841 ಎಕರೆ ಭೂಸ್ವಾಧೀನಕ್ಕೆ ವಿರೋಧ: ಕೋಟಿ.. ಕೋಟಿ ಕೊಟ್ಟರೂ ಬೇಡ ಎಂದ ರೈತರು...!
land Acquisition: ಕರ್ನಾಟಕದ ಪ್ರಮುಖ ಯೋಜನೆಗಳಲ್ಲಿ ಒಂದಾಗಿರುವ ಹಾಗೂ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಭೂಸ್ವಾಧೀನಕ್ಕೆ ಭಾರೀ ಹಿನ್ನಡೆ ಎದುರಾಗಿದೆ. ರಾಮನಗರ ಹಾಗೂ ಚನ್ನಪಟ್ಟಣ ಸೇರಿದಂತೆ ವಿವಿಧ ಭಾಗದಲ್ಲಿ ಸರ್ಕಾರಿ ಯೋಜನೆಗೆ ಭೂಸ್ವಾಧೀನ ಮಾಡಿಕೊಳ್ಳುವುದಕ್ಕೆ ಭಾರೀ ಹಿನ್ನಡೆ ಎದುರಾಗಿದೆ. ಈ ಭಾಗದಲ್ಲಿ ಭೂಮಿಗೆ ಬಂಗಾರದ ಬೆಲೆ ಬಂದರೂ, ಭೂಮಿ ಮಾರಾಟ ಮಾಡುವುದಕ್ಕೆ ರೈತರು ಒಪ್ಪುತ್ತಿಲ್ಲ. ರಾಜ್ಯ ಸರ್ಕಾರವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ ಎಂದು ಜನ ಗರಂ ಆಗಿದ್ದಾರೆ. ಇಲ್ಲಿನ ಪಾಳ್ಯ, ಹರಳೂರು, ಪೋಲನಹಳ್ಳಿ, ನಲ್ಲೂರು, ಮಲ್ಲೇಪುರ, ನಲ್ಲಪ್ಪನಹಳ್ಳಿ, ಚೀಮಾಚನಹಳ್ಳಿ ಹಾಗೂ ಮುದ್ದೇನಹಳ್ಳಿ ಗ್ರಾಮಗಳಲ್ಲಿ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯಪತ್ರವನ್ನು ಹೊರಡಿಸಿದೆ.
ಚನ್ನರಾಯಪಟ್ಟಣದ ಹೋಬಳಿ ವ್ಯಾಪ್ತಿಯಲ್ಲಿ ಕೈಗಾರಿಕೆ ಉದ್ದೇಶಕ್ಕಾಗಿ 8 ಗ್ರಾಮಗಳ ವ್ಯಾಪ್ತಿಯಲ್ಲಿ 841 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ. ಆದರೆ, ಇದಕ್ಕೆ ಇಲ್ಲಿನ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಇಲ್ಲಿ ಕೃಷಿ ಪ್ರಧಾನ ಭೂಮಿ ಇದೆ. ಅಲ್ಲದೇ ಫಲವತ್ತಾದ ಭೂಮಿಯನ್ನು ಯಾವುದೇ ಕಾರಣಕ್ಕೂ ನಾವು ಭೂಸ್ವಾಧೀನ ಮಾಡಿಕೊಳ್ಳುವುದಕ್ಕೆ ಬಿಡುವುದಿಲ್ಲ ಎಂದು ಇಲ್ಲಿನ ರೈತರು ಹೇಳಿದ್ದಾರೆ. ಕೈಗಾರಿಕೆ ಉದ್ದೇಶಕ್ಕಾಗಿ ಕೃಷಿ ಭೂಮಿಯನ್ನು ಬಳಸಿಕೊಳ್ಳಬಾರದು ಎನ್ನುವ ಆಗ್ರಹ ಕೇಳಿ ಬಂದಿದೆ. ಎಂಟು ಗ್ರಾಮಗಳಲ್ಲಿ ಅಂದಾಜು 841 ಎಕರೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಇದರ ಬೆನ್ನಲ್ಲೇ ಈ ಭಾಗದಲ್ಲಿ ಆಕ್ರೋಶ ಹೆಚ್ಚಾಗಿದೆ.

ರಾಜ್ಯ ಸರ್ಕಾರವು ಬಿಡದಿ ಟೌನ್‌ಶಿಪ್ ಭಾಗವಾಗಿ ಬೆಂಗಳೂರಿಗೆ ಪರ್ಯಾಯವಾಗಿ ಉಪನಗರಗಳನ್ನು ಅಭಿವೃದ್ಧಿ ಮಾಡುವುದಕ್ಕೆ ಮುಂದಾಗಿದೆ. ಅಲ್ಲದೇ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಮೆಟ್ರೋ ಅಭಿವೃದ್ಧಿ, ಉಪನಗರ, ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕೈಗಾರಿಕೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಮುಂದಾಗಿದೆ. ಕೆಲವೊಂದು ಪ್ರಮುಖ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ಹಾಗೂ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿದೆ. ವಿವಿಧ ಭಾಗದಲ್ಲಿ ಭೂಮಿಗೆ ಕೋಟ್ಯಾಂತರ ರೂಪಾಯಿ ಬೆಲೆ ಬಂದರೂ, ಭೂಮಿ ಮಾರಾಟ ಮಾಡುವುದಕ್ಕೆ ರೈತರು ಮುಂದಾಗುತ್ತಿಲ್ಲ.
ಅದೇ ರೀತಿ ಇದೀಗ ಚನ್ನಪಟ್ಟಣದಲ್ಲೂ ರೈತರು ಸರ್ಕಾರದ ಭೂಸ್ವಾಧೀನ ಅಧಿಸೂಚನೆಗೆ ಗರಂ ಆಗಿದ್ದಾರೆ. ಚನ್ನಪಟ್ಟಣದ 13 ಹಳ್ಳಿಗಳಲ್ಲಿ 1,777 ಎಕರೆ ಭೂಸ್ವಾಧೀನ ಮಾಡಿಕೊಳ್ಳುವುದನ್ನು ವಿರೋಧಿಸಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಒಂದಲ್ಲ ಎರಡಲ್ಲ ನಾಲ್ಕು ವರ್ಷದಿಂದ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ನಡೆದಿದೆ. ಆದರೆ, ಇದನ್ನು ಕೈಬಿಡುವುದಾಗಿ ಹೇಳಿದ್ದ ಸರ್ಕಾರವು ಇದೀಗ ಅಧಿಸೂಚನೆ ಹೊರಡಿಸಿದೆ ಎಂದು ಇಲ್ಲಿನ ರೈತರು ಆಕ್ರೋಶ ಹೊರ ಹಾಕಿದ್ದಾರೆ.
ಶೇ 80ರಷ್ಟು ರೈತರಿಂದ ವಿರೋಧ: ಇನ್ನು ಈ ಭಾಗದಲ್ಲಿ ಕೈಗಾರಿಕಾ ಯೋಜನೆಗಳಿಗೆ ಭೂಸ್ವಾಧೀನ ಮಾಡಿಕೊಳ್ಳುವುದಕ್ಕೆ ರಾಜ್ಯ ಸರ್ಕಾರ ಮುಂದಾದಗಲೇ ಶೇ 80ರಷ್ಟು ರೈತರು ಭೂಮಿ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಲಿಖಿತವಾಗಿ ಭೂಸ್ವಾಧೀನಕ್ಕೆ ತಮ್ಮ ಅನುಮತಿ ಇಲ್ಲ ಎಂದು ಹೇಳಿದ್ದಾರೆ.












Click it and Unblock the Notifications