ಕರ್ನಾಟಕ; ವಿವಿಧ ಜೈಲುಗಳ 83 ಕೈದಿಗಳಿಗೆ ಕೋವಿಡ್ ಸೋಂಕು

ಬೆಂಗಳೂರು, ಸೆಪ್ಟೆಂಬರ್ 28: ಕರ್ನಾಟಕದ ವಿವಿಧ ಜೈಲುಗಳಲ್ಲಿನ 83 ಕೈದಿಗಳಿಗೆ ಕೋವಿಡ್ ಸೋಂಕು ತಗುಲಿದೆ ಎಂದು ಕರ್ನಾಟಕ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಆಸ್ಪತ್ರೆ ಮತ್ತು ಕೋವಿಡ್ ಆರೈಕೆ ಕೇಂದ್ರದಲ್ಲಿ ಕೈದಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಅಮೋಲ್ ಕಾಳೆ ಸಲ್ಲಿಸಿದ್ದ ಪಿಎಲ್‌ಎಲ್ ವಿಚಾರಣೆ ವೇಳೆ ಸರ್ಕಾರ ನ್ಯಾಯಾಲಯಕ್ಕೆ ಈ ಮಾಹಿತಿ ನೀಡಿದೆ. ಜೈಲುಗಳಲ್ಲಿ ಕೋವಿಡ್ ಹರಡದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ಪೀಠ ಸರ್ಕಾರಕ್ಕೆ ಸೂಚನೆ ನೀಡಿದೆ.

ರಾಜ್ಯದ 47 ವಿವಿಧ ಕಾರಾಗೃಹಗಳ 83 ಕೈದಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಆಸ್ಪತ್ರೆ ಮತ್ತು ಕೋವಿಡ್ ಕೇರ್‌ ಸೆಂಟರ್‌ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ತಗುಲಿದ 668 ಕೈದಿಗಳಲ್ಲಿ 585 ಮಂದಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ಸರ್ಕಾರ ಹೇಳಿದೆ.

ಕಾರಾಗೃಹಗಳಲ್ಲಿ ವಿಶೇಷ ಐಸೊಲೇಷನ್ ವಾರ್ಡ್ ಸಿದ್ಧಪಡಿಸಲಾಗಿದೆ. ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ಸಹ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜೈಲಿಗೆ ವಿಚಾರಣಾಧೀನ ಕೈದಿಗಳನ್ನು ಕರೆತರುವ ಮುನ್ನ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.

ಕೋವಿಡ್ ಪರೀಕ್ಷೆ ಕಡ್ಡಾಯ

ಕೋವಿಡ್ ಪರೀಕ್ಷೆ ಕಡ್ಡಾಯ

ವಿಚರಣಾಧೀನ ಕೈದಿಗಳನ್ನು ಜೈಲಿಗೆ ಕರೆತರುವ ಮುನ್ನ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಒಂದು ವೇಳೆ ವರದಿ ಪಾಸಿಟಿವ್ ಬಂದರೆ ಅವರಿಗೆ ಆಸ್ಪತ್ರೆ, ಜೈಲಿನ ಕೋವಿಡ್ ಕೇರ್ ಸೆಂಟರ್‌ನಲ್ಲಿಯೇ ಚಿಕಿತ್ಸೆ ನೀಡಲಾಗುತ್ತದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ವಿಶೇಷ ವಾರ್ಡ್‌ ಸ್ಥಾಪನೆ

ವಿಶೇಷ ವಾರ್ಡ್‌ ಸ್ಥಾಪನೆ

ಕಾರಾಗೃಹಗಳಲ್ಲಿ ವಿಶೇಷ ಐಸೊಲೇಷನ್ ವಾರ್ಡ್ ಸಿದ್ಧಪಡಿಸಲಾಗಿದೆ. ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ಸಹ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜೈಲಿಗೆ ವಿಚಾರಣಾಧೀನ ಕೈದಿಗಳನ್ನು ಕರೆತರುವ ಮುನ್ನ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.

ಕೈದಿಗಳ ಸಂಖ್ಯೆ ಕಡಿಮೆ

ಕೈದಿಗಳ ಸಂಖ್ಯೆ ಕಡಿಮೆ

ಕೇಂದ್ರ ಸರ್ಕಾರದ ಸೂಚನೆಯಂತೆ ಜೈಲುಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡಲಾಗಿದೆ. ಮಾರ್ಚ್ 23ರಂದು ಜೈಲುಗಳ ಸಾಮರ್ಥ್ಯಕ್ಕೆ ಹೋಲಿಕೆ ಮಾಡಿದರೆ ಶೇ 110 ಇದ್ದ ಕೈದಿಗಳ ಸಂಖ್ಯೆಯನ್ನು 97.7ಕ್ಕೆ ಇಳಿಸಲಾಗಿದೆ ಎಂದು ಸರ್ಕಾರ ವಿವರಣೆ ನೀಡಿದೆ.

ಯಾವ ಜೈಲಿನಲ್ಲಿ ಎಷ್ಟು?

ಯಾವ ಜೈಲಿನಲ್ಲಿ ಎಷ್ಟು?

ಪರಪ್ಪನ ಅಗ್ರಹಾರ ಜೈಲಿನಲ್ಲಿ 5203 ಕೈದಿಗಳಿದ್ದು 320 ಕೋವಿಡ್ ಪ್ರಕರಣ ದಾಖಲಾಗಿತ್ತು. ಜೈಲಿನಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 17. ಮೈಸೂರು 64, ಕಲಬುರಗಿ 43, ಬೆಳಗಾವಿ 37, ಬಳ್ಳಾರಿ 29 ಮತ್ತು ವಿಜಯಪುರದಲ್ಲಿ 19 ಕೈದಿಗಳಿಗೆ ಸೋಂಕು ತಗುಲಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+