ಕರ್ನಾಟಕದಲ್ಲಿ ಇಂದು 8,793 ಹೊಸ ಕೋವಿಡ್ ಪ್ರಕರಣ

ಬೆಂಗಳೂರು, ಅಕ್ಟೋಬರ್ 02: ಕರ್ನಾಟಕದಲ್ಲಿ 8,793 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 6,20,630ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇಂದು 125 ಜನರು ರಾಜ್ಯದಲ್ಲಿ ಮೃತಪಟ್ಟಿದ್ದಾರೆ. ಒಟ್ಟು ಮೃತಪಟ್ಟವರ ಸಂಖ್ಯೆ 9,119.

7094 ಜನರು ಶುಕ್ರವಾರ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಒಟ್ಟು 4,99,506 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,11,968.

8793 New COVID Cases In Karnataka On October 2

ಕರ್ನಾಟಕದಲ್ಲಿ ಇಂದು 92,059 ಮಾದರಿಗಳ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದೆ. ಇದುವರೆಗೂ 50,89,730 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ. ಕಳೆದ ವಾರ ಕೋವಿಡ್ ಪರೀಕ್ಷೆಗಳ ಸಂಖ್ಯೆ ಕಡಿಮೆಯಾಗಿತ್ತು. ಈ ವಾರ ಪುನಃ ಹೆಚ್ಚಳ ಮಾಡಲಾಗಿದೆ.

ಬೆಂಗಳೂರು ನಗರದಲ್ಲಿ ಇಂದು 4,259 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. ನಗರದ ಒಟ್ಟು ಸೋಂಕಿತರ ಸಂಖ್ಯೆ 2,41,775. ಸಕ್ರಿಯ ಪ್ರಕರಣಗಳು 51,389. ಇದುವರೆಗೂ ನಗರದಲ್ಲಿ 3024 ಜನರು ಮೃತಪಟ್ಟಿದ್ದಾರೆ.

ಯಾವ ಜಿಲ್ಲೆ ಎಷ್ಟು? : ಶುಕ್ರವಾರ ಬಳ್ಳಾರಿಯಲ್ಲಿ 262, ಬೆಂಗಳೂರು ಗ್ರಾಮಾಂತರ 298, ದಕ್ಷಿಣ ಕನ್ನಡದಲ್ಲಿ 322, ದಾವಣಗೆರೆಯಲ್ಲಿ 225, ಹಾಸನದಲ್ಲಿ 315, ಶಿವಮೊಗ್ಗದಲ್ಲಿ 307 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+