ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 83ನೇ ಕನ್ನಡ ಸಾಹಿತ್ಯ ಸಮ್ಮೇಳನ!

Written By: Ramesh
Subscribe to Oneindia Kannada

ಬೆಂಗಳೂರು, ಡಿಸೆಂಬರ್. 04 : ಭತ್ತದ ಕಣಜ ರಾಯಚೂರಿನಲ್ಲಿ ನಡೆಯುತ್ತಿರುವ83ನೇ ಮೂರು ದಿನಗಳ ಅಕ್ಷರ ಜಾತ್ರೆಗೆ ಭಾನವಾರ ತೆರೆ ಬೀಳಲಿದೆ. 83ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಸಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಂಡಿದೆ.

ಕಸಾಪ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಪರಿಷತ್‌ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಮುಂದಿನ 83ನೇ ಸಮ್ಮೇಳನವನ್ನು ತಮ್ಮ ಜಿಲ್ಲೆಯಲ್ಲಿ ನಡೆಸಬೇಕೆಂದು ಮೈಸೂರು, ಧಾರವಾಡ, ಚಿಕ್ಕಮಗಳೂರು, ಉತ್ತರ ಕನ್ನಡ, ಚಿಕ್ಕಬಳ್ಳಾಪುರ ಜಿಲ್ಲೆಯ ನಡೆಸಬೇಕೆಂದು ಆಯಾ ಜಿಲ್ಲಾ ಕಸಾಪ ಅಧ್ಯಕ್ಷರು ಪಟ್ಟು ಹಿಡಿದಿದ್ದರು.

83rd Akhila Bharata Kannada Sahitya Sammelana In Mysuru

ಇದರಿಂದ ಮತದಾನದ ವಿಷಯ ಪ್ರಸ್ತಾಪವಾಯಿತು. ಆದರೆ, ಮತದಾನಕ್ಕೆ ವಿರೋಧಿಸಿದರು. ಇನ್ನು ಧಾರವಾಡದಲ್ಲಿಯೇ ಮುಂದಿನ ಸಮ್ಮೇಳನ ನಡೆಸಬೇಕು ಎಂದು ಧಾರವಾಡ ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗರಾಜ ಅಂಗಡಿ ಪಟ್ಟುಹಿಡಿದಿದ್ದರು.

ನಂತರ ಮತದಾನ ಕೈಬಿಟ್ಟು ಕಾರ್ಯಕಾರಿ ಸಮಿತಿ ಸದಸ್ಯರ ವೈಯಕ್ತಿಕ ಅಭಿಪ್ರಾಯ ಕೇಳಲಾಯಿತು.

ಅಭಿಪ್ರಾಯ ಸಮಯದಲ್ಲಿ ಹಲವು ಜಿಲ್ಲೆಗಳ ಹೆಸರು ಪ್ರಸ್ತಾಪಕ್ಕೆ ಬಂದವು. ಮುಕ್ತವಾಗಿ ಚರ್ಚಿಸಲಾಯಿತು. ಅಂತಿಮವಾಗಿ ಮೈಸೂರಿನಲ್ಲಿ ಮುಂದಿನ ಸಮ್ಮೇಳನ ನಡೆಸಲು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು' ಎಂದು ಮನು ಬಳಿಗಾರ್ ತಿಳಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The 83rd Akhila Bharata Kannada Sahitya Sammelan will be held in mysuru said Sahitya Parishat president Manu Baligar on Saturday, in Raichur.
Please Wait while comments are loading...