ಕರ್ನಾಟಕ 8580, ಬೆಂಗಳೂರೊಂದರಲ್ಲೇ 3284 ಕೊರೊನಾ ಸೋಂಕಿತರು ಪತ್ತೆ
ಬೆಂಗಳೂರು, ಆಗಸ್ಟ್ 26:ಕರ್ನಾಟಕದ ಮತ್ತೆ 8580 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಬೆಂಗಳೂರು ಒಂದರಲ್ಲೇ 3284 ಪ್ರಕರಣಗಳು ದೃಢಪಟ್ಟಿವೆ.
Recommended Video
ಒಂದೇ ದಿನ 133 ಮಂದಿ ಸಾವನ್ನಪ್ಪಿದ್ದು, 7249 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಇದುವರೆಗೆ 211688 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 5091 ಮಂದಿ ಸಾವನ್ನಪ್ಪಿದ್ದಾರೆ. 83608 ಸಕ್ರಿಯ ಪ್ರಕರಣಗಳಿವೆ, ಒಟ್ಟು 300406 ಮಂದಿ ಕೊರೊನಾ ಸೋಂಕಿತರಿದ್ದಾರೆ.

760 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಗಲಕೋಟೆಯಲ್ಲಿ 154, ಬಳ್ಳಾರಿ 510, ಬೆಳಗಾವಿ 289, ಬೆಂಗಳೂರು ಗ್ರಾಮಾಂತರ 136, ಬೆಂಗಳೂರು ನಗರ 3234, ಬೀದರ್ 42, ಚಾಮರಾಜನಗರ 51, ಚಿಕ್ಕಬಳ್ಳಾಪುರ 87, ಚಿಕ್ಕಮಗಳೂರು 97, ಚಿತ್ರದುರ್ಗ 78, ದಕ್ಷಿಣ ಕನ್ನಡ 314, ದಾವಣಗೆರೆ 233, ಧಾರವಾಡ 255, ಗದಗ 124, ಹಾಸನ 154, ಹಾವೇರಿ 164, ಕಲಬುರಗಿ 180, ಕೊಡಗು 26, ಕೋಲಾರ 88, ಕೊಪ್ಪಳ 158, ಮಂಡ್ಯ 155, ಮೈಸೂರು 951, ರಾಯಚೂರು 136, ರಾಮನಗರ 47, ಶಿವಮೊಗ್ಗ 166, ತುಮಕೂರು 88, ಉಡುಪಿ 251, ಉತ್ತರ ಕನ್ನಡ 129, ವಿಜಯಪುರ 131, ಯಾದಗಿರಿಯಲ್ಲಿ 102 ಪ್ರಕರಣಗಳು ಪತ್ತೆಯಾಗಿವೆ.
ಕೊರೊನಾವೈರಸ್ ಸೋಂಕಿನ ಅಟ್ಟಹಾಸವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗುಣಮುಖ ಪ್ರಕರಣಗಳು ಹೆಚ್ಚಾಗುವುತ್ತಿರುವುದು ಒಂದು ಕಡೆಯಾದರೆ ಸಾವಿನ ಸಂಖ್ಯೆಯಲ್ಲೂ ಏರಿಕೆ ಕಂಡು ಬರುತ್ತಿದೆ. ಕಳೆದ 24 ಗಂಟೆಗಳಲ್ಲೇ ಮಹಾಮಾರಿಗೆ 1059 ಜನರು ಪ್ರಾಣ ಬಿಟ್ಟಿದ್ದಾರೆ.
ದೇಶದಲ್ಲಿ ಕೊರೊನಾವೈರಸ್ ಸೋಂಕಿಗೆ ಬಲಿಯಾದವರ ಸಂಖ್ಯೆಯು 59449ಕ್ಕೆ ಏರಿಕೆಯಾಗಿದೆ. ಒಂದೇ ದಿನ 67151 ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 3234475ಕ್ಕೆ ಏರಿಕೆಯಾಗಿದೆ.












Click it and Unblock the Notifications