ಕರ್ನಾಟಕದಲ್ಲಿ ಹೊಸದಾಗಿ 8778 ಮಂದಿಗೆ ಕೊರೊನಾ ಸೋಂಕು
ಬೆಂಗಳೂರು, ಏಪ್ರಿಲ್ 13: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಇಂದು 8778 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಮವಾರಕ್ಕೆ ಹೋಲಿಸಿದರೆ ಸ್ವಲ್ಪ ಕಡಿಮೆಯಾದಂತಾಗಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 10,83,647ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 67 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 13,008ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇಂದು 6,079 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,92,003ಕ್ಕೆ ಏರಿಕೆಯಾಗಿದೆ. ಇನ್ನು 75,985 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 474 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 5,500 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,93,869ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 55 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.












Click it and Unblock the Notifications