ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸಭಾ ಚುನಾವಣೆಗೆ 82 ಸಾವಿರ ಪೊಲೀಸರ ನಿಯೋಜನೆ

By Nayana
|
Google Oneindia Kannada News

ಬೆಂಗಳೂರು, ಮೇ 11: ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಎಲ್ಲ ರೀತಿಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನ ನಿರ್ಭೀತಿಯಿಂದ ಮತದಾನ ಮಾಡಲು ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು ಎಂದು ಹೇಳಿದರು.

ಮೇ 12ರಂದು ಶನಿವಾರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಇರುವ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾನದ ವೇಳೆ ಒಟ್ಟು 82,157 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ನಿಯೋಜನೆ. ನೆರೆ ರಾಜ್ಯಗಳಿಂದ 7,500 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಭದ್ರತೆಗೆ ಆಗಮಿಸಿದ್ದಾರೆ. ಅವರನ್ನು ಗಡಿಭಾಗದ ಮತಗಟ್ಟೆಗಳಲ್ಲಿ ನಿಯೋಜಿಸಲಾಗುವುದು ಎಂದರು.

ವೋಟರ್ ಐಡಿ ಇಲ್ಲದಿದ್ದರೆ ಈ ದಾಖಲೆ ತೋರಿಸಬಹುದುವೋಟರ್ ಐಡಿ ಇಲ್ಲದಿದ್ದರೆ ಈ ದಾಖಲೆ ತೋರಿಸಬಹುದು

49,566 ರೌಡಿ ವ್ಯಕ್ತಿಗಳ ವಶಕ್ಕೆ ಪಡೆದು ಎಚ್ಚರಿಕೆ. ಅದರಲ್ಲಿ ಸಾಕಷ್ಟು ಜನರನ್ನು ಬಂದಿಸಿ ಜೈಲಿಗೆ ಕಳುಹಿಲಾಗಿದೆ. ಚುನಾವಣಾ ಅಧಿಕಾರಿಗಳ ಜತೆ ನಗದು ಸೇರಿ 166 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಜನವರಿಯಿಂದಲೇ ಚುನಾವಣಾ ಪೂರ್ವ ತಯಾರಿ ನಡೆಸಲಾಗುತ್ತಿದೆ. ಸಾಕಷ್ಟು ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಂಘರ್ಷಗಳು, ಮತೀಯ ಗಲಭೆಗಳು ನಡೆಯದ ರೀತಿಯಲ್ಲಿ ಕಾನೂನು ವ್ಯವಸ್ಥೆ ಕಾಪಾಡಬೇಕಿದೆ.

82k police deployed to assembly poll security

ದಕ್ಷಿಣ ಕನ್ನಡದ ನಕ್ಸಲ್ ಪೀಡಿತ ಮತಗಟ್ಟೆಗಳ ಮೇಲೆ ಹದ್ದಿನ ಕಣ್ಣುದಕ್ಷಿಣ ಕನ್ನಡದ ನಕ್ಸಲ್ ಪೀಡಿತ ಮತಗಟ್ಟೆಗಳ ಮೇಲೆ ಹದ್ದಿನ ಕಣ್ಣು

ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಚತ್ತೀಸ್‌ಘಡದಿಂದ ಪೊಲೀಸ್‌ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಡಿಸಿಪಿ, ಸಬ್‌ಇನ್‌ ಸ್ಪೆಕ್ಟರ್, ಫಾರೆಸ್ಟ್ ಗಾರ್ಡಸ್‌, ಪ್ಯಾರಾ ಮಿಲಿಟರಿ ಸೇರಿ ಒಟ್ಟು 82,157 ಪೊಲೀಸ್‌ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಕಾನೂನು ವ್ಯವಸ್ಥೆ ಹತೋಟಿಯಲ್ಲಿದೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆವಹಿಸಲಾಗುತ್ತದೆ ಎಂದರು. ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್‌ ಮಹಾ ನಿದೇರ್ಶಕ ಕಮಲ್‌ ಪಂತ್ ಇದ್ದರು.

English summary
Including para military forces, 82,135 police personnel have been deployed to assembly election security in the state. Para military force was deployed to strong rooms and polling stations, DGP Neelamani N Raju told reporters.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X