ಕರ್ನಾಟಕದಲ್ಲಿ ಒಂದೇ ದಿನ 10949 ಕೊವಿಡ್-19 ಸೋಂಕಿತರು ಗುಣಮುಖ

ಬೆಂಗಳೂರು, ಸಪ್ಟೆಂಬರ್.18: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 5 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ 8626 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಖಾತ್ರಿಯಾಗಿದೆ.

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 502982ಕ್ಕೆ ಏರಿಕೆಯಾಗಿದೆ. ಕೊರೊನಾವೈರಸ್ ಸೋಂಕಿಗೆ ಒಂದೇ ದಿನ 179 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 7808ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಕೊರೊನಾವೈರಸ್ ಒಟ್ಟು 502982 ಸೋಂಕಿತ ಪ್ರಕರಣಗಳ ಪೈಕಿ 394026 ಸೋಂಕಿತರು ಗುಣಮುಖರಾಗಿದ್ದಾರೆ. 101129 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ. ಕಳೆದ 24 ಗಂಟೆಗಳಲ್ಲಿ 10949 ಕೊವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

8626 New Coronavirus Cases Reported in Karnataka Today, State Tally Rise to 502982

ಕರ್ನಾಟಕದಲ್ಲಿ ಎಷ್ಟು ಮಂದಿಗೆ ಕೊರೊನಾವೈರಸ್ ತಪಾಸಣೆ?:

ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 21368 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 36102 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 57470 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 4115783 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.

ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಎಷ್ಟು ಕೊರೊನಾವೈರಸ್ ಕೇಸ್?:

ರಾಜ್ಯದಲ್ಲಿ ಒಟ್ಟು 8626 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 206, ಬಳ್ಳಾರಿ 296, ಬೆಳಗಾವಿ 221, ಬೆಂಗಳೂರು ಗ್ರಾಮಾಂತರ 112, ಬೆಂಗಳೂರು 3623, ಬೀದರ್ 46, ಚಾಮರಾಜನಗರ 67, ಚಿಕ್ಕಬಳ್ಳಾಪುರ 63, ಚಿಕ್ಕಮಗಳೂರು 109, ಚಿತ್ರದುರ್ಗ 141, ದಕ್ಷಿಣ ಕನ್ನಡ 456, ದಾವಣಗೆರೆ 146, ಧಾರವಾಡ 135, ಗದಗ 31, ಹಾಸನ 173, ಹಾವೇರಿ 116, ಕಲಬುರಗಿ 179, ಕೊಡಗು 44, ಕೋಲಾರ 63, ಕೊಪ್ಪಳ 176, ಮಂಡ್ಯ 69, ಮೈಸೂರು 600, ರಾಯಚೂರು 116, ರಾಮನಗರ 70, ಶಿವಮೊಗ್ಗ 257, ತುಮಕೂರು 208, ಉಡುಪಿ 493, ಉತ್ತರ ಕನ್ನಡ 181, ವಿಜಯಪುರ 86, ಯಾದಗಿರಿ 143 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

      ಏನು ಇಲ್ಲ ನಮ್ ಕೈಯಲ್ಲಿ ,ಎಲ್ಲಾ ದೊಡ್ಡೋರು decide ಮಾಡ್ಬೇಕು | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+