82ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಅನಾವರಣ!
ರಾಯಚೂರು, ಸೆ.30 : ರಾಯಚೂರಿನಲ್ಲಿ ನಡೆಯಲಿರುವ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನನ್ನು ಗುರುವಾರ(ಸೆ.29)ರಂದು ಅನಾವರಣ ಗೊಳಿಸಲಾಯಿತು.
82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಸಚಿವರು, ಸಾಹಿತ್ಯ ಸಮ್ಮೇಳನಕ್ಕೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 4 ಕೋಟಿ ರುಗಳನ್ನು ನೀಡಿದ್ದು, ಇನ್ನೊಂದು ವಾರದಲ್ಲಿ ಸಮ್ಮೇಳನದ ಅಧ್ಯಕ್ಷರ ಹೆಸರನ್ನು ಘೋಷಿಸಲಾಗುವುದು ಎಂದು ಪ್ರೌಢ ಮತ್ತು ಪ್ರಾಥಮಿಕ ಸಚಿವ ತನ್ವೀರ್ ಸೇಠ್ ಹೇಳಿದರು.
ಡಿಸೆಂಬರ್ 2,3 ಮತ್ತು 4ರಂದು ರಾಯಚೂಚೂರಿನ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.












Click it and Unblock the Notifications