ಬೆಂಗಳೂರಿಗರೇ ಎಚ್ಚರ: ಒಂದೇ ದಿನ 526 ಮಂದಿಗೆ ಕೊರೊನಾ!

ಬೆಂಗಳೂರು, ಮಾರ್ಚ್.12: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಟ್ಟಹಾಸ ಕ್ರಮೇಣ ರಾಜ್ಯದಲ್ಲಿ ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಪ್ರತಿನಿತ್ಯ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಒಂದೇ ದಿನ 526 ಮಂದಿಗೆ ಕೊರೊನಾವೈರಸ್ ತಲುಲಿರುವುದು ಗೊತ್ತಾಗಿದೆ.

ಕರ್ನಾಟಕದಲ್ಲಿ ಒಂದೇ ದಿನ 833 ಜನರಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 958417ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಒಂದೇ ದಿನ 545 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 937898 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ ಒಂದೇ ದಿನ ಐವರು ಬಲಿಯಾಗಿದ್ದು, ಸಾವಿನ ಸಂಖ್ಯೆ 12386ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 8114 ಸಕ್ರಿಯ ಪ್ರಕರಣಗಳಿರುವುದು ತಿಳಿದು ಬಂದಿದೆ.

 833 New Coronavirus Cases Reported in Karnataka Today, State Tally Rise to 958417

ರಾಜ್ಯದಲ್ಲಿ ಜಿಲ್ಲಾವಾರು ಕೊರೊನಾವೈರಸ್:

ರಾಜ್ಯದಲ್ಲಿ ಒಟ್ಟು 833 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 8, ಬಳ್ಳಾರಿ 17, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು 526, ಬೀದರ್ 19, ಚಾಮರಾಜನಗರ 1, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 3, ಚಿತ್ರದುರ್ಗ 1, ದಕ್ಷಿಣ ಕನ್ನಡ 35, ದಾವಣಗೆರೆ 0, ಧಾರವಾಡ 6, ಗದಗ 1, ಹಾಸನ 13, ಹಾವೇರಿ 0, ಕಲಬುರಗಿ 38, ಕೊಡಗು 3, ಕೋಲಾರ 30, ಕೊಪ್ಪಳ 0, ಮಂಡ್ಯ 2, ಮೈಸೂರು 30, ರಾಯಚೂರು 1, ರಾಮನಗರ 2, ಶಿವಮೊಗ್ಗ 3, ತುಮಕೂರು 36, ಉಡುಪಿ 11, ಉತ್ತರ ಕನ್ನಡ 15, ವಿಜಯಪುರ 8, ಯಾದಗಿರಿ 3 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

      ಯಡಿಯುರಪ್ಪನೆ ಲಸಿಕೆ ಹಾಕಿಸಿ ಕೊಂಡ ಮೇಲೆ tension ಯಾಕೆ? | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+