಮತ್ತು ಎಸ್‌ಎಟಿಎಸ್ ತಂತ್ರಾಂಶದ್ಲಿ ಅಪ್‌ಡೇಟ್ ಆಗ ಮಕ್ಕಳ ಮಾಹಿತಿಯನ್ನು ನೀಡಲಿದ್ದಾರೆ. ಗ್ರಾಮಸ್ಥರ ಸಹಕಾರದಿಂದ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಪತ್ತೆ ಹಚ್ಚಲಿದ್ದಾರೆ. ನವೆಂಬರ್ 17ರಿಂದ 28ರವರೆಗೆ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಇತರೆ ತಂದದೊಂದಿಗೆ ಸಮೀಕ್ಷೆ ಕೈಗೊಳ್ಳಲಿದ್ದಾರೆ.

ಸಮೀಕ್ಷೆಗೆ ಮೂರು ತಂಡ ರಚನೆ

ಸಮೀಕ್ಷೆಗೆ ಮೂರು ತಂಡ ರಚನೆ

ಸಮೀಕ್ಷೆಯ ಮೇಲ್ವಿಚಾರಣೆಗೆ ರಾಜ್ಯ ಮತ್ತು ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಮೂರು ಸಮಿತಿ ರಚನೆ ಮಾಡಲಾಗಿದೆ. ರಾಜ್ಯ ಮಟ್ಟದಲ್ಲಿ ಈ ಸಮಿತಿಗೆ ಸರ್ಕಾರ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷರಾಗಿರುತ್ತಾರೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

English summary
Even after implementing several programs to make children come to school, 82,713 children dropped out of school this year. says data released by the department of public instructions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X